Asianet Suvarna News Asianet Suvarna News

ಗೃಹ ಸಚಿವರು ಸಮುದಾಯ ನೋಡಿ ಕೇಸು ಹಾಕಲು ಸೂಚನೆ ಕೊಟ್ಟಿದ್ದಾರೆ; ಮಾಜಿ ಸಿಎಂ ಬೊಮ್ಮಾಯಿ ಆರೋಪ

ಹಾವೇರಿ ಗ್ಯಾಂಗ್‌ ರೇಪ್‌ ಆರೋಪಿಗಳು ಸೇರಿದಂತೆ ಅಪರಾಧ ಕೃತ್ಯಗಳ ಬಗ್ಗೆ ಗೃಹ ಸಚಿವರು ಸಮುದಾಯ ನೋಡಿ ಕೇಸು ಹಾಕಲು ಮಾರ್ಗಸೂಚಿ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

SIT form for Haveri and other gangrape cases investigation Basavaraj Bommai demand sat
Author
First Published Jan 13, 2024, 5:38 PM IST

ಬೆಂಗಳೂರು (ಜ.12): ಹಾವೇರಿ ಸೇರಿ ವಿವಿಧ ಜಿಲ್ಲೆಗಳ ಪೊಲೀಸರಿಂದ ಸ್ಥಳೀಯ ಅತ್ಯಾಚಾರ ಸಂತ್ರಸ್ತರಿಗೆ ನ್ಯಾಯ ಸಿಗುವುದಿಲ್ಲ. ಆದ್ದರಿಂದ ರಾಜ್ಯದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ (ಗ್ಯಾಂಗ್ ರೇಪ್) ತನಿಖೆಗೆ ಉನ್ನತ ಮಟ್ಟದ ವಿಶೇಷ ತನಿಖಾ ತಂಡ (Special Investigation Team- SIT) ರಚಿಸಬೇಕು ಎಂದು  ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಆಗ್ರಹಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ಮಾಡಿಸಿ; ನಿಗದಿತ ಕಾಲಾವಧಿಯಲ್ಲಿ ತನಿಖೆ ಮಾಡಿ ಚಾರ್ಜ್ ಶೀಟ್ ಹಾಕಿ ಉಗ್ರವಾದ ಶಿಕ್ಷೆ ಆಗುವಂತೆ ನೋಡಿಕೊಳ್ಳಿ ಎಂದು ಒತ್ತಾಯಿಸಿದರು. 3 ಜನರ ಬಂಧನವಷ್ಟೇ ಆಗಿದೆ. ಎಲ್ಲರನ್ನೂ ಬಂಧಿಸಿಲ್ಲವೇಕೆ ಎಂದು ಕೇಳಿದರು. ನಾಳೆ ನಮ್ಮ ಮಹಿಳಾ ನಿಯೋಗ ಹಾವೇರಿಗೆ ಭೇಟಿ ಕೊಡಲಿದೆ. ಸೂಕ್ತ ನಿರ್ದೇಶನ ಕೋರಿ ನ್ಯಾಯಾಂಗದ ಮೊರೆ ಹೋಗಲಿದ್ದೇವೆ ಎಂದು ಪ್ರಕಟಿಸಿದರು.

ಬಿಗ್‌ಬಾಸ್ 'ಟಿಕೆಟ್ ಟು ಫಿನಾಲೆ' ಟಾಸ್ಕ್‌ನಲ್ಲಿ ಮಹಾ ಮೋಸ; ಜಸ್ಟೀಸ್ ಫಾರ್ ಡ್ರೋನ್ ಪ್ರತಾಪ್ ಅಭಿಯಾನ ಆರಂಭ!

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಾಮಾನ್ಯ ಜನರು ಅದರಲ್ಲೂ ಹೆಣ್ಮಕ್ಕಳು ನಿರ್ಭೀತಿಯಿಂದ ಓಡಾಡಲು ಸಾಧ್ಯವಾಗುತ್ತಿಲ್ಲ. ಎಲ್ಲ ಹೆಣ್ಮಕ್ಕಳು ಆತಂಕದಿಂದ ಓಡಾಡುವಂತಾಗಿದೆ. ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬೆಂಗಳೂರು ಒಂದರಲ್ಲೇ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಶೇ.30ರಷ್ಟು ಹೆಚ್ಚಾಗಿವೆ.ಅತ್ಯಾಚಾರ, ಕಿರುಕುಳ, ಹಿಂಸಾಚಾರ ಹೆಚ್ಚಾಗಿದೆ. ಗ್ರಾಮಾಂತರದಲ್ಲೂ ಮಹಿಳೆಯರು ಸುರಕ್ಷಿತವಾಗಿಲ್ಲ. ಇಂಥ ಹಲವಾರು ಪ್ರಕರಣಗಳನ್ನು ಮುಚ್ಚಿಹಾಕುತ್ತಿದ್ದಾರೆ. ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಕೆಲಸ ಮಾಡಿದರೆ ಅವರ ಮೇಲೆ ಸರಕಾರದ ವಕ್ರದೃಷ್ಟಿ ಕಾಡುತ್ತಿದೆ ಎಂದರು.

ಬೆಳಗಾವಿಯಲ್ಲಿ ಅಧಿವೇಶನ ನಡೆಯುವಾಗಲೇ ವಿಧಾನಸೌಧದ ಅತ್ಯಂತ ಹತ್ತಿರ ಇರುವ ಒಬ್ಬ ಹೆಣ್ಮಗಳನ್ನು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿದ್ದು ಈ ಸರಕಾರದ ಮತ್ತು ಪೊಲೀಸ್ ಇಲಾಖೆ ಮೇಲೆ ಭಯ ಇಲ್ಲದ್ದನ್ನು ತೋರಿಸಿತ್ತು. ಸಾರ್ವಜನಿಕರು ತಮ್ಮ ರಕ್ಷಣೆ ಬಗ್ಗೆ ಭಯಪಡುವ ಸ್ಥಿತಿ ಉಂಟಾಗಿತ್ತು. ಕೇವಲ ಆಸ್ಪತ್ರೆಗೆ ಹೋಗಿ ನೋಡಿದರೆ ಮುಗಿಯಿತೇ? ಸರಿಯಾದ ತನಿಖೆ ಆಗಿಲ್ಲ. ಹಲವರ ಬಂಧನವಾಗಿಲ್ಲ. ದಲಿತ ಮಹಿಳೆಗೆ ಹೀಗಾದರೂ ಮುಖ್ಯಮಂತ್ರಿಗಳಿಂದ ಕ್ರಮ ಇಲ್ಲ ಎಂದು ದೂರಿದರು.

ಹೈದರಾಬಾದ್‌ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ; 2 ಕೋಟಿ ಮೌಲ್ಯದ ಸಾಮಗ್ರಿ ವಶ

ಗೃಹ ಸಚಿವರೇ ನೀವು 'ಸಮುದಾಯ ನೋಡಿ ಕೇಸು ಹಾಕುವಂತೆ ಸ್ಟಾಂಡರ್ಡ್ ಇನ್‍ಸ್ಟ್ರಕ್ಷನ್ ಕೊಟ್ಟಿದ್ದೀರಾ?' ಎಂದು ಪ್ರಶ್ನಿಸಿದರು. ಹಾವೇರಿಯಲ್ಲಿ ನಮ್ಮನ್ನು ಯಾರೂ ಮುಟ್ಟುವುದಿಲ್ಲ ಎಂಬ ಪರಿಸ್ಥಿತಿ ಕೆಲವು ವರ್ಗದ್ದಾಗಿದೆ. ಹಲವೆಡೆ ನೈತಿಕ ಪೊಲೀಸ್‍ಗಿರಿ ನಡೆದಿದೆ. ಶಿರಸಿಯ ಒಬ್ಬ ಹೆಣ್ಮಗಳು ಮತ್ತು ಬೇಕಾದವರು ಹಾನಗಲ್‍ನಲ್ಲಿ ಹೋಟೆಲ್‍ನಲ್ಲಿ ಇದ್ದರೆ ಅಕ್ಕಿಆಲೂರಿನ ಯುವಕರು ಇಬ್ಬರನ್ನೂ ಥಳಿಸಿ ಅವಳ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ. ಪೊಲೀಸರು ಇದನ್ನು ಮುಚ್ಚಿ ಹಾಕಲು ಮುಂದಾಗಿದ್ದರು ಎಂದು ತಿಳಿಸಿದರು.

ಪೊಲೀಸರು ಮೊಂಡುವಾದವನ್ನೇ ಮಾಡುತ್ತಿದ್ದರು. ವೈದ್ಯಕೀಯ ಪರೀಕ್ಷೆಗಾಗಿ ನಾನು ಒತ್ತಾಯಿಸಿದೆ. ಇವರು ಯಾರನ್ನು ರಕ್ಷಿಸಲು ಹೊರಟಿದ್ದರು? ಬೇರೆ ಕೋಮಿಗೊಂದು ನೀತಿ ಇದೆಯೇ? ಇದರ ಹಿಂದೆ ಯಾರ ಚಿತಾವಣೆ ಇದೆ? ಒತ್ತಡ ಯಾರದ್ದು ಎಂದು ಕೇಳಿದರು. ಅಲ್ಪಸಂಖ್ಯಾತ ಹೆಣ್ಮಗಳ ಮೇಲೆ ಅತ್ಯಾಚಾರ ಆಗಿದ್ದರೂ ಗೃಹ ಸಚಿವರು ಸಮರ್ಪಕ ಕ್ರಮಕ್ಕೆ ಮುಂದಾಗಿಲ್ಲ. ಪ್ರಭಾವಿಗಳ ಬಗ್ಗೆ ಇವರ ಕಾಳಜಿ ಇದೆ. ಗ್ರಾಮೀಣ ಪೊಲೀಸ್ ಸ್ಟೇಷನ್‍ಗಳು ಕಲೆಕ್ಷನ್ ಅಡ್ಡಾ ಆಗಿ ಪರಿವರ್ತನೆಗೊಂಡಿವೆ. ಕೆಲವೆಡೆ ಪೊಲೀಸ್ ಇನ್‍ಸ್ಪೆಕ್ಟರ್‍ಗಳು ಇಸ್ಪೇಟ್, ಮದ್ಯದ ದಂಧೆಗೆ ಪ್ರೋತ್ಸಾಹ ಕೊಡುತ್ತಿದ್ದಾರೆ. ಕಾಂಗ್ರೆಸ್ ಸ್ಥಳೀಯ ನಾಯಕರ ಬೆಂಬಲದಿಂದ ಪುಡಿ ರೌಡಿಗಳು ಪುನಃ ಇಸ್ಪೇಟ್ ಕ್ಲಬ್, ಜೂಜು ಆರಂಭಿಸಿದ್ದಾರೆ ಎಂದರು.

Follow Us:
Download App:
  • android
  • ios