Asianet Suvarna News Asianet Suvarna News

ಗಣೇಶೋತ್ಸವಕ್ಕೆ ಸರ್ಕಾರದಿಂದ ಸಿಗಲಿದೆಯಾ ಅನುಮತಿ?

  • ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಕುರಿತಂತೆ ಭಿನ್ನಾಭಿಪ್ರಾಯಗಳೇನೂ ಇಲ್ಲ
  • ಆ.30ರಂದು ತಜ್ಞರ ಸಭೆ ಇದೆ. ಸಭೆಯಲ್ಲಿ ಚರ್ಚಿಸಿ ಗಣೇಶೋತ್ಸವದ ಕುರಿತು ನಿರ್ಧರಿಸುತ್ತೇವೆ -CM
Soon govt will decide about Ganesh festival celebration permission snr
Author
Bengaluru, First Published Aug 29, 2021, 7:35 AM IST
  • Facebook
  • Twitter
  • Whatsapp

 ಹಿರೇಕೆರೂರು (ಆ.29):  ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಕುರಿತಂತೆ ಭಿನ್ನಾಭಿಪ್ರಾಯಗಳೇನೂ ಇಲ್ಲ. ಎಲ್ಲರೂ ಅವರವರ ಅಭಿಪ್ರಾಯ ಹೇಳಿದ್ದಾರೆ ಎಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆ.30ರಂದು ತಜ್ಞರ ಸಭೆ ಇದೆ. ಸಭೆಯಲ್ಲಿ ಚರ್ಚಿಸಿ ಗಣೇಶೋತ್ಸವದ ಕುರಿತು ನಿರ್ಧರಿಸುತ್ತೇವೆ ಎಂದು ಸ್ಪಷ್ಟ​ಪ​ಡಿ​ಸಿ​ದ್ದಾರೆ.

 ಪಟ್ಟಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಭೆ ಬಳಿಕ ಸಾರ್ವಜನಿಕ ಗಣೇಶೋತ್ಸವದ ಬಗ್ಗೆ ನಿರ್ಧಾರ ತಿಳಿಸುವುದಾಗಿ ಹೇಳಿದರು.

ಮಾಲಿನ್ಯ ಮಂಡಳಿಯಿಂದ ವಿಶೇಷವಾದ ಯೋಜನೆ : 10 ಲಕ್ಷ ಅರಿಶಿಣ ಗಣಪತಿ ಅಭಿಯಾನ

ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ನಿರ್ಬಂಧ ಹೇರಿದ ಬೆನ್ನಲ್ಲೇ, ಕೆಲ ಬಿಜೆಪಿಗರಿಂದಲೇ ವಿರೋಧ ವ್ಯಕ್ತವಾಗಿತ್ತು. 

ಮಸೀದಿಗಳಲ್ಲಿ ಸಾಮೂಹಿಕ ನಮಾಜ್‌ ಮಾಡುತ್ತಿದ್ದಾರೆ ಅಲ್ಲಾ, ಚಚ್‌ರ್‍ಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುತ್ತಿಲ್ಲವೇ. ಅಲ್ಲಿ ಅವರಿಗೆ ಅವಕಾಶ ಮಾಡಿಕೊಟ್ಟಿದ್ದೀರಿ ಎನ್ನುವುದಾರೆ ಗಣೇಶೋತ್ಸವಕ್ಕೂ ಅವಕಾಶ ಕೊಡಲಿ ಎಂದು ಸಂಸದ ಪ್ರತಾಪ್‌ ಸಿಂಹ ಆಗ್ರಹಿಸಿದರು. ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕೂಡ ಸಾರ್ವಜನಿಕ ಗಣೇಶೋತ್ಸವ ಮಾಡಿಯೇ ತೀರುತ್ತೇವೆ ಎಂದಿದ್ದರು.

ಚಿಂತಕ ಚಕ್ರವರ್ತಿ ಸೂಲಿಬೆಲೆ, ನಿಬಂಧೆಗಳನ್ನು ವಿಧಿಸಿಯಾದರೂ ಸರ್ಕಾರ ಗಣೇಶೋತ್ಸವಕ್ಕೆ ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದರು.

Follow Us:
Download App:
  • android
  • ios