ಕಾಂಗ್ರೆಸ್ ಹಿಂದಿನಿಂದಲೂ ದೇಶ ಒಡೆಯುವ ಕೆಲಸ ಮಾಡುತ್ತಿದೆ: ಈಶ್ವರಪ್ಪ ವಾಗ್ದಾಳಿ

ಡಿ.ಕೆ.ಸುರೇಶ್ ಕೂಗಿದ ತಕ್ಷಣ ದೇಶ ಒಡೆಯೋಕೆ ಆಗಲ್ಲ. ನಮ್ಮನ್ನು ಬಿಟ್ಟು ಈ ದೇಶದಲ್ಲಿ ಬೇರೆ ಯಾರೂ ಅಧಿಕಾರಕ್ಕೆ ಬರಲ್ಲ. ಈ ದೇಶ ಒಡೆಯುವ ಕೆಲಸ ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ತಿಳಿಸಿದರು.

South India separate nation issue KS Eshwarappa outraged against DK Suresh at Raichur rav

ರಾಯಚೂರು (ಫೆ.2): ಭಾರತ ದೇಶ ಒಂದಾಗಿರುವುದು ಕಾಂಗ್ರೆಸ್‌ ನಾಯಕರಿಗೆ ಇಷ್ಟವಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಟೀಕಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಭಾರತ-ಪಾಕಿಸ್ತಾನ ಬೇರೆ ಮಾಡಿದರು. ಈಗ ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆಯುತ್ತಿದ್ದಾರೆ. ಬಜೆಟ್ ವಿಚಾರದಲ್ಲೂ ಉತ್ತರ ಭಾರತ ದಕ್ಷಿಣ ಭಾರತ ಎಂದು ಇಬ್ಭಾಗ ಮಾಡುತ್ತಿದ್ದಾರೆ ಎಂದು ದೂರಿದರು.

ಟಿಪ್ಪು ಸುಲ್ತಾನ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು, ಸಿರವಾರ ಪಟ್ಟಣ ಉದ್ವಿಗ್ನ !

ಸಂಸದ ಡಿ.ಕೆ.ಸುರೇಶ ಇದು ಕೇಂದ್ರದ ಬಜೆಟ್, ರಾಜ್ಯದ ಬಜೆಟ್ ಅಲ್ಲ ಎಂಬುದನ್ನು ತಿಳಿದು ಪ್ರತಿಕ್ರಿಯಿಸಲಿ. ಯಾವ ಯೋಜನೆಯಲ್ಲಿ ರಾಜ್ಯಗಳಿಗೆ ಎಷ್ಟು ಪಾಲಿದೆ ಎಂದು ಹೇಳಿಲ್ಲ. ರಾಜ್ಯಕ್ಕೆ ಎಷ್ಟು ಬರಬೇಕು ಎಂಬುದನ್ನು ಪಟ್ಟಿ ಮಾಡಿ ಕೊಡಲಿ. ನಾವು ಕೂಡ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಬಜೆಟ್‌ನಲ್ಲೂ ಉತ್ತರ ಭಾರತ ದಕ್ಷಿಣ ಭಾರತ ಎನ್ನುವುದು ಕಾಂಗ್ರೆಸ್ ನಾಯಕರ ಮನಸ್ಥಿತಿಯಾಗಿದೆ. ಡಿ.ಕೆ.ಸುರೇಶ್ ಕೂಗಿದ ತಕ್ಷಣ ದೇಶ ಒಡೆಯೋಕೆ ಆಗಲ್ಲ. ನಮ್ಮನ್ನು ಬಿಟ್ಟು ಈ ದೇಶದಲ್ಲಿ ಬೇರೆ ಯಾರೂ ಅಧಿಕಾರಕ್ಕೆ ಬರಲ್ಲ. ಈ ದೇಶ ಒಡೆಯುವ ಕೆಲಸ ಯಾರಿಂದಲೂ ಸಾಧ್ಯವಿಲ್ಲ ಎಂದರು.

ಪ್ರಧಾನಿ ಮೋದಿಯವರ ವಿಶೇಷ ಬಜೆಟ್ ಇದಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ್ದಾರೆ. ಬಡವ, ಮಧ್ಯಮ ವರ್ಗದವರಿಗೆ ಅನುಕೂಲವಾಗಲಿದೆ. ಯುವಕ, ಮಹಿಳೆಯರಿಗೆ ವಿಶೇಷ ವ್ಯವಸ್ಥೆ ಈ ಬಜೆಟ್‌ನಲ್ಲಿದೆ. ಏಳು ಲಕ್ಷದವರೆಗೆ ತೆರಿಗೆ ವಿನಾಯಿತಿ, ಮೀನುಗಾರಿಕೆಗೆ ವಿಶೇಷ ಸಚಿವಾಲಯ, ಗರ್ಭಕೋಶ ಕ್ಯಾನ್ಸರ್‌ಗೆ ಉಚಿತ ಚಿಕಿತ್ಸೆ ಸೌಲಭ್ಯ ನೀಡಿರುವುದು ಉತ್ತಮ ನಿರ್ಧಾರ. ಈ ಬಜೆಟ್ ಜನರಪ ಯೋಜನೆ ಆಗಿದೆ ಎಂದರು.

ರಾಯಚೂರಿಗೆ ಏಮ್ಸ್‌ ಮಂಜೂರು ಮಾಡಲು ಕೇಂದ್ರ ಸಚಿವೆ ಸೀತಾರಾಮನ್‌ಗೆ ಪತ್ರ ಬರೆದ ಸಿಎಂ

ಬಿಜೆಪಿಗೆ ಸೇರುವ ಪ್ರತಿಯೊಬ್ಬ ವ್ಯಕ್ತಿಯದು ನಾನು ಹೇಳೋಕೆ ಆಗುವುದಿಲ್ಲ. ಅಜಿತ್ ಪವಾರ್, ನಿತೀಶ್ ಕುಮಾರ್ ಬಿಜೆಪಿಗೆ ಬಂದರು. ಇವತ್ತಲ್ಲ ನಾಳೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ದೊಡ್ಡ ಗುಂಪಿನೊಂದಿಗೆ ಬಿಜೆಪಿ ಸೇರುತ್ತಾರೆ ಕಾದುನೋಡಿ ಎಂದು ಹೇಳಿದರು

Latest Videos
Follow Us:
Download App:
  • android
  • ios