ಬೆಳಗಾವಿ: ಸಚಿವ ಸಂಪುಟದ ಸಭೆಗಳಿಗೆ ಸತತವಾಗಿ ಗೈರಾಗುತ್ತಿರುವ ಪೌರಾಡಳಿತ ಸಚಿವ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಈಗ ಸಂಕಷ್ಟ ಎದುರಾಗಿದೆ. ಅ.10 ರಂದು ಸಿಬ್ಬಂದಿ ಮತ್ತು ಆಡಳಿತ  ಸುಧಾರಣೆ ಇಲಾಖೆಗೆ ಪತ್ರ ಬರೆದಿರುವ ಮುಖ್ಯ ಕಾರ್ಯದರ್ಶಿಗಳ ಆಪ್ತ ಕಾರ್ಯದರ್ಶಿ ತುಕಾರಾಮ ಕಲ್ಯಾಣಕರ ಅವರು ಕ್ರಮದ ಬಗ್ಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಸಿಎಂ ಕಚೇರಿ, ರಮೇಶ್ ಜಾರಕಿಹೊಳಿ ಅವರಿಗೆ ನೋಟಿಸ್ ನೀಡಲು ಸರ್ಕಾರ ಮುಂದಾಗಿದೆ ಎಂಬ ಅರ್ಥಬರುವ ವರದಿ ಸತ್ಯಕ್ಕೆ ದೂರ ವಾದುದು. ಮುಖ್ಯಕಾರ್ಯದರ್ಶಿಯವರ ಕಚೇರಿಗೆ ಸಾರ್ವಜನಿಕರು ಸಲ್ಲಿಸಿರುವ ಅರ್ಜಿಯನ್ನು ಸ್ವೀಕರಿಸಲಾಗಿದೆಯೇ ಹೊರತು ಕ್ರಮ ಜರುಗಿಸಿಲ್ಲವೆಂದು ಹೇಳಿದೆ. 

ಸಚಿವ ಸಂಪುಟದ ಸಭೆಗಳಿಗೆ ಸತತ ಗೈರಾಗುತ್ತಿರುವ ರಮೇಶ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಅ.8 ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಒತ್ತಾಯಿಸಿದ್ದರು.