Asianet Suvarna News Asianet Suvarna News

ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣ: ಆರೋಪಿ ಸಂತೋಷ್‌ ರಾವ್‌ಗೆ ಹೈಕೋರ್ಟ್ ನೋಟಿಸ್

ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂತೋಷ್‌ ರಾವ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಿಶೇಷ (ಮಕ್ಕಳ) ನ್ಯಾಯಾಲಯವು ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿದ್ದನ್ನು ಬದಿಗೆ ಸರಿಸುವಂತೆ ಕೋರಿ ಕೇಂದ್ರೀಯ ತನಿಖಾ ದಳವು (ಸಿಬಿಐ) ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Soujanya Rape and murder case High court notice to accused Santosh Rao at bengaluru rav
Author
First Published Feb 4, 2024, 12:21 PM IST

ಬೆಂಗಳೂರು (ಫೆ.4): ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂತೋಷ್‌ ರಾವ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ವಿಶೇಷ (ಮಕ್ಕಳ) ನ್ಯಾಯಾಲಯವು ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿದ್ದನ್ನು ಬದಿಗೆ ಸರಿಸುವಂತೆ ಕೋರಿ ಕೇಂದ್ರೀಯ ತನಿಖಾ ದಳವು (ಸಿಬಿಐ) ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಧರ್ಮಸ್ಥಳ ಸೌಜನ್ಯಾ ಪ್ರಕರಣ ಆದೇಶದ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಸಿಬಿಐ: ಸಂತೋಷ್‌ರಾವ್‌ನೇ ಅತ್ಯಾಚಾರಿಯಂತೆ!

ಸಿಬಿಐ ವಿಶೇಷ ನ್ಯಾಯಾಲಯವು ಆರೋಪಿ ಸಂತೋಷ್‌ ರಾವ್‌ ಅವರನ್ನು 2023ರ ಜೂನ್‌ 16ರಂದು ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಮತ್ತು ವಿಜಯಕುಮಾರ್‌ ಎ. ಪಾಟೀಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಘಟನೆ ನಡೆದಿತ್ತು. ಪ್ರಕರಣವನ್ನು ಮೊದಲಿಗೆ ಬೆಳ್ತಂಗಡಿ ಠಾಣಾ ಪೊಲೀಸರು ತನಿಖೆ ನಡೆಸಿದ್ದರು. ಬಳಿಕ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. 2013ರ ನವೆಂಬರ್‌ 6ರಂದು ಸರ್ಕಾರವು ಸಿಬಿಐಗೆ ತನಿಖೆಗೆ ಆದೇಶಿಸಿತ್ತು. ತನಿಖಾಧಿಕಾರಿಗಳು ಕಾರ್ಕಳ ಮೂಲದ ಸಂತೋಷ್ ರಾವ್ ಎಂಬಾತನನ್ನು ಆರೋಪಿಯಾಗಿ ಗುರುತಿಸಿದ್ದರು.

 

ಧರ್ಮಸ್ಥಳದಲ್ಲಿ ದುಷ್ಟರಿಗೆ ಬಲಿಯಾದ ಸೌಜನ್ಯಾ ಪ್ರತಿಮೆ ಪ್ರತಿಷ್ಠಾಪನೆ: 28ನೇ ಹುಟ್ಟುಹಬ್ಬ ಆಚರಣೆ

ಆದರೆ, ಪ್ರಕರಣದ ವಿಚಾರಣೆಯ ನಂತರ ಸಿಬಿಐ ವಿಶೇಷ ನ್ಯಾಯಾಲಯವು 2023ರ ಜುಲೈ 16ರಂದು ಆರೋಪಿಯನ್ನು ಖುಲಾಸೆಗೊಳಿಸಿತ್ತು. ಇದರಿಂದ ವಿವಿಧ ಸಂಘಟನೆಗಳು ರಾಜಕೀಯ ಪಕ್ಷಗಳು ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು. ಹೀಗಾಗಿ, ಮರು ತನಿಖೆಗೆ ಆದೇಶಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ್ದ ಪೀಠವು ಪ್ರಕರಣದಲ್ಲಿ ಸರ್ಕಾರ, ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬವು ಆರೋಪಿಯನ್ನು ದೋಷಮುಕ್ತಗೊಳಿಸಿದ ವಿಚಾರಣಾಧೀನ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Follow Us:
Download App:
  • android
  • ios