ವಿಧಾನ ಪರಿಷತ್‌ (ಸೆ.23): ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಬಾಕಿ ಇರುವ ವೇತನವನ್ನು ಶೀಘ್ರ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಘೋಷಿಸಿದ್ದಾರೆ. 

ವೇತನಕ್ಕೆ ಆಗ್ರಹಿಸಿದ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್‌ ಸೇರಿದಂತೆ ಪ್ರತಿಪಕ್ಷ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪರಿಷತ್‌ನಲ್ಲಿ ಧರಣಿ ಆರಂಭಿಸಿದ ಹಿನ್ನೆಲೆಯಲ್ಲಿ ಸದನದಲ್ಲಿ ಈ ಘೋಷಣೆ ಮಾಡಿದ ಅವರು, ‘ಲಾಕ್‌ಡೌನ್‌ನಿಂದಾಗಿ ಕಾಲೇಜುಗಳು ಆರಂಭವಾಗಿಲ್ಲ. ಮಾರ್ಚ್ ವರೆಗೆ ವೇತನ ಪಾವತಿಸಲಾಗಿದೆ.

ಉಚಿತ IAS ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ ...

 ಏಪ್ರಿಲ್‌ನಿಂದ ಆಗಸ್ಟ್‌ವರೆಗೆ ವೇತನ ಬಾಕಿ ಇದೆ. 14447 ಅತಿಥಿ ಉಪನ್ಯಾಸಕರಿಗೆ ಬಾಕಿ ಇರುವ ವೇತನ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು. ಮುಖ್ಯಮಂತ್ರಿಗಳ ಮಾತಿನಿಂದ ತೃಪ್ತರಾದ ಸದಸ್ಯರು ತಮ್ಮ ಧರಣಿ ಹಿಂಪಡೆದುಕೊಂಡರು.