ಮುಡಾ ಹಗರಣ: ಸಚಿವ ಬೈರತಿ ಸುರೇಶ್‌ ವಿರುದ್ಧ ಡಿಜಿಪಿಗೆ ಸ್ನೇಹಮಯಿ ಕೃಷ್ಣ ದೂರು

ಹೆಲಿಕಾಪ್ಟರ್‌ನಲ್ಲಿ ತರಿಸಿಕೊಳ್ಳಲಾದ ಈ ಕಡತಗಳನ್ನು ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ರೀತಿಯ ಸಹಾಯ ಮಾಡಿದ್ದಕ್ಕಾಗಿ ಸುಜೀತ್‌ ಅವರನ್ನು ಬೆಂಗಳೂರಿನ ಆಯಕಟ್ಟಿನ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಈ ಬಗ್ಗೆ ತನಿಖೆ ನಡೆಸಿ ಸುಜೀತ್‌ ಮತ್ತು ಬೈರತಿ ಸುರೇಶ್‌ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಿದ ಸ್ನೇಹಮಯಿ ಕೃಷ್ಣ 

Snehamai Krishna complaint to DGP against Minister Byrathi Suresh on Muda Scam case grg

ಬೆಂಗಳೂರು(ಅ.08):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಂಬಂಧ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಮತ್ತು ಮೈಸೂರು ಲೋಕಾಯುಕ್ತ ಹಿಂದಿನ ಪೊಲೀಸ್‌ ವರಿಷ್ಠಾಧಿಕಾರಿ ಸುಜೀತ್‌ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸೋಮವಾರ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ.

ಮೈಸೂರು ಲೋಕಾಯುಕ್ತದ ಹಿಂದಿನ ಪೊಲೀಸ್‌ ವರಿಷ್ಠಾಧಿಕಾರಿ ಸುಜೀತ್‌ ಅವರು ಲೋಕಾಯುಕ್ತ ಸರ್ಚ್‌ ವಾರೆಂಟ್‌ ಆಧರಿಸಿ ಜು.26ರಂದು ಮುಡಾ ಕಚೇರಿ ಮೇಲೆ ನಡೆದ ದಾಳಿ ನಡೆಸಿದ್ದರು. ಈ ವೇಳೆ ವೇಳೆ ಯಾವುದೇ ದಾಖಲೆಗಳನ್ನು ವಶಪಡಿಸಿಕೊಳ್ಳದೆ ಸಚಿವ ಬೈರತಿ ಸುರೇಶ್‌ಗೆ ಮಾಹಿತಿ ನೀಡಿದ್ದರು. ಬಳಿಕ ಸಚಿವ ಹೆಲಿಕಾಪ್ಟರ್‌ ಮುಖಾಂತರ ಮೈಸೂರಿಗೆ ಬಂದು ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ವಿಜಯೇಂದ್ರ ಹೇಳಿದಾಕ್ಷಣ ಸಿದ್ದರಾಮಯ್ಯ ರಾಜೀನಾಮೆ ಕೊಡ್ಬೇಕಾ?: ಸಚಿವ ಜಮೀರ್ ಅಹಮ್ಮದ್

ಹೆಲಿಕಾಪ್ಟರ್‌ನಲ್ಲಿ ತರಿಸಿಕೊಳ್ಳಲಾದ ಈ ಕಡತಗಳನ್ನು ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ರೀತಿಯ ಸಹಾಯ ಮಾಡಿದ್ದಕ್ಕಾಗಿ ಸುಜೀತ್‌ ಅವರನ್ನು ಬೆಂಗಳೂರಿನ ಆಯಕಟ್ಟಿನ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಈ ಬಗ್ಗೆ ತನಿಖೆ ನಡೆಸಿ ಸುಜೀತ್‌ ಮತ್ತು ಬೈರತಿ ಸುರೇಶ್‌ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಕೋರಿದ್ದಾರೆ.

Latest Videos
Follow Us:
Download App:
  • android
  • ios