ವಿಜಯವಾಡ ವಿಭಾಗ ವ್ಯಾಪ್ತಿಯ ರೈಲ್ವೆಗೆ ಸಂಬಂಧಿಸಿದ ಕಾಮಗಾರಿ ಹಿನ್ನೆಲೆಯಲ್ಲಿ ಜು.9ರವರೆಗೆ ಕೆಲವು ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ದಕ್ಷಿಣ ಮಧ್ಯ ರೈಲ್ವೆ ತಿಳಿಸಿದೆ.

ಬೆಂಗಳೂರು (ಜು.4): ವಿಜಯವಾಡ ವಿಭಾಗ ವ್ಯಾಪ್ತಿಯ ರೈಲ್ವೆಗೆ ಸಂಬಂಧಿಸಿದ ಕಾಮಗಾರಿ ಹಿನ್ನೆಲೆಯಲ್ಲಿ ಜು.9ರವರೆಗೆ ಕೆಲವು ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ದಕ್ಷಿಣ ಮಧ್ಯ ರೈಲ್ವೆ ತಿಳಿಸಿದೆ.

ಜು.4ರಂದು ಹಟಿಯಾದಿಂದ ಹೊರಡುವ ರೈಲು (12835) ಹಟಿಯಾ - ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಹಾಗೂ ಜು.7ರಂದು ಟಾಟಾನಗರದಿಂದ ಹೊರಡುವ (12889) ಟಾಟಾನಗರ-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ನಿಡದವೋಲು, ಭೀಮಾವರಂ ಟೌನ್‌ ಗುಡಿವಾಡ ಮತ್ತು ವಿಜಯವಾಡ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ಜು.8ರಂದು ಹಟಿಯಾದಿಂದ ಹೊರಡುವ (18637) ಹಟಿಯಾ - ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ನಿಡದವೋಲು, ಭೀಮಾವರಂ ಟೌನ್‌, ಗುಡಿವಾಡ ಮತ್ತು ವಿಜಯವಾಡ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ಕಾಲೇಜು, ಆಫೀಸ್‌ಗೆ ಹೊರಟ

ರೈಲಿನಲ್ಲೇ ಹೃದಯಾಘಾತ: ವ್ಯಕ್ತಿ ಸಾವು
ಬಂಟ್ವಾಳ: ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಂಟ್ವಾಳದ ವ್ಯಕ್ತಿ ಹಾಸನದಲ್ಲಿ ಹೃದಯಾಘಾತದಿಂದ ಮೃತಪಟ್ಟಘಟನೆ ಭಾನುವಾರ ರಾತ್ರಿ ನಡೆದಿದೆ. ಬಂಟ್ವಾಳ ಬೈಪಾಸ್‌ ನಿವಾಸಿ ಜನಾರ್ದನ ಕುಲಾಲ್‌ ಮೃತರು. ಕುಟುಂಬದ ಜತೆ ಭಾನುವಾರ ಸಂಜೆಯ ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಾಸನ ತಲುಪುತ್ತಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಹಾಸನ ರೈಲು ನಿಲ್ದಾಣದಿಂದ ಹಾಸನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮಳೆ ಕೊರತೆ: ಕಪ್ಪತ್ತಗುಡ್ಡದಲ್ಲಿ ಕುಡಿವ ನೀರಿಗಾಗಿ ಪರಿತಪಿಸುತ್ತಿರುವ ಪ್ರಾಣಿಗಳು !

ಸಾಮಾಜಿಕವಾಗಿ ಸಕ್ರಿಯರಾಗಿದ್ದ ಅವರು ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿದ್ದು, ಕಾರು ಚಾಲಕರಾಗಿದ್ದ ಅವರು ಬಿಎಂಎಸ್‌ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಕುಲಾಲ ಸಂಘಟನೆ ಬೆಳವಣಿಗೆಗೆ ಶ್ರಮಿಸಿದ್ದು, ಸಾಕಷ್ಟುವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದ್ದರು.