ಪ್ರಮುಖವಾಗಿ ರೇವಣ್ಣ ಅವರಿಗೆ ಜಾಮೀನು ಸಿಗಲು ಕಾರಣ. ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಬಂಧನ ಸೇರಿದಂತೆ ಮತ್ತಿತರ ವಿಷಯಗಳನ್ನು ತಿಳಿಸಿದರು. ಈ ವೇಳೆ ಸಿಎಂ, ತನಿಖೆಯನ್ನು ಚುರುಕುಗೊಳಿಸು ವಂತೆ ತಿಳಿಸಿದರಲ್ಲದೆ, ಪಾರದರ್ಶಕವಾಗಿ ಮಾಡುವಂತೆ ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು(ಮೇ.15): ಕಿಡ್ನಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ರೇವಣ್ಣ ಅವರಿಗೆ ಜಾಮೀನು ಮಂಜೂರು ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಆಗಿರುವ ತನಿಖಾ ಬೆಳವಣಿಗೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸರೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಾ. ಜಿ.ಪರಮೇಶ್ವರ್, ಚೆಲುವರಾಯಸ್ವಾಮಿ, ಭೈರತಿ ಸುರೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. 

ಪುತ್ರ ಪ್ರಜ್ವಲ್ ಹೆಸರಲ್ಲಿ ಚಾಮುಂಡೇಶ್ವರಿಗೆ ಅರ್ಚನೆ ಮಾಡಿಸಿದ ಹೆಚ್‌ಡಿ ರೇವಣ್ಣ

ಎಸ್‌ಐಟಿ ಪೊಲೀಸರು ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಎಂಬ ಬಗ್ಗೆ ಮಾಹಿತಿ ನೀಡಿದರು. ಪ್ರಮುಖವಾಗಿ ರೇವಣ್ಣ ಅವರಿಗೆ ಜಾಮೀನು ಸಿಗಲು ಕಾರಣ. ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಬಂಧನ ಸೇರಿದಂತೆ ಮತ್ತಿತರ ವಿಷಯಗಳನ್ನು ತಿಳಿಸಿದರು. ಈ ವೇಳೆ ಸಿಎಂ, ತನಿಖೆಯನ್ನು ಚುರುಕುಗೊಳಿಸು ವಂತೆ ತಿಳಿಸಿದರಲ್ಲದೆ, ಪಾರದರ್ಶಕವಾಗಿ ಮಾಡುವಂತೆ ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ.

ಸಭೆ ಮುಗಿಸಿ ಸಿಎಂ ತೆರಳಿದ ನಂತರ ಡಿ.ಕೆ. ಶಿವಕುಮಾರ್ ಮತ್ತು ಡಾ. ಜಿ. ಪರಮೇಶ್ವರ್ ಪ್ರತ್ಯೇಕವಾಗಿ ಚರ್ಚಿಸಿ ದರು. ಈ ವೇಳೆಯಲ್ಲೂ ಪ್ರಜ್ವಲ್ ರೇವಣ್ಣ ಪ್ರಕರಣ, ರೇವಣ್ಣ ಜಾಮೀನು ಪಡೆದಿರುವ ಬಗ್ಗೆ ಮಾತುಕತೆ ನಡೆಸಿದರು ಎಂದು ಹೇಳಲಾಗಿದೆ.