Asianet Suvarna News Asianet Suvarna News

ವಿದೇಶಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್ ನೀಡಿದ ಡಿಸಿಎಂ ‌ಅಶ್ವತ್ಥನಾರಾಯಣ

*ವಿದೇಶಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್ ನೀಡಿದ ಡಿಸಿಎಂ ‌ಅಶ್ವತ್ಥನಾರಾಯಣ
* ಒಲಿಂಪಿಕ್‌ ಕ್ರೀಡಾಕೂಟಕ್ಕೆ ತೆರಳುವ ಕ್ರೀಡಾಪಟುಗಳು ಸೇರಿ ವಿದೇಶಕ್ಕೆ ಹೋಗುವವರೆಲ್ಲರಿಗೂ 22ರಿಂದ ಲಸಿಕೀಕರಣ:
* 28 ದಿನದಲ್ಲೇ ಕೋವಿಶೀಲ್ಡ್  2ನೇ‌ ಡೋಸ್ 

sports persons students who are visiting foreign could get covishield 2nd dose in 24-days Says Ashwath narayan rbj
Author
Bengaluru, First Published Jun 20, 2021, 4:49 PM IST

ಬೆಂಗಳೂರು, (ಜೂನ್.20): ವ್ಯಾಸಂಗ ಅಥವಾ ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸೆಂಟ್ರಲ್‌ ಕಾಲೇಜು ಆವರಣದಲ್ಲಿ ಇದೇ 22ರಿಂದ ಕೋವಿಡ್ ಲಸಿಕೆ  ಹಾಕಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. 

ಈ ಮೊದಲೇ ಸೆಂಟ್ರಲ್‌ ಕಾಲೇಜ್‌ನಲ್ಲಿ ವಿದೇಶಕ್ಕೆ ತೆರಳುವ 1,500ಕ್ಕೂ ಹೆಚ್ಚು ವಿದ್ಯಾರ್ಥಿ/ ಉದ್ಯೋಗಿಗಳಿಗೆ ಮೊದಲ ಡೋಸ್‌ ಕೊಡಲಾಗಿದೆ . ಟೊಕಿಯೋದಲ್ಲಿ ನಡೆಯುವ ಒಲಿಂಪಿಕ್‌ ಕ್ರೀಡಾಕೂಟಕ್ಕೆ ತೆರಳುವ ಕ್ರೀಡಾಪಟುಗಳು ಸೇರಿ ವಿದೇಶಕ್ಕೆ ವ್ಯಾಸಂಗ- ಉದ್ಯೋಗಕ್ಕೆ ತೆರಳುವ ಎಲ್ಲರೂ ಇಲ್ಲಿ ಬಂದು ಲಸಿಕೆ ಪಡೆಯಬಹುದು. ಮಂಗಳವಾರ ಬೆಳಿಗ್ಗೆ 10.30ಗಂಟೆಯಿಂದ ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ವಿದೇಶಕ್ಕೆ ತೆರಳುವವರಿಗೆ ಲಸಿಕೆ ಅವಧಿ ಕಡಿತ 

ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರಗಳು
* ಇದಕ್ಕಾಗಿ ಪಾಲಿಕೆಯ 8 ವಲಯಗಳ ಆಯುಕ್ತರನ್ನು 'ಸಮರ್ಥ ಅಧಿಕಾರಿ' (competent authority) ಗಳನ್ನಾಗಿ ನೇಮಿಸಲಾಗಿದ್ದು, ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಪೂರ್ವ ವಲಯದ ಆರೋಗ್ಯಾಧಿಕಾರಿಯನ್ನು 'ಸಮರ್ಥ ಅಧಿಕಾರಿ' ಎಂದು ಗುರುತಿಸಲಾಗಿದೆ. 

* ಈ ವರ್ಗದ ಜನರಿಗೆ ಕೇಂದ್ರ ಸರಕಾರದ ಮಾರ್ಗಸೂಚಿಯಂತೆ 28 ದಿನಗಳಲ್ಲೇ ಎರಡನೇ ಡೋಸ್‌ ನೀಡಲಾಗುವುದು. 

* ಲಸಿಕೆ ಕೇಂದ್ರಕ್ಕೆ ಬರುವ ಅರ್ಹ ಲಸಿಕಾಂಕ್ಷಿಗಳ ಸ್ವಯಂ ಘೋಷಣಾ ಪತ್ರ ಸೇರಿ ಇತರೆ ದಾಖಲೆಗಳನ್ನು ಪರಿಶೀಲಿಸಬೇಕು. ಲಸಿಕೆ ಪಡೆದ ದೃಢೀಕರಣ ಪತ್ರವನ್ನು ತಕ್ಷಣೇ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿಸಬೇಕು. 

* ಈಗಾಗಲೇ ಮೊದಲ ಡೋಸ್‌ ಪಡೆದಿರುವವರು ತಮ್ಮ ಪಾಸ್‌ಪೋರ್ಟ್‌ ಸಂಖ್ಯೆಯನ್ನು ದಾಖಲು ಮಾಡಿರದಿದ್ದರೆ ಎರಡನೇ ಡೋಸ್‌ ಪಡೆಯಲು ಬರುವಾಗ ಕಡ್ಡಾಯವಾಗಿ ದಾಖಲಿಸಿಕೊಳ್ಳುವುದು.

Follow Us:
Download App:
  • android
  • ios