ಬಸವಲಿಂಗ ಶ್ರೀಗಳ ನೇತೃತ್ವದಲ್ಲಿ ಸಿದ್ದೇಶ್ವರ ಶ್ರೀಗಳ ಅಸ್ಥಿ ವಿಸರ್ಜನೆ: ಕೂಡಲಸಂಗಮದಲ್ಲಿ ಭಕ್ತರ ದಂಡು

ನಡೆದಾಡುವ ದೇವರೆಂದೇ ಖ್ಯಾತಿ ಗಳಿಸಿದ್ದ ಶ್ರೀ ಸಿದ್ದೇಶ್ವರ ಶ್ರೀಗಳ ಚಿತಾಭಸ್ಮವನ್ನು ಮಠಾಧೀಶರ ಸಮ್ಮುಖದಲ್ಲಿ ಕೃಷ್ಣಾ, ಘಟಪ್ರಭಾ, ಮಲಫ್ರಭಾ ನದಿಗಳ ಸಂಗಮ ತಾಣ ಕೂಡಲ ಸಂಗಮದಲ್ಲಿ ವಿಸರ್ಜನೆ ಮಾಡಲಾಯಿತು. 

siddheshwar swamiji chitabhasma disposal in kudalasangama gvd

ಬಾಗಲಕೋಟೆ (ಜ.08): ನಡೆದಾಡುವ ದೇವರೆಂದೇ ಖ್ಯಾತಿ ಗಳಿಸಿದ್ದ ಶ್ರೀ ಸಿದ್ದೇಶ್ವರ ಶ್ರೀಗಳ ಚಿತಾಭಸ್ಮವನ್ನು ಮಠಾಧೀಶರ ಸಮ್ಮುಖದಲ್ಲಿ ಕೃಷ್ಣಾ, ಘಟಪ್ರಭಾ, ಮಲಫ್ರಭಾ ನದಿಗಳ ಸಂಗಮ ತಾಣ ಕೂಡಲ ಸಂಗಮದಲ್ಲಿ ವಿಸರ್ಜನೆ ಮಾಡಲಾಯಿತು. ತ್ರಿವೇಣಿ ಸಂಗಮ ಕೂಡಲ ಸಂಗಮದ ನದಿಯಲ್ಲಿ ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ವಿಸರ್ಜನೆ ಕಾರ್ಯಕ್ರಮವು ಜ್ಞಾನ ಯೋಗಾಶ್ರಮದ ಬಸವಲಿಂಗ ಶ್ರೀಗಳ ನೇತೃತ್ವ ಹಾಗೂ ಮಠಾಧೀಶರ ಸಮ್ಮುಖದಲ್ಲಿ ನಡೆದಿದ್ದು, ಕೂಡಲಸಂಗಮಕ್ಕೆ ಭಕ್ತರ ದಂಡು ಆಗಮಿಸಿತ್ತು. 

ಚಿತಾಭಸ್ಮ ವಿಸರ್ಜನೆ ಬಳಿಕ ಮಾತನಾಡಿದ ಬಸವಲಿಂಗ ಸ್ವಾಮೀಜಿ, ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ನದಿಯಲ್ಲಿ ಬಿಡಲಾಗಿದೆ. ಮೊದಲಿನಿಂದಲೂ ಶ್ರೀಗಳು ಕೂಡಲಸಂಗಮ ಜೊತೆ ಒಳ್ಳೆಯ ನಂಟು ಹೊಂದಿದ್ದರು. ಅವರ ಆಶಯದಂತೆ ನದಿಯಲ್ಲಿ ಚಿತಾಭಸ್ಮ ಬಿಡಲಾಗಿದೆ. ಸಂಜೆ ಗೋಕರ್ಣದಲ್ಲಿ ಚಿತಾಭಸ್ಮ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಶ್ರೀಗಳ ಕಾರ್ಯದಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದ್ದಾರೆ. ಚಿತಾಭಸ್ಮ ವಿಸರ್ಜನೆ ಕಾರ್ಯದಲ್ಲಿ ಭಾಗಿಯಾದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದರು.

ಪಠ್ಯದಲ್ಲಿ ಸಿದ್ದೇಶ್ವರ ಶ್ರೀಗಳ ಜೀವನಗಾಥೆ?: ವಿವೇಕಾನಂದರ ನಂತ್ರ ಹೆಚ್ಚು ಪ್ರಭಾವಿಸಿದವರು ಶ್ರೀಗಳು

ಭಕ್ತರಿಗಿಲ್ಲ ಸ್ವಾಮೀಜಿಗಳ ಚಿತಾಭಸ್ಮ: ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಚಿತಾಭಸ್ಮವನ್ನು ಭಕ್ತರಿಗೆ ನೀಡಲಾಗುತ್ತಿದೆ ಎಂದು ಹೇಳಲಾಗಿತ್ತು. ಅಂತ್ಯಕ್ರಿಯೆ ವೇಳೆ ಕನ್ಹೇರಿ ಮಠದ ಸ್ವಾಮೀಜಿಗಳು ಭಸ್ಮ ನೀಡುವುದಾಗಿ ಹೇಳಿದ್ದರು. ಆದರೆ, ಸಿದ್ಧೇಶ್ವರ ಸ್ವಾಮೀಜಿಗಳ ಚಿತಾಭಸ್ಮವನ್ನು ಯಾರು ನದಿ ಹಾಗೂ ಸಾಗರದಲ್ಲಿ ವಿಸರ್ಜನೆ ಮಾಡಲು ಇಚ್ಛೆ ಪಡುತ್ತಾರೋ ಅವರು ಹೆಸರು ನೋಂದಾಯಿಸಲು ಹೇಳಿದ್ದರು. ಆದರೆ ನಾಡಿನ ಇತರೆ ಸ್ವಾಮೀಜಿಗಳೊಂದಿಗೆ ಚರ್ಚೆ ಮಾಡಿದ ನಂತರ ಯಾವುದೇ ಭಕ್ತರಿಗೆ ಸಿದ್ದೇಶ್ವರ ಶ್ರೀಗಳ ಚಿತಾಭಸ್ಮವನ್ನು ನೀಡಲಾಗಲ್ಲ ಎಂದು ಜ್ಞಾನ ಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಹೇಳಿದ್ದಾರೆ.

Vijayapura: ಆಶ್ರಮದಲ್ಲೇ ತಾಯಿಗೆ ಪೂಜೆ ಸಲ್ಲಿಸಿದ್ದ ಸಿದ್ದೇಶ್ವರ ಶ್ರೀ!

ವಿಭೂತಿಯನ್ನೇ ಭಸ್ಮವೆಂದು ಭಾವಿಸಿ: ಸಿದ್ದೇಶ್ವರ ಸ್ವಾಮೀಜಿಗಳ ಅಣತಿಯಂತೆ ನಾವು ಯಾವುದೇ ಚಿತಾಭಸ್ಮವನ್ನು ನೀಡಲ್ಲ. ಭಕ್ತರು ಬೇಕಾದರೆ ಹೊರಗಿನಿಂದ ವಿಭೂತಿಯನ್ನು ತಂದು ಅಂತ್ಯಕ್ರಿಯೆ ನಡೆಸಿದ ಜಾಗದಲ್ಲಿಟ್ಟು ಅದನ್ನೇ ಭಸ್ಮವೆಂದು ಭಾವಿಸಿ ಒಯ್ಯಬೇಕು. ಚಿತಾ ಭಸ್ಮವನ್ನು ಯಾವ ನದಿ ಸಮುದ್ರದಲ್ಲಿ ವಿಸರ್ಜನೆ ಮಾಡಬೇಕೆಂದು ನಿರ್ಧಾರ ಮಾಡಲಾಗಿದೆ. ಆಶ್ರಮದಲ್ಲಿರುವ ನಾವೆಲ್ಲ ಸ್ವಾಮೀಜಿಗಳು ಸೇರಿ ಕನ್ಹೇರಿ ಮಠದ ಶ್ರೀಗಳು ಹಾಗೂ ಸುತ್ತೂರು ಮಠದ ಶ್ರೀಗಳು ಸೇರಿದಂತೆ ಇತರ ಸ್ವಾಮೀಜಿಗಳ ಸಲಹೆಗಳನ್ನು ಪಡೆದುಕೊಂಡು ಅಸ್ಥಿ ವಿಸರ್ಜನೆಯ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜ್ಞಾನ ಯೋಗಾಶ್ರಮದಲ್ಲಿ ಆಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ತಿಳಿಸಿದರು.

Latest Videos
Follow Us:
Download App:
  • android
  • ios