ಚಿಕ್ಕಮಗಳೂರು: ಒತ್ತುವರಿ ತೆರವು ವಿರೋಧಿಸಿ ಶೃಂಗೇರಿ ಬಂದ್ ಯಶಸ್ವಿ; ರಾಜ್ಯ ಸರ್ಕಾರ ವಿರುದ್ಧ ಗುಡುಗಿದ ಮಲೆನಾಡಿಗರು!

ಒತ್ತುವರಿ ತೆರೆವು ವಿರೋಧಿಸಿ ಶೃಂಗೇರಿ ಕ್ಷೇತ್ರ ಬಂದ್ ಯಶಸ್ವಿಯಾಗಿದೆ. ಬೀದಿಗಿಳಿದ ಮಲೆನಾಡಿಗರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Sringeri bandh against clearance of encroachment was successful at chikkamagaluru rav

ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು 

ಚಿಕ್ಕಮಗಳೂರು : ಒತ್ತುವರಿ ತೆರವು ಸೇರಿದಂತೆ ರೈತ ವಿರೋಧಿ ಧೋರಣೆ ಖಂಡಿಸಿ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ವಿಧಾನಸಭಾ ವ್ಯಾಪ್ತಿಯ ಮೂರು ತಾಲ್ಲೂಕುಗಳಾದ ಕೊಪ್ಪ, ಎನ್.ಆರ್.ಪರ ತಾಲೂಕುಗಳಲ್ಲಿ ಇಂದು (ಶನಿವಾರ) ನಡೆಸಿದ  ಬಂದ್  ಶಾಂತಿಯುತವಾಗಿ ಸಂಪನ್ನವಾಯಿತು. ಶೃಂಗೇರಿ, ಎನ್.ಆರ್.ಪುರ, ಕೊಪ್ಪ ತಾಲೂಕಿನಲ್ಲಿ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ವೇದಿಕೆಯಿಂದ ಬಂದ್ ಗೆ ಕರೆ ನೀಡಕಲಾಗಿತ್ತು. ಸರ್ಕಾರದ ವಿರುದ್ದ ಮಲೆನಾಡಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದ ವಿರುದ್ದ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದರೆ,  ಅರಣ್ಯ, ಕಂದಾಯ ಭೂಮಿ ಒತ್ತುವರಿ ತೆರವು ಪ್ರಕರಣವನ್ನು ಖಂಡಿಸಿ ಬಂದ್ ನಡೆಯಿತು.. 

ಮಲೆನಾಡು ಇಂದು ಸ್ತಬ್ದ ! 

ಮೂರು ತಾಲೂಕಿನ ವ್ಯಾಪ್ತಿಯ ಅಂಗಡಿ, ಹೋಟೆಲ್ ಮಾಲೀಕರು ಸ್ವಯಂ ಪ್ರೇರಿತವಾಗಿ ವಹಿವಾಟು ಸ್ಥಗಿತಗೊಳಿಸಿದ್ದರು. ಬಸ್, ಆಟೋ, ಟ್ಯಾಕ್ಸಿಗಳ ಸಂಚಾರ ಇರಲಿಲ್ಲ, ಬೆಳಿಗ್ಗೆ ಶಾಲೆ, ಕಾಲೇಜ್‌ಗಳು ಓಪನ್ ಆಗಿದ್ದವು. ಆದರೆ, ನಂತರದಲ್ಲಿ ಮುಚ್ಚಿದವು. ಬ್ಯಾಂಕ್‌ಗಳು ಸಹ ಬಂದ್ ಆಗಿದ್ದವು. ಪೆಟ್ರೋಲ್ ಬಂಕ್, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಬೆಳಿಗ್ಗೆಯಿಂದಲೇ ಪಟ್ಟಣದಲ್ಲಿ ಬಿಕೋ ವಾತಾವರಣ ಇತ್ತು.ಕೊಪ್ಪ ಪಟ್ಟಣದ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಾವಿರಾರು ಮಂದಿ ಹೋರಾಟ ಮಾಡಿದ್ರು. ಮಲೆನಾಡು ರೈತ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಸರ್ವ ಪಕ್ಷಗಳ ಮುಖಂಡರು ಕಾರ್ಯಕರ್ತರು ನಮ್ಮ ಒಂದಿಂಚು ಭೂಮಿಯನ್ನು ಒತ್ತುವರಿ ಮಾಡಲು ಬಿಡಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ರೈತರು ಕಹಳೆ ಉದಿದ್ರು. 

ಅಡುಗೆಯವರು, ವಾರ್ಡನ್, ಶಿಕ್ಷಕರ ನಡುವೆ ಕಿತ್ತಾಟ; ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ವಿಷ ಬೆರೆಸಿದ ಕಿರಾತಕರು!

ಸರ್ಕಾರದ ವಿರುದ್ದ ಗುಡುಗಿದ ಮಲೆನಾಡಿನ ಜನರು : 

ಇನ್ನು ರಾಜ್ಯ ಸರ್ಕಾರ ಹಾಗೂ ಅರಣ್ಯ ಸಚಿವರು ಅರಣ್ಯ ಇಲಾಖೆಯ ನಿಯಮಗಳನ್ನೇ ಉಲ್ಲಂಘಿಸಿ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ. ಸರ್ಕಾರದ ಈ ಆದೇಶದಿಂದ ಸಾವಿರಾರು ರೈತರು ಬೆಳೆಗಾರರು ಕಣ್ಣೀರು ಹಾಕುತ್ತಿದ್ದು, ಬೀದಿಗೆ ಬೀಳುವ ಆತಂಕ ಎದುರಾಗಿದೆ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು.ಅರಣ್ಯಕ್ಕೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳಿದ್ದು, ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ನಿರೀಕ್ಷಿತ ಮಟ್ಟದಲ್ಲಿ ಪ್ರಯತ್ನ ನಡೆದಿಲ್ಲ, ಇಂತಹ ಪರಿಸ್ಥಿತಿಯಲ್ಲಿ ಅರಣ್ಯ ಒತ್ತುವರಿ ತೆರವು ಅಸ್ತ್ರ ಪ್ರಯೋಗ ಮಾಡಿದರೆ ಬಡವರು ಬೀದಿಗೆ ಬೀಳಲಿದ್ದಾರೆ.

ಹಾಗಾಗಿ ಇದರ ವಿರುದ್ಧ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಂದ್ ನಡೆಸಿದರು.ಒತ್ತುವರಿ ಸಮಸ್ಯೆ, ಸೆಕ್ಷನ್ 4, ಡೀಮ್ಡ್ ಫಾರೆಸ್ಟ್ ಮತ್ತು ಸೊಪ್ಪಿನಬೆಟ್ಟ ಸಮಸ್ಯೆ, ಕಸ್ತೂರಿ ರಂಗನ್ ವರದಿ, ಪರಿಸರ ಸೂಕ್ಷ್ಮವಲಯ ಸೇರಿದಂತೆ ಹಲವು ಸಮಸ್ಯೆಗಳು ಮಲೆನಾಡಿಗರ ನಿದ್ದೆಗೆಡೆಸಿದೆ, ಈ ವಿಷಯಗಳನ್ನು ಮುಂದಿಟ್ಟು ಮಲೆನಾಡು ನಾಗರೀಕ ರೈತ ಹಿತರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳು ಪಕ್ಷಾತೀತವಾಗಿ ಶೃಂಗೇರಿ ಕ್ಷೇತ್ರ ಬಂದ್‌ಗೆ ಕರೆ ನೀಡಿದ್ದವು.ಶೃಂಗೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎನ್.ಆರ್.ಪುರ, ಕೊಪ್ಪ ಹಾಗೂ ಶೃಂಗೇರಿ ತಾಲೂಕುಗಳಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಅರಣ್ಯ ಒತ್ತುವರಿ ಪ್ರಕರಣಗಳು ಇವೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ವಾಟಾಳ್ ನಾಗರಾಜ್ ಕೆಂಡ!

ಮೂರು ಎಕರೆ ಒಳಗಿನ ಒತ್ತುವರಿದಾರರ ಸಂಖ್ಯೆಯೇ ಅಧಿಕವಾಗಿದೆ. ಒತ್ತುವರಿ ತೆರವುಗೊಳಿಸಿದರೆ ಮಲೆನಾಡಿನ ಜನರ ಜೀವನ ಅಸ್ತವ್ಯಸ್ತವಾಗಲಿದೆ. ಅದ್ದರಿಂದ ಬಂದ್‌ಗೆ ಎಲ್ಲಾ ವರ್ಗದ ಜನರು ಬೆಂಬಲ ಸೂಚಿಸಿದ್ದರು. ಸಮಾವೇಶದಲ್ಲಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ಮಾಜಿ ಶಾಸಕ ಡಿ.ಎನ್. ಜೀವರಾಜ್, ಜೆ.ಡಿ.ಎಸ್ ಮುಖಂಡ ಸುಧಾಕರ್ ಶೆಟ್ಟಿ, ಕಾಂಗ್ರೆಸ್, ಬಿಜೆಪಿ, ಜೆ.ಡಿ.ಎಸ್. ಕಾರ್ಯಕರ್ತರು ಪಾಲ್ಗೊಂಡಿದ್ದರು. ಎಲ್ಲರೂ ಒಂದಾಗಿ ಸೇರಿ ಯಾವುದೇ ರಾಜಕೀಯ ಉದ್ದೇಶವಿಲ್ಲದೆ ಪ್ರಾಮಾಣಿಕವಾಗಿ ಹೋರಾಟದಲ್ಲಿ ಭಾಗವಹಿಸುವ ಪ್ರತಿಜ್ಞಾವಿಧಿಯೊಂದಿಗೆ ಬೋಧಿಸಲಾಯಿತು

Latest Videos
Follow Us:
Download App:
  • android
  • ios