Asianet Suvarna News Asianet Suvarna News

ಬಿಜೆಪಿ ಅವಧಿಯ ಕೋವಿಡ್ ಅಕ್ರಮ ಎಸ್‌ಐಟಿ ತನಿಖೆಗೆ: ಸಚಿವ ಎಚ್.ಕೆ.ಪಾಟೀಲ್

ಕೋವಿಡ್ ಅಕ್ರಮದ ಕುರಿತು ನ್ಯಾ.ಮೈಕಲ್ ಡಿ.ಕುನ್ಹಾ ನೇತೃತ್ವದ ಆಯೋಗ 11 ಸಂಪುಟಗಳ ವರದಿಯನ್ನು ಸಲ್ಲಿಕೆ ಮಾಡಿದೆ. 7,223.64 ಕೋಟಿ ರು. ಮೊತ್ತದ ವೈದ್ಯಕೀಯ ಉಪಕರಣಗಳ ಖರೀದಿಯ ಅವ್ಯವ ಹಾರದ ಕುರಿತು ತನಿಖೆ ನಡೆಸಿದೆ. ವರದಿಯಲ್ಲಿ 500 ಕೋಟಿ ರು. ಮೊತ್ತ ವಸೂಲಾತಿ ಮಾಡುವ ಕುರಿತು ಶಿಫಾರಸ್ಸು ಮಾಡಿದೆ: ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್ 

SIT to investigate BJP government Covid illegality in Karnataka Says Minister HK Patil grg
Author
First Published Oct 11, 2024, 4:23 AM IST | Last Updated Oct 11, 2024, 4:23 AM IST

ಬೆಂಗಳೂರು(ಅ.11):  ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ವೈದ್ಯಕೀಯ ಉಪಕರಣಗಳ ಖರೀದಿಯ ಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ವಿಶೇಷ ತನಿ ಖಾತಂಡ (ಎಸ್‌ಐಟಿ) ಮತ್ತು ಸಚಿವ ಸಂಪುಟದ ಉಪಸಮಿತಿ ರಚಿಸುವ ಮಹತ್ವದ ತೀರ್ಮಾನವನ್ನು ಸಚಿವ ಸಂಪುಟ ಸಭೆ ಕೈಗೊಂಡಿದೆ.

ವಿಧಾನಸೌಧದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೋವಿಡ್ ಅಕ್ರಮದ ಕುರಿತು ನ್ಯಾ.ಮೈಕಲ್ ಡಿ. ಕುನ್ಹಾ ನೇತೃತ್ವದ ಆಯೋಗದ ಮಧ್ಯಂತರ ವರದಿ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಸ್‌ಐಟಿ ತನಿಖೆ ಸುಳಿವು ನೀಡಿದ ಸಿಎಂ!

ಪ್ರಕರಣದಲ್ಲಿ ಕ್ರಿಮಿನಲ್‌ ಅಂಶಗಳಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಎಸ್‌ಐಟಿ ರಚನೆ ಮಾಡಲು ನಿರ್ಣಯಿಸಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್, ಕೋವಿಡ್ ಅಕ್ರಮದ ಕುರಿತು ನ್ಯಾ.ಮೈಕಲ್ ಡಿ.ಕುನ್ಹಾ ನೇತೃತ್ವದ ಆಯೋಗ 11 ಸಂಪುಟಗಳ ವರದಿಯನ್ನು ಸಲ್ಲಿಕೆ ಮಾಡಿದೆ. 7,223.64 ಕೋಟಿ ರು. ಮೊತ್ತದ ವೈದ್ಯಕೀಯ ಉಪಕರಣಗಳ ಖರೀದಿಯ ಅವ್ಯವ ಹಾರದ ಕುರಿತು ತನಿಖೆ ನಡೆಸಿದೆ. ವರದಿಯಲ್ಲಿ 500 ಕೋಟಿ ರು. ಮೊತ್ತ ವಸೂಲಾತಿ ಮಾಡುವ ಕುರಿತು ಶಿಫಾರಸ್ಸು ಮಾಡಿದೆ. 

ಎಸ್‌ಐಟಿ ತನಿಖೆ: 

ಕೋವಿಡ್‌ ಕುರಿತ ವರದಿ ಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಎಂಟು ವಲಯಗಳ ಪೈಕಿ ನಾಲ್ಕು ವಲಯಗಳು ಮತ್ತು ರಾಜ್ಯದ ಎಲ್ಲಾ 31 ಜಿಲ್ಲೆಗಳು ಸಲ್ಲಿಸುವುದು ಬಾಕಿಯಿದೆ. 55 ಸಾವಿರ ಕಡತಗಳನ್ನು ಸಂಬಂಧಪಟ್ಟ ಇಲಾಖೆಗಳಿಂದ ಪಡೆದು ಪರಿಶೀಲಿಸಿ ಆಯೋಗವು ವರದಿ ಸಲ್ಲಿಸಿದೆ. ಕೋವಿಡ್ ಅಕ್ರಮದಲ್ಲಿ ಕ್ರಿಮಿನಲ್ ಅಂಶಗಳು ಇರುವುದು ಕಂಡು ಬಂದಿರುವ ತನಿಖೆ ನಡೆಸಲು ಹಿನ್ನೆಲೆಯಲ್ಲಿ ಎಸ್‌ಐಟಿ ರಚಿಸಲು ನಿರ್ಧರಿಸಲಾಗಿದೆ. ಸಂಪುಟ ಉಪ ಸಮಿತಿ: ಅಲ್ಲದೇ, ಕೈಗೊಳ್ಳ ಬಹುದಾದ ಕ್ರಮಗಳ ಕುರಿತು ನಿರಂತರವಾಗಿ ಮೇಲ್ವಿಚಾರಣೆ ನಡೆಸಲು ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲು ತೀರ್ಮಾನಿ ಸಲಾಗಿದೆ ಎಂದು ಹೇಳಿದರು. 
ವರದಿಯಲ್ಲಿನ ಶಿಫಾರಸ್ಸಿನ ಮೇರೆಗೆ 500 ಕೋಟಿ ಮೊತ್ತದ ವಸೂಲಾತಿ ಕುರಿತು ಪ್ರಕ್ರಿಯೆ ಆರಂಭಿಸಲು ತೀರ್ಮಾನಿಸ ಲಾಗಿದೆ. ಕೋವಿಡ್ ವೇಳೆ ಸಾರ್ವಜನಿಕರ ಹಣದ ದುರುಪಯೋಗ ಮತ್ತು ಅಧಿಕಾರ ದುರುಪಯೋಗ ಬಗ್ಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ನೀಡಿದ ವರದಿಯನ್ನು 2023ರ ಜು.17ರಂದು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ವರದಿ ಆಧಾರದ ಮೇಲೆ ಸತ್ಯ ಸಂಶೋಧನೆ ಮಾಡಿ ವರದಿ ನೀಡಲು ನ್ಯಾ.ಮೈಕಲ್ ಡಿ.ಕುನ್ಹಾ ಆಯೋಗ ನೇಮಿಸಲಾಗಿತ್ತು ಎಂದರು.

ಸಂಪುಟ ಉಪಸಮಿತಿಗೆ ಡಿಕೆಶಿ ನೇತೃತ್ತ: 7 ಮಂದಿ ಸದಸ್ಯರು 

ನ್ಯಾ.ಮೈಕಲ್ ಡಿ.ಕುನ್ಹಾ ವಿಚಾರಣಾ ಆಯೋಗದ ವರದಿ ಪರಿ ಶೀಲಿಸಿ ಕ್ರಮ ಕೈಗೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರಚಿಸಿದ್ದಾರೆ. ಜತೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಾನೂನು ಸಚಿವ ಎಚ್.ಕೆ.ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

Latest Videos
Follow Us:
Download App:
  • android
  • ios