ರಾಜ್ಯಪಾಲರ ಅಧಿಕಾರಕ್ಕೆ ಕೊಕ್: ಸಂಪುಟ ನಿರ್ಣಯ

ಸಭೆಯಲ್ಲಿ ಒಟ್ಟು 8 ವಿಧೇಯಕಗಳನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆಯಲು ನಿರ್ಧರಿಸಿದ್ದು, ಇದರಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ-2024ಕ್ಕೆ ಸಹ ಸರ್ಕಾರ ಅಂಗೀಕಾರ ಪಡೆದಿದೆ. ಇದರಡಿ ವಿಧೇಯಕದ ತಿದ್ದುಪಡಿ ಮೂಲಕ ಗದ ಗದ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಕುಲಾ ಧಿಪತಿಗಳನ್ನಾಗಿ ರಾಜ್ಯಪಾಲರ ಬದಲಿಗೆ ಸಿಎಂ ನೇಮಿಸಲು ತೀರ್ಮಾನಿಸಲಾಗಿದೆ. 

Siddaramaiahs government revoked the Governor's powers in Karnataka grg

ಬೆಂಗಳೂರು(ನ.29):  ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಸ್ಥಾನವನ್ನು ರಾಜ್ಯಪಾಲರಿಂದ ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 

ಸಭೆಯಲ್ಲಿ ಒಟ್ಟು 8 ವಿಧೇಯಕಗಳನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆಯಲು ನಿರ್ಧರಿಸಿದ್ದು, ಇದರಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ-2024ಕ್ಕೆ ಸಹ ಸರ್ಕಾರ ಅಂಗೀಕಾರ ಪಡೆದಿದೆ. ಇದರಡಿ ವಿಧೇಯಕದ ತಿದ್ದುಪಡಿ ಮೂಲಕ ಗದ ಗದ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಕುಲಾ ಧಿಪತಿಗಳನ್ನಾಗಿ ರಾಜ್ಯಪಾಲರ ಬದಲಿಗೆ ಸಿಎಂ ನೇಮಿಸಲು ತೀರ್ಮಾನಿಸಲಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ ಉಭಯ ಸದನಗಳಲ್ಲಿ ಅಂಗೀಕಾರ ಪಡೆಯಲಿದ್ದು, ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳುಹಿಸಲಾಗುವುದು. 

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್‌ ದೂರು

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಮತ್ತಷ್ಟು ಸಕ್ರಿಯವಾಗಿ ವಿಶ್ವವಿದ್ಯಾಲಯವನ್ನು ಮುನ್ನಡೆಸಲು ಈ ತೀರ್ಮಾನ ಮಾಡಲಾಗಿದೆ. ಗುಜರಾತ್‌ನಲ್ಲೂ ಈ ಮಾದರಿ ಅನುಸರಿಸಲಾಗಿದೆ. ಇದರಲ್ಲಿ ಬೇರೆ ಯಾವುದೇ ಉದ್ದೇಶವಿಲ್ಲ. ಇನ್ನು ಮುಂದೆ ಕುಲಾಧಿಪತಿಗಳ ಎಲ್ಲಾ ನಿರ್ಣಯಗಳನ್ನು ರಾಜ್ಯಪಾಲರ ಬದಲಾಗಿ ಸಿಎಂ ನಿರ್ವಹಿಸುತ್ತಾರೆ ಎಂದರು. 

ಈ ವಿಧೇಯಕಕ್ಕೂ ರಾಜ್ಯಪಾಲರ ಅಂಗೀಕಾರ ಬೇಕೆ? ಎಂಬ ಪ್ರಶ್ನೆಗೆ, ಯಾವುದೇ ವಿಧೇಯಕ ಮಂಡಿಸಿದರೂ ರಾಜ ಪಾಲರ ಅಂಗೀಕಾರ ಬೇಕು. ಇದನ್ನೂ ಅಂಗೀಕಾರಕ್ಕೆ ಕಳು ಹಿಸುತ್ತೇವೆ. ಮುಂದೆ ನೋಡೋಣ ಎಂದು ಉತ್ತರಿಸಿದರು. ಚಾಣಕ್ಯ ವಿವಿ ನಿಯಮ ತಿದ್ದುಪಡಿ: ಚಾಣಕ್ಯ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ-2024 ಮಂಡನೆಗೂ ನಿರ್ಧಾರ ಮಾಡಲಾಗಿದೆ. ಈವರೆಗೆ ಎಲ್ಲಾ ಖಾಸಗಿ ವಿಶ್ವವಿದ್ಯಾಲಯಗಳಿಗೆ ಸರ್ಕಾರದ ಪ್ರತಿನಿಧಿ ಒಬ್ಬರನ್ನು ನೇಮಕ ಮಾಡಲಾಗುತ್ತಿತ್ತು. ಆದರೆ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಇದರಿಂದ ವಿನಾಯಿತಿ ನೀಡಲಾಗಿತ್ತು. ಇದನ್ನು ತಿದ್ದುಪಡಿ ಮಾಡಿ ಚಾಣಕ್ಯ ವಿವಿಗೂ ಸರ್ಕಾರದ ಪ್ರತಿನಿಧಿ ನೇಮಿಸಲು ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. 

ಕಾರ್ಮಿಕ ಕಲ್ಯಾಣ ನಿಧಿ ವಂತಿಗೆ ಹೆಚ್ಚಳ: 

ಕಾರ್ಮಿಕ ಕಲ್ಯಾಣ ನಿಧಿಗೆ ಸಂಗ್ರಹಿಸಲಾಗುತ್ತಿರುವ ವಂತಿಗೆಯನ್ನು ಹೆಚ್ಚಿಸುವ ಸಂಬಂಧ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ 2024ನ್ನು ಮಂಡಿಸಲು ನಿರ್ಧರಿಸಲಾಗಿದೆ. ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಕಾರ್ಮಿಕ ಕಲ್ಯಾಣ ನಿಧಿಗೆ ಪ್ರತಿ ಕಾರ್ಮಿಕರಿಂದ ವಾರ್ಷಿಕ 420, ಮಾಲೀಕರಿಂದ ೬ 40 ಹಾಗೂ ಸರ್ಕಾರದಿಂದ 20 ವಂತಿಗೆ ನೀಡಲಾಗುತ್ತಿತ್ತು. ಅದನ್ನು ಹೆಚ್ಚಿಸಿ ಕಾರ್ಮಿಕರಿಂದ ಮತ್ತು ಸರ್ಕಾರದಿಂದ ತಲಾ 250 ಹಾಗೂ ಮಾಲೀಕರಿಂದ 100 ಸಂಗ್ರಹಿಸುವ ಕುರಿತು ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ವಿಧೇಯಕಕ್ಕೆ ತಿದ್ದುಪಡಿ ತರಲಾಗುತ್ತಿದ್ದು, ಅದನ್ನು ಅಧಿವೇಶನದಲ್ಲಿ ಮಂಡಿಸಲಾಗುತ್ತಿದೆ. ಈ ತಿದ್ದುಪಡಿಯಿಂದ ಸರ್ಕಾರಕ್ಕೆ ₹15.81 ಕೋಟಿ ಹೆಚ್ಚುವರಿ ವೆಚ್ಚವಾಗಲಿದ್ದು, ಕಲ್ಯಾಣ ನಿಧಿ ಸಂಗ್ರಹ 200 ಕೋಟಿಗಳಷ್ಟಾಗಲಿದೆ ಎಂದು ಸಚಿವ ಎಚ್. ಪಾಟೀಲ್ ತಿಳಿಸಿದ್ದಾರೆ.

ಮುಡಾ ತೀರ್ಪು ರಾಜಕೀಯ ಪ್ರೇರಿತ ಹೇಳಿಕೆ: ಜಮೀರ್‌ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ಗೌರ್ನರ್‌ ಸೂಚನೆ

ಕೊಳವೆಬಾವಿ ತೆಗೆದು ಮುಚ್ಚದಿದ್ದರೆ ಜೈಲು ಶಿಕ್ಷೆ 

ಕೊಳವೆಬಾವಿ ಕೊರೆದು ಸೂಕ್ತ ರೀತಿಯಲ್ಲಿ ಮುಚ್ಚದ ಕಾರಣದಿಂದ ಉಂಟಾಗುತ್ತಿರುವ ಅವಘಡವನ್ನು ತಪ್ಪಿಸಲು ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ, ನಿವರ್ಹಣಾ ನಿಯಂತ್ರಣ) ತಿದ್ದುಪಡಿ ವಿಧೇಯಕ-2024 ಮಂಡನೆಗೆ ಸಂಪುಟದಲ್ಲಿ ನಿರ್ಧರಿಸಲಾಘಿದೆ. 

ಇದರಡಿ ಕಾರ್ಯನಿರ್ವಹಿಸದ ಅಥವಾ ಸ್ಥಗಿತಗೊಂಡ ಕೊಳವೆಬಾವಿಯನ್ನು ಮುಚ್ಚದಿದ್ದರೆ ಅಂತಹವರಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸುವುದು ಹಾಗೂ ಕೊಳವೆಬಾವಿ ಕೊರೆದ ಸಂಸ್ಥೆಯ ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ದಂಡ ವಿಧಿಸುವ ನಿಯಮವನ್ನು ಸೇರಿಸಲಾಗುವುದು. ಜತೆಗೆ ಅನುಮತಿ ಇಲ್ಲದ ಪ್ರದೇಶಗಳಲ್ಲಿ ಅಂತರ್ಜಲ ಉಪಯೋಗಿಸುವವರಿಗೆ 25 ಸಾವಿರ ದಂಡ ಮತ್ತು 3 ತಿಂಗಳು ಜೈಲು ಶಿಕ್ಷೆ ವಿಧಿಸುವ ಅಂಶಗಳನ್ನು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.

Latest Videos
Follow Us:
Download App:
  • android
  • ios