ಎಸ್ಎಸ್ಎಲ್‌ಸಿ ಫಲಿತಾಂಶ: 1ನೇ ಸ್ಥಾನದಲ್ಲಿದ್ದ ಚಿಕ್ಕಬಳ್ಳಾಪುರಕ್ಕೆ 18 ನೇ ಸ್ಥಾನ: ಸುಧಾಕರ್ ಬೇಸರ
ನಾನಿದ್ದಾಗ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಆದರೆ ಈಗ 18 ನೇ ಸ್ಥಾನ ಪಡೆದಿದೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಚಿಕ್ಕಬಳ್ಳಾಪುರ (ಮೇ.11): ನಾನಿದ್ದಾಗ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಆದರೆ ಈಗ 18 ನೇ ಸ್ಥಾನ ಪಡೆದಿದೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಮತ್ತು ತಾವು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ಕೈಗೊಂಡಿದ್ದ ಕ್ರಮಗಳಿಂದಾಗಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ನಮ್ಮ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿತ್ತು.
ಸರ್ಕಾರದ ದುರಾಡಳಿತ ಕಾರಣ: ಆದರೆ ಕಾಂಗ್ರೆಸ್ ಸರ್ಕಾರದ ದುರಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರುಗಳ ನಿರ್ಲಕ್ಷ್ಯದ ಪರಿಣಾಮವಾಗಿ ಚಿಕ್ಕಬಳ್ಳಾಪುರ ಜಿಲ್ಲೆ ಈ ಸಾಲಿನ ಎಸ್ಎಸ್ ಎಲ್ ಸಿ ಫಲಿತಾಂಶದಲ್ಲಿ 18ನೇ ಸ್ಥಾನಕ್ಕೆ ಕುಸಿದಿದೆ. ಜಿಲ್ಲೆಯ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಇದು ಅತ್ಯಂತ ಚಿಂತಾಜನಕ ಬೆಳವಣಿಗೆಯಾಗಿದ್ದು, ರಾಜ್ಯ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರುಗಳು ಈ ವಿಷಯವನ್ನ ಗಂಭೀರವಾಗಿ ಪರಿಗಣಿಸಿ ಜಿಲ್ಲೆಯ ಶಿಕ್ಷಣ ವ್ಯವಸ್ಥೆಯನ್ನ ಬಲಪಡಿಸುವತ್ತ ಗಮನ ಹರಿಸಬೇಕು ಎಂದು ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಕಡಿಮೆ ಫಲಿತಾಂಶ ಪಡೆದ ಜಿಲ್ಲೆ 21 ಶಾಲೆಗಳಿಗೆ ನೋಟಿಸ್!: ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಶಿವಮೊಗ್ಗ ಜಿಲ್ಲೆಗೆ ಸಿಹಿ ನೀಡಿದ್ದು, ಬಂಪರ್ ಬಹುಮಾನ ಎಂಬಂತೆ ಕಳೆದ ಬಾರಿ 28ನೇ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿ 3ನೇ ಸ್ಥಾನಕ್ಕೇರಿದೆ. ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬಂದಿರುವ ಹೊರತಾಗಿಯೂ 21 ಶಾಲೆಗಳಲ್ಲಿ ಶೇ. 70ಕ್ಕಿಂತ ಕಡಿಮೆ ಫಲಿತಾಂಶ ಬಂದಿದೆ. ಕಡಿಮೆ ಫಲಿತಾಂಶ ಬಂದಿರುವ ಶಾಲೆಗಳಿಗೆ ಕಾರಣ ಕೇಳಿ ನೋಟಿಸ್ ನೀಡಲು ಡಿಡಿಪಿಐ ಮುಂದಾಗಿದ್ದಾರೆ !.
SSLC Result: ಯಾವ ಪುರುಷಾರ್ಥಕ್ಕೆ ಸರ್ಕಾರ ಬೋರ್ಡ್ ಪರೀಕ್ಷೆ ನಡೆಸುತ್ತಿದೆ: ಕ್ಯಾಮ್ಸ್ ಪ್ರಶ್ನೆ
ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಭಾರಿ ಏರಿಕೆ ಕಂಡಿರುವುದು ಜಿಲ್ಲೆಯ ಜನರಲ್ಲಿ ಸಂತಸ ಮೂಡಿಸಿದೆ. ಎಂದಿನಂತೆ ಬಾಲಕಿಯರೇ ಈ ಬಾರಿಯೂ ಹೆಚ್ಚು ತೇರ್ಗಡೆಯಾಗಿದ್ದಾರೆ. ಆದರೆ, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ತೇರ್ಗಡೆಯಾಗಿರುವ ಬಾಲಕರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. ಜೊತೆಗೆ ಕಳೆದ ಬಾರಿ 99 ಶಾಲೆಗಳು ಕಡಿಮೆ ಫಲಿತಾಂಶ ಪಡೆದಿದ್ದವು. ಈ ಬಾರಿ ಈ ಸಂಖ್ಯೆಯಲ್ಲೂ 21ಕ್ಕೆ ಇಳಿಕೆಯಾಗಿದೆ. ಆದರೆ, ಫಲಿತಾಂಶ ಸುಧಾರಣೆಗೆ ನಾನಾ ಪ್ರಯತ್ನದ ಹೊರತಾಗಿಯೂ ಕೆಲ ಶಾಲೆಗಳು ಉತ್ತಮ ಫಲಿತಾಂಶ ಪಡೆಯುವಲ್ಲಿ ಹಿಂದೆ ಬಿದ್ದಿರುವುದು ಶಿಕ್ಷಣ ಇಲಾಖೆ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದೆ.