ಕೆಲಸ ಹುಡುಕ್ತಿರೋ ಯುವತಿಯರೇ ಎಚ್ಚರ; ದೊಡ್ಡ ಹುದ್ದೆ, ಹೆಚ್ಚಿನ ಸಂಬಳದ ಆಸೆ ತೋರಿಸಿ ವೇಶ್ಯಾವಾಟಿಕೆಗೆ ತಳ್ತಾರೆ ಪಾಪಿಗಳು!

ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ. ಮಹದೇವಪುರದ ಅನಿಲ್ ಕುಮಾರ್ ವಿರುದ್ಧ ಈ ಹಿಂದೆಯೂ ಹಲವು ಪ್ರಕರಣಗಳು ದಾಖಲಾಗಿದ್ದವು.

Spa prostitution racket Anil Reddy arrested by ccb police under Goon Act at bengaluru rav

ಬೆಂಗಳೂರು (ಡಿ.23): ರಾಜ್ಯ,ಹೊರರಾಜ್ಯಗಳ ಸ್ಪಾಗಳಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ. 

ಮಹದೇವಪುರದ ಅನಿಲ್‌ ಕುಮಾರ್‌ ಅಲಿಯಾಸ್‌ ಅನಿಲ್‌ ರೆಡ್ಡಿ (40) ಬಂಧಿತ. ಆರೋಪಿ ಹೊರರಾಜ್ಯ ಹಾಗೂ ವಿದೇಶಿ ಮಹಿಳೆಯರಿಗೆ ಸ್ಪಾಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಹೆಚ್ಚಿನ ಸಂಬಳದ ಆಮಿಷವೊಡ್ಡಿ ಅಕ್ರಮ ಬಂಧನದಲ್ಲಿ ಇರಿಸಿಕೊಂಡು ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಈತನ ಮಾನವ ಕಳ್ಳ ಸಾಗಣೆ ಹಾಗೂ ವೇಶ್ಯವಾಟಿಕೆ ದಂಧೆ ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಲಾಗಿದೆ.

ಅತೀ ಹೆಚ್ಚು ವೇಶ್ಯಾವಾಟಿಕೆ ನಡೆಯುವ ರಾಜ್ಯವಿದು: ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ಆರೋಪಿ ಅನಿಲ್‌ ಕುಮಾರ್‌ ವಿರುದ್ಧ ಆಂಧ್ರಪ್ರದೇಶ ಹಾಗೂ ಮಹದೇವಪುರ ಪೊಲೀಸ್‌ ಠಾಣೆಗಳಲ್ಲಿ ಮಾನವ ಕಳ್ಳ ಸಾಗಣೆ, ಅತ್ಯಾಚಾರ ಸೇರಿ 4 ಅಪರಾಧ ಪ್ರಕರಣಗಳು ದಾಖಲಾಗಿವೆ. ಆದರೂ ಈತ ವೃತ್ತಿಪರ ವೇಶ್ಯಾಗೃಹಗಳನ್ನು ನಡೆಸುವುದನ್ನು ಮುಂದುವರೆಸಿದ್ದ. ಹೀಗಾಗಿ ಮಹದೇವಪುರ ಠಾಣೆ ಪೊಲೀಸರು ಹಾಗೂ ಸಿಸಿಬಿ ಅಧಿಕಾರಿಗಳು ಆರೋಪಿ ಅನಿಲ್‌ ಕುಮಾರ್‌ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಸಲ್ಲಿಸಿದ್ದ ಪ್ರಸ್ತಾವನೆಗೆ ನಗರ ಪೊಲೀಸ್‌ ಆಯುಕ್ತರು ಸಮ್ಮತಿ ನೀಡಿದ ಮೇರೆಗೆ ಆರೋಪಿಯನ್ನು ಬಂಧಿಸಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios