ಸಮಾಜವಾದಿ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಜನತಾ ಪಕ್ಷದ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಎನ್.ನಾಗೇಶ್ ಆರೋಪಿಸಿದ್ದಾರೆ.

ಬೆಂಗಳೂರು (ಮೇ.1): ಸಮಾಜವಾದಿ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಜನತಾ ಪಕ್ಷದ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಎನ್.ನಾಗೇಶ್ ಆರೋಪಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಕಾಂತರಾಜ ಆಯೋಗದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ವರದಿ ಮುಂದಿಟ್ಟುಕೊಂಡು ಸಮಾಜದ ಒಗ್ಗಟ್ಟು ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಆಯೋಗದ ವರದಿ ಬಗ್ಗೆ ಪ್ರಬಲ ಸಮುದಾಯಗಳು ಆಕ್ಷೇಪಿಸುತ್ತಿವೆ. ಮನೆ ಮನೆ ಸರ್ವೇ ಸರಿಯಾಗಿ ನಡೆಸಿಲ್ಲ. ಹೀಗಾಗಿ, ಯಾವುದೇ ಕಾರಣಕ್ಕೂ ಈ ವರದಿ ಜಾರಿಗೆ ಸರ್ಕಾರ ಮುಂದಾಗಬಾರದು ಎಂದರು.

ಕಾಂತರಾಜ ಆಯೋಗದ ವರದಿ ಸೋರಿಕೆ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. 2015ರ ಸಮೀಕ್ಷೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪಗಳಿವೆ. ಹವಾನಿಯಂತ್ರಿತ ಕೊಠಡಿಯಲ್ಲಿ ಕೂತು ವರದಿ ತಯಾರಿಸಲಾಗಿದೆ ಎಂಬ ಆರೋಪಗಳಿವೆ. ಇಂಥ ವರದಿ ಜಾರಿ ಮಾಡಬಾರದು. ಒಂದು ವೇಳೆ ಜಾರಿಗೆ ಮುಂದಾದರೆ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯರನ್ನು ಪಕ್ಷದಲ್ಲಿ ಏಕೆ ಇಟ್ಟುಕೊಂಡಿದ್ದೀರಿ?: ಕೆ.ಎಸ್.ಈಶ್ವರಪ್ಪ

ನ್ಯಾ.ನಾಗಮೋಹನ ದಾಸ್ ಅವರ ಕಾರ್ಯದ ಬಗ್ಗೆ ಅಪಾರ ಗೌರವವಿದೆ. ಆದರೆ ಸರ್ಕಾರ ಹಲವು ಆಯೋಗಗಳಿಗೆ ಅವರನ್ನು ನೇಮಿಸಿದ್ದು ಸರಿಯಲ್ಲ. ಹಲವು ಮಂದಿ ನಿವೃತ್ತ ನ್ಯಾಯಮೂರ್ತಿಗಳು ಇದ್ದಾರೆ. ಅವರ ಅನುಭವಗಳನ್ನು ಬಳಸಿಕೊಳ್ಳಬೇಕಾಗಿತ್ತು. ಈ ವಿಚಾರವನ್ನು ರಾಜ್ಯಪಾಲರ ಗಮನಕ್ಕೆ ತರಲಾಗುವುದು ಎಂದರು.