ಸೌಜನ್ಯ ಕೊಲೆ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆ ಹೆಸರು ಕೆಡಿಸುವ ಹುನ್ನಾರ: ಸಿದ್ದಸೇನ ಮುನಿಮಹಾರಾಜ
ಸೌಜನ್ಯ ಕೊಲೆ ಪ್ರಕರಣ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೆಸರು ಕೆಡಿಸುವ ಹುನ್ನಾರ ನಡೆದಿದೆ ಎಂದು ಹಲಗಾ -ಬಸ್ತವಾಡ ಆಶ್ರಮದ ಬಾಲಾಚಾರ್ಯ ಸಿದ್ದಸೇನ ಮಹಾರಾಜ ಆರೋಪಿಸಿದರು.
ಬೆಳಗಾವಿ (ಆ.03): ಸೌಜನ್ಯ ಕೊಲೆ ಪ್ರಕರಣ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೆಸರು ಕೆಡಿಸುವ ಹುನ್ನಾರ ನಡೆದಿದೆ ಎಂದು ಹಲಗಾ -ಬಸ್ತವಾಡ ಆಶ್ರಮದ ಬಾಲಾಚಾರ್ಯ ಸಿದ್ದಸೇನ ಮಹಾರಾಜ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು. ಮೃತ ವಿದ್ಯಾರ್ಥಿನಿ ಸೌಜನ್ಯ ನಮ್ಮ ತಂಗಿ, ತಾಯಿಯ ಸಮಾನ, ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆ ಹೆಸರು ಕೆಡಿಸುವ ಹುನ್ನಾರ ನಡೆದಿದೆ. ಸೌಜನ್ಯ ಹತ್ಯೆಯಾಗಿ 10 ವರ್ಷಗಳೇ ಕಳೆದಿವೆ. ಆದರೂ ಆಕೆಯ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ. ಪ್ರಕರಣದ ತನಿಖಾಧಿಕಾರಿಗಳು ನಿಜವಾದ ಆರೋಪಿಗಳಿಗೆ ಶಿಕ್ಷೆ ಕೊಡಿಸಬೇಕು. ಈ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ತಿಳಿಸಿದರು.
ಹೆಗ್ಗಡೆಯವರ ಮೇಲಿನ ಅಪಪ್ರಚಾರ ಸಲ್ಲದು: ಸೌಜನ್ಯ ಹತ್ಯೆ ಪ್ರಕರಣ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಅಪಪ್ರಚಾರ ಮಾಡುವ ಕಾರ್ಯ ನಡೆಯುತ್ತಿರುವುದು ಖಂಡನಾರ್ಹ ಎಂದು ವರೂರಿನ ನವಗ್ರಹ ತೀರ್ಥಕ್ಷೇತ್ರದ ಜೈನಮುನಿ ಗುಣಧರನಂದಿ ಶ್ರೀಗಳು ಹೇಳಿದರು. ನಗರದಲ್ಲಿಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಶಾಂತಿಯ ತೋಟ. ಆದರೆ, ಇಂತಹ ರಾಜ್ಯದಲ್ಲಿ ಹಿಂಸಾ ಕೃತ್ಯ ನಡೆಯುತ್ತಿರುವುದು ತೀವ್ರ ಆತಂಕಕಾರಿ ಸಂಗತಿ. ಅಹಿಂಸಾ ತತ್ವದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ ಎಂಬುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದರು.
ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು: ಆರಗ ಹೇಳಿಕೆಗೆ ಪ್ರಿಯಾಂಕ್ ತಿರುಗೇಟು
ಕಳೆದ ಕೆಲ ವರ್ಷಗಳ ಹಿಂದೆ ಸೌಜನ್ಯ ಹತ್ಯೆ ಘಟನೆ ನಮ್ಮ ಮನಸ್ಸಿಗೆ ಬಹಳ ನೋವಾಗಿದೆ. ಪೊಲೀಸರು ಹತ್ಯೆ ಮಾಡಿದ ಆರೋಪಿಯನ್ನು ಬಂಧಿಸಿ ಅವನಿಗೆ ಕಾನೂನಿನ ಮೂಲಕ ಶಿಕ್ಷೆ ವಿಧಿಸಲಿ. ಹಾಗೆಯೇ ಅವರ ಮನಃ ಪರಿವರ್ತನೆಯಾಗುವ ಕಾರ್ಯವಾಗಬೇಕಿದೆ. ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕು. ಆದರೆ, ಈ ವಿಷಯವನ್ನಿಟ್ಟುಕೊಂಡು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಯಾರೇ ಆಗಲಿ ಅಪಪ್ರಚಾರ ಮಾಡಿದರೆ ನಾವು ಸಹಿಸುವುದಿಲ್ಲ. ಹೆಗ್ಗಡೆ ಅವರು ಅಪರಾಧಿಯಾಗಿದ್ದರೆ ಕಾನೂನಿನ ಮೂಲಕ ಶಿಕ್ಷೆಯಾಗಲಿ. ವಿಚಾರಣೆಗಾಗಿ ಅದಕ್ಕೆ ಅದರದೇ ಆದ ತನಿಖಾ ಸಂಸ್ಥೆ ಇದೆ.
ಚೆನ್ನೈನಲ್ಲಿನ ಅಮೆರಿಕ ರಾಯಭಾರ ಕಚೇರಿ ಕಾನ್ಸಲ್ ಜನರಲ್ ಆಗಿ ಕ್ರಿಸ್ಟೋಫರ್ ಹಾಡ್ಜಸ್
ನಮಗೆ ಗೃಹ ಸಚಿವರು, ಪೊಲೀಸರು ಮೇಲೆ ನಂಬಿಕೆ ಇದೆ. ಒಳ್ಳೆ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ. ಅವರ ಮೇಲೆ ಸಂಪೂರ್ಣ ನಂಬಿಕೆಯಿದೆ. ಸೌಜನ್ಯಗೆ ನ್ಯಾಯ ಸಿಗಬೇಕು, ಆದರೆ, ಮುಖವಾಡ ಹೊತ್ತು ಧರ್ಮಾಧಿಕಾರಿಗಳ ಬಗ್ಗೆ ಅಪಪ್ರಚಾರ ಮಾಡಬಾರದು. ಧರ್ಮಸ್ಥಳಕ್ಕೆ ಎಲ್ಲ ಧರ್ಮದವರು ಹೋಗುತ್ತಾರೆ. ಅನ್ನ ದಾಸೋಹ ಮಾಡಿದ ಮಠದ ಬಗ್ಗೆ ಅಪಪ್ರಚಾರ ಮಾಡುವುದು ಸರಿಯಲ್ಲ. ಪದೇ ಪದೆ ಅಪಪ್ರಚಾರ ಮಾಡಿ ಹೆಗ್ಗಡೆ ಅವರಿಗೆ ಮಾನಸಿಕ ಹಿಂಸೆ ಕೊಡುತ್ತಿದ್ದು, ಇದು ಒಂದು ರೀತಿಯ ಹಿಂಸೆಯಾಗಿದೆ. ದೇಹದ ನೋವಿಗಿಂತ ಮನಸ್ಸಿಗೆ ಆಗುವ ನೋವು ಹೆಚ್ಚು ನೋವು ಕೊಡುತ್ತದೆ. ಆಧಾರ ರಹಿತವಾಗಿ ಆರೋಪ ಮಾಡುವುದು ಸರಿಯಲ್ಲ. ಈ ರೀತಿಯಾಗಿ ಪದೇ ಪದೆ ಆರೋಪ ಮಾಡುವುದು ಕೂಡ ಮಾನಸಿಕ ಹಿಂಸೆಯಾಗಿದೆ.