ಶೀಘ್ರದಲ್ಲೇ ನಮ್ಮ ಬೇಡಿಕೆ ಈಡೇರಲಿದೆ ಎಂದು ಸಚಿವ ಬಿ ಶ್ರೀ ರಾಮುಲು ಹೇಳಿದ್ದಾರೆ. ಅಲ್ಲದೇ ಈ ಬಗ್ಗೆ ರಕ್ತದಲ್ಲಿ ಬರೆದುಕೊಡುವುದಾಗಿಯೂ ಅವರು ವಾಗ್ದಾನ ನೀಡಿದ್ದಾರೆ. 

ಮಸ್ಕಿ (ಮಾ.21): ನಾಯಕ ಸಮುದಾಯದ ಬಹುದಿನಗಳ ಬೇಡಿಕೆಯಾದ ಶೇ.7.5 ಮೀಸಲಾತಿಯನ್ನು ಶೀಘ್ರದಲ್ಲೇ ಈಡೇರಿಸುವುದಾಗಿ ರಕ್ತದಲ್ಲಿ ಬರೆದುಕೊಡುವೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಘೋಷಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಟ್ಟಣದಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದುಳಿದ ಸಮುದಾಯಗಳ ಹಕ್ಕುಗಳ ಒದಗಿಸಿಕೊಡಲು ನಿರಂತರವಾಗಿ ಪ್ರಯತ್ನಿಸಿಕೊಡಲಾಗುತ್ತಿದೆ. ಅದರಂತೆ ಪರಿಶಿಷ್ಟಜಾತಿಗೆ ಶೇ.15ರಿಂದ 16 ಮೀಸಲಾತಿ ಒದಗಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದು, ಕೆಲವೇ ದಿನಗಳಲ್ಲಿ ಮೀಸಲಾತಿ ಕಲ್ಪಿಸಿಕೊಡಲಾಗುವುದು ಎಂದು ಭರವಸೆ ನೀಡಿದರು. 

ಭದ್ರಾವತಿಯನ್ನು ಕಾಂಗ್ರೆಸ್ಸಿಗರು ಪಾಕಿಸ್ತಾನ ಮಾಡೋಕೆ ಹೊರಟಿದ್ದಾರಾ?: ರಾಮುಲು

ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಯಡಿಯೂರಪ್ಪ ಅವರು ರಾಜಕೀಯದಲ್ಲಿ ಅಶ್ವಮೇಧ ಕುದುರೆಯಂತಿದ್ದು ಅವರನ್ನು ಕಟ್ಟಿಹಾಕಲು ಯಾರಿಂದಲೂ ಸಾಧ್ಯವಿಲ್ಲ. ಪರಿಣಾಮ ಮುಂದಿನ ಅವಧಿಗೂ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದು, ಮಸ್ಕಿ ಉಪಕದನದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಅಭಿವೃದ್ಧಿಗೆ ಮತ್ತಷ್ಟುಬಲ ಸಿಗಲಿದೆ ಎಂದು ಹೇಳಿದರು.