ರಾಜ್ಯಕ್ಕೆ ನೈರುತ್ಯ ಮುಂಗಾರು ಎಂಟ್ರಿ: ವಾಡಿಕೆಗಿಂತೆ ಈ ಬಾರಿ ಹೆಚ್ಚು ಮಳೆ ನಿರೀಕ್ಷೆ
* ರಾಜ್ಯಕ್ಕೆ ನೈರುತ್ಯ ಮುಂಗಾರು ಮಳೆ ಪ್ರವೇಶ
* ನಿನ್ನೆಯಷ್ಟೇ ಕೇರಳ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿತ್ತು..
* ಇಂದು (ಶುಕ್ರವಾರ) ಕರ್ನಾಟಕ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ..
* ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿದ ಬಗ್ಗೆ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ..
ಬೆಂಗಳೂರು, (ಜೂನ್.04): ಈಗಾಗಲೇ ಕೇರಳಕ್ಕೆ ನೈರುತ್ಯ ಮಾರುತಗಳು ಪ್ರವೇಶಿಸಿದ್ದು, ಇದೀಗ ಕರ್ನಾಟಕಕ್ಕೆ ನೈರುತ್ಯ ಮುಂಗಾರು ಮಳೆ ಎಂಟ್ರಿಕೊಟ್ಟಿದೆ.
ಇಂದು (ಶುಕ್ರವಾರ) ಕರ್ನಾಟಕ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಖಚಿತಪಡಿಸಿದ್ದು, ಕರಾವಳಿ ,ಮಲೆನಾಡು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಕೆಲ ಜಿಲ್ಲೆಗಳಿಗೆ ಮುಂಗಾರು ಪ್ರವೇಶಿಸಿದೆ.
ರಾಜ್ಯದಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ: 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಮುಂದಿನ 2-3 ದಿನಗಳಲ್ಲಿ ನೈರುತ್ಯ ಮುಂಗಾರು ಇಡೀ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದ್ದು, ಈ ಬಾರಿ ವಾಡಿಕೆಯಂತೆ ರಾಜ್ಯದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.
ಹವಾಮಾನ ಇಲಾಖೆ ವರದಿಗಳ ಪ್ರಕಾರ, ಜೂನ್ 6ರ ತನಕವೂ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆ ದಟ್ಟವಾಗಿದೆ. ಶುಕ್ರವಾರ ಗುಡುಗು, ಸಿಡಿಲಿನೊಂದಿಗೆ ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು, ಒಟ್ಟು 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಗದಗ , ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಹಾಸನ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.