ಒಂದೇ ರೀತಿಯ ದೂರುಗಳ ಮೂರು ಮೇಲ್‌ಗಳಲ್ಲಿ ಪುನರಾವರ್ತನೆಯಾಗುತ್ತಿದ್ದವು. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಒಂದೇ ಐಡಿ
ಬೆಂಗಳೂರು(ಡಿ.29): ಮುಖ್ಯಮಂತ್ರಿಗಳ ಕಚೇರಿಗೆ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು cm.kar@nic.in ಇ-ಮೇಲ್ ಐಡಿ ಮಾತ್ರ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.
ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಈ ವರೆಗೂ ಮೂರು ಸಕ್ರಿಯ ಇ-ಮೇಲ್‌ಗಳ ಮೂಲಕ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿತ್ತು. ಒಂದೇ ರೀತಿಯ ದೂರುಗಳ ಮೂರು ಮೇಲ್‌ಗಳಲ್ಲಿ ಪುನರಾವರ್ತನೆಯಾಗುತ್ತಿದ್ದವು.
'ನಿಮ್ಮ ತಂದೆ ಕಾಂಗ್ರೆಸ್ ಶಾಲು ಹಾಕಿ ರಾಜಕೀಯಕ್ಕೆ ಬಂದ್ರು'
ಜೊತೆಗೆ, ಅನಗತ್ಯ ಗೊಂದಲ ಉಂಟಾಗುತ್ತಿತ್ತು. ಹಾಗಾಗಿ ಒಂದೇ ಇ-ಮೇಲ್ ಐಡಿ ಬಳಕೆ ಮಾಡಲು ನಿರ್ಧರಿಸಿರುವುದಾಗಿ ತಿಳಿಸಲಾಗಿದೆ. ಅಹವಾಲು ಮತ್ತು ಇತರ ಸಂವಹನವನ್ನು ್ಚಞ.ka್ಟಃ್ಞಜ್ಚಿ.ಜ್ಞಿ ಮೇಲ್ ಐಡಿ ಮೂಲಕವೇ ಮಾಡುವಂತೆ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನವನ್ನು ಬರುವ ಜ.18ರಂದು ನಡೆಸುವ ಬಗ್ಗೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಆದರೆ, ಅಧಿವೇಶನದ ದಿನಾಂಕದ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಂಪುಟ ಸಭೆಯ ನಂತರ ಸಚಿವರೊಬ್ಬರು ಮಾಹಿತಿ ನೀಡಿದರು.
ವಿಧಾನಮಂಡಲದ ವರ್ಷದ ಮೊದಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ವಿ.ಆರ್.ವಾಲಾ ಅವರು ಭಾಷಣ ಮಾಡಲಿದ್ದಾರೆ. ಬಹುತೇಕ ಜ.18ರಂದು ವಿಧಾನಮಂಡಲದ ಜಂಟಿ ಅಧಿವೇಶನ ಕರೆಯುವ ಸಾಧ್ಯತೆಯಿದೆ ಎಂದು ತಿಳಿಸಿದರು.
