ಹಿರಿಯ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರು ಇದೀಗ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ತಮ್ಮ ಬೆಂಬಲ ಪ್ರಕಟಿಸಿದ್ದಾರೆ. 

ಮದ್ದೂರು: ಕಬ್ಬಿನ ಬಾಕಿ ಹಣಕ್ಕಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಬೆಂಬಲ ಸೂಚಿಸಿದ್ದಾರೆ. ತಿಳಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಹೋರಾಟಕ್ಕೆ ನನ್ನ ಬೆಂಬಲವಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆದರೆ ರೈತರ ಬೇಡಿಕೆಯಂತೆ ಸಕ್ಕರೆ ಕಾರ್ಖಾನೆ ಮಾಲೀಕರು ಕಬ್ಬಿಗೆ ಎಷ್ಟುದರ ಕೊಡಲಿದ್ದಾರೆ ಎಂಬುದು ನನಗೆ ತಿಳಿದಿಲ್ಲ. 

ಹೀಗಾಗಿ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದರು. ಸಮ್ಮಿಶ್ರ ಸರ್ಕಾರದ ಆಡಳಿತ ವೈಖರಿ, ರಾಜ್ಯ ರಾಜಕಾರಣ ಹಾಗೂ ನನ್ನ ವೈಯಕ್ತಿಕ ರಾಜಕಾರಣದ ಬಗ್ಗೆ ಸದ್ಯಕ್ಕೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.