ನಮಾಜ್‌ಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಮಯ ಬದಲು: ಪ್ರಮೋದ್ ಮುತಾಲಿಕ್‌ ಆರೋಪ

ನಮಾಜ್ ಮಾಡುವುದಕ್ಕಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಮಯವನ್ನು ಸರ್ಕಾರ ಬದಲಾವಣೆ ಮಾಡಿದೆ ಎಂದು ಶ್ರೀ ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ಆರೋಪಿಸಿದರು.
 

SSLC Exam Time Change for Namaz Says Pramod Muthalik At Belagavi gvd

ಬೆಳಗಾವಿ (ಫೆ.06): ನಮಾಜ್ ಮಾಡುವುದಕ್ಕಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಮಯವನ್ನು ಸರ್ಕಾರ ಬದಲಾವಣೆ ಮಾಡಿದೆ ಎಂದು ಶ್ರೀ ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ಆರೋಪಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆ.26 ರಿಂದ ಮಾ.2ರವರೆಗೆ ನಿಗದಿಪಡಿಸಲಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೆ.26 ರಿಂದ ಬೆಳಗ್ಗೆ 10.30ಕ್ಕೆ ಪರೀಕ್ಷಾ ಪ್ರಾರಂಭದ ಸಮಯ ನಿಗಡಿ ಮಾಡಲಾಗಿದೆ. ಆದರೆ ಮಾ.1 ಶುಕ್ರವಾರ ಇರುವುದರಿಂದ ಅಂದು ಮಾತ್ರ ಮಧ್ಯಾಹ್ನ 2 ಗಂಟೆಯಿಂದ ಪರೀಕ್ಷೆಗಳನ್ನು ಇಡಲಾಗಿದೆ‌‌. 

ನಮಾಜ್ ಮಾಡುವುದಕ್ಕಾಗಿ ಶಿಕ್ಷಣ ವ್ಯವಸ್ಥೆಯನ್ನೇ ಬದಲಾವಣೆ ಮಾಡಲಾಗುತ್ತಿದೆ ಎಂದು ಹರಿಹಾಯ್ದರು. ಪರೀಕ್ಷಾ ಸಮಯದಲ್ಲಿ ಹಿಜಾಬ್‌ಗೆ ಅನುಮತಿ ನೀಡಿದ್ದಿರಿ. ಹಿಂದೂ ಹುಡುಗಿಯರ ತಾಳಿ ಕಾಲುಂಗುರವನ್ನೂ ತೆಗೆಸಿದ ನೀಚರು ನೀವು. ಮುಸ್ಲಿಂ ಸುಮುದಾಯಕ್ಕೆ ₹10 ಸಾವಿರ ಕೋಟಿ ಕೊಡುವುದಾಗಿ ಘೋಷಣೆ ಮಾಡಿದ್ದೀರಿ. ಕರ ಸೇವಕರ ಹಳೆಯ ಕೇಸ್‌ಗಳನ್ನು ಓಪನ್ ಮಾಡಿದ್ದೀರಿ. ಟಿಪ್ಪುಸುಲ್ತಾನ್‌, ಔರಂಗಜೇಬ್, ಬಾಬರನ ಆಡಳಿತ ಮತ್ತೆ ಪ್ರಾರಂಭಿಸಿದ್ದಿರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ಸಿನ ಬೂಟಾಟಿಕೆ ಗ್ಯಾರಂಟಿಗಿಂತ ಮೋದಿ ಗ್ಯಾರಂಟಿಯೇ ಶ್ರೇಷ್ಠ: ವಿಜಯೇಂದ್ರ

ಸಿಎಎ, ಸಮಾನ ನಾಗರಿಕ ಸಂಹಿತೆ ಜಾರಿ ಆಗೋದು ಗ್ಯಾರಂಟಿ: ಸಿಎಎ ಜಾರಿ ಆಗಲೇಬೇಕು, ಆಗ ವಿರೋಧ ಉಂಟಾಗಿ ಆಗಿರಲಿಲ್ಲ. ಈಗ ಕೇಂದ್ರ ಸರ್ಕಾರ ಮಾಡೇ ಮಾಡುತ್ತದೆ. ಈಗ ಆಗದಿದ್ದರೂ ಮುಂದಿನ ಚುನಾವಣೆಗಾದರೂ ಜಾರಿ ಮಾಡೇ ಮಾಡುತ್ತಾರೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ಜೊತೆಗೆ ಸಮಾನ ನಾಗರಿಕ ಸಂಹಿತೆ, ಜನಸಂಖ್ಯೆ ನಿಯಂತ್ರಣ ಕಾನೂನು ಕೂಡ ಜಾರಿಯಾಗಿ, ಹಿಂದು ರಾಷ್ಟ್ರ ಘೋಷಣೆ ಕೂಡ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

2024ರ ಚುನಾವಣೆಯಲ್ಲಿ ಮೋದಿ ಅವರು ನೂರಕ್ಕೆ ನೂರು ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತಾರೆ. ನಮ್ಮ ಉಳಿವಿಗಾಗಿ ಮೋದಿ ಅವಶ್ಯಕತೆ ಇದೆ ಅನ್ನೋದು ತಳಮಟ್ಟದ ಸಾಮಾನ್ಯ ನಾಗರಿಕರಿಗೂ ಗೊತ್ತಾಗಿದೆ ಎಂದು ಅಭಿಪ್ರಾಯಪಟ್ಟರು. ಮಾಜಿ ಸಿಎಂ ಶೆಟ್ಟರ್ ಘರ್‌ ವಾಪ್ಸಿ ಕುರಿತು ಪ್ರತಿಕ್ರಿಯಿಸಿದ ಮುತಾಲಿಕ್, ಜಗದೀಶ ಶೆಟ್ಟರ್ ಅವರದು ರಾಜಕೀಯ. ನಾನೇನು ಅದರ ಬಗ್ಗೆ ಕಮೆಂಟ್ ಮಾಡಲ್ಲ ಎಂದರು. ಮುತಾಲಿಕ್ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಕೇಳಲಾದ ಪ್ರಶ್ನೆಗೆ ನಾನು ರಾಜಕೀಯದ ಬಾಗಿಲು ಮುಚ್ಚಿದ್ದೇನೆ. ಸ್ಪರ್ಧೆ ಮಾಡಲ್ಲ. ಆದರೆ, ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನ ಆರಂಭ ಮಾಡಿದ್ದೇವೆ. 

ಸಂಸದ ಡಿ.ಕೆ.ಸುರೇಶ್ ಹೇಳಿಕೆಯಲ್ಲಿ ರಾಜಕೀಯ ಮಾಡಲ್ಲ: ಕೆ.ಎಸ್‌.ಈಶ್ವರಪ್ಪ

ಈಗಾಗಲೆ ಅಭಿಯಾನಕ್ಕೆ ಚಿಕ್ಕೋಡಿಯಲ್ಲಿ ಚಾಲನೆ ನೀಡಲಾಗಿದೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಈಶ್ವರಪ್ಪನವರು ಬಂದಿದ್ದರು. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮ ನಡೆಸಲು ಯೋಜನೆ ಮಾಡಿದ್ದೇವೆ. ನಾವು ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದೇವೆ. ದೇಶಕ್ಕೆ ಮೋದಿ ಬೇಕು ಅನ್ನೋದು ನಮ್ಮ ಆಶಯವಾಗಿದೆ ಎಂದರು. ಮಂಡ್ಯ ಜಿಲ್ಲೆಯ ಕೆರಗೋಡ ಗ್ರಾಮದಲ್ಲಿ ಹನುಮ ಧ್ವಜ ಹಾಕಿದ್ದನ್ನು ಸರ್ಕಾರ ಬೇಜವಾಬ್ದಾರಿಯಿಂದ ತೆಗೆದು ಹಾಕಿದೆ ಎಂದು ಆರೋಪಿಸಿದ ಮುತಾಲಿಕ್, ಆ ವಿಚಾರವಾಗಿ ಯಾರೂ ದೂರು ಕೊಟ್ಟಿಲ್ಲ. ಅದರಿಂದ ಯಾರಿಗೂ ತೊಂದರೇನೂ ಆಗಿಲ್ಲ. ಅಲ್ಲೇನು ಗಲಭೆಯೂ ಆಗಿರಲಿಲ್ಲ, ಏಕಾಏಕಿ ತೆಗೆದುಹಾಕಿದ್ದು ಅಕ್ಷಮ್ಯ ಅಪರಾಧ ಎಂದು ಹೇಳಿದರು.

Latest Videos
Follow Us:
Download App:
  • android
  • ios