ಅರ್ಜುನ್ ಸರ್ಜಾ ವಿರುದ್ಧ ದೂರು ನೀಡಿದ್ದ ನಟಿ ಶ್ರುತಿ ಹರಿಹರನ್ ನಗರದ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ತಮ್ಮ ಆರೋಪ ಸಂಬಂಧ ಹೇಳಿಕೆಯನ್ನು ದಾಖಲಿಸಿದ್ದಾರೆ.
ಬೆಂಗಳೂರು : ಲೈಂಗಿಕ ಕಿರುಕುಳ ಆರೋಪದಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ದೂರು ನೀಡಿದ್ದ ನಟಿ ಶ್ರುತಿ ಹರಿಹರನ್ ನಗರದ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ತಮ್ಮ ಆರೋಪ ಸಂಬಂಧ ಹೇಳಿಕೆಯನ್ನು ದಾಖಲಿಸಿದ್ದಾರೆ. ಹೇಳಿಕೆ ದಾಖಲಿಸಿಕೊಂಡಿರುವ ನ್ಯಾಯಾಧಿಶರು ವಿಚಾರಣೆಯನ್ನು ನ. 9ಕ್ಕೆ ಮುಂದೂಡಿದ್ದಾರೆ.
ಪ್ರಕರಣ ಸಂಬಂಧ ಅರ್ಜುನ್ ಸರ್ಜಾ ವಿರುದ್ಧ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ಶ್ರುತಿ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ದೂರಿನಲ್ಲಿರುವ ಎಲ್ಲ ಅಂಶಗಳನ್ನು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಪ್ರಕರಣ ಮುಕ್ತಾಯವಾಗುವವರೆಗೂ ಬದಲಾವಣೆ ಮಾಡಲು ಅವಕಾಶವಿರುವುದಿಲ್ಲ. ಅಲ್ಲದೆ, ಹೇಳಿಕೆಗೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರಗಳು ಲಭ್ಯವಾದಲ್ಲಿ ಮಾತ್ರ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗುವುದಕ್ಕೆ ಅವಕಾಶವಿರುತ್ತದೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಪಿಎಸ್‌ಐ ರೇಣುಕಾ ಅವರೊಂದಿಗೆ ನ್ಯಾಯಾಲಯಕ್ಕೆ ಹಾಜರಾದ ಶ್ರುತಿ ನ್ಯಾಯಾಧೀಶ ಗೋಪಾಲಕೃಷ್ಣ ಅವರು ಮುಂದೆ ಹೇಳಿಕೆ ನೀಡಿದ್ದಾರೆ.
