ಲಾಕ್‌ಡೌನ್‌ ವಿಸ್ತರಣೆಯಾಗಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮುಂದೆ ಹೋಗುತ್ತಿವೆ. ಈ ವೇಳೆ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಆಂತಕಕ್ಕೆ ಒಳಗಾಗಬಾರೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ವಿದ್ಯಾರ್ಥಿಗಳಿಗೆ ಕರೆ ಮಾಡಿ ಆತ್ಮವಿಶ್ವಾಸ ತುಂಬಿದ್ದಾರೆ.

ಬೆಂಗಳೂರು (ಏ.21): ಲಾಕ್‌ಡೌನ್‌ ವಿಸ್ತರಣೆಯಾಗಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮುಂದೆ ಹೋಗುತ್ತಿವೆ. ಈ ವೇಳೆ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಆಂತಕಕ್ಕೆ ಒಳಗಾಗಬಾರೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ವಿದ್ಯಾರ್ಥಿಗಳಿಗೆ ಕರೆ ಮಾಡಿ ಆತ್ಮವಿಶ್ವಾಸ ತುಂಬಿದ್ದಾರೆ.

ಸೋಮವಾರ ಸಚಿವರು ಕೆಲವು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕರೆ ಮಾಡಿ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳು ಆತಂಕಕ್ಕೊಳಗಾಗುವುದು ಬೇಡ. ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಿ. ದೂರದರ್ಶನ, ಆಕಾಶವಾಣಿ ಸೇರಿದಂತೆ ಹಲವು ಮಾಧ್ಯಮಗಳ ಮೂಲಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪೂರ್ವ ಸಿದ್ಧತೆಗೆ ಮಾರ್ಗದರ್ಶಿ ತರಗತಿಗಳನ್ನು ಶೀಘ್ರದಲ್ಲೇ ಪ್ರಸಾರ ಮಾಡಲಿದ್ದೇವೆ. ಇದನ್ನು ಫಾಲೋ ಮಾಡಬೇಕೆಂದು ಸಲಹೆ ನೀಡಿದರು.

ಲಾಕ್‌ಡೌನ್ ವಿಸ್ತರಣೆ: SSLC, PUC ವಿದ್ಯಾರ್ಥಿಗಳಿಗೆ ಸುರೇಶ್ ಕುಮಾರ್ ಕಿವಿ ಮಾತು..!

ಬಳ್ಳಾರಿ, ಕೊಪ್ಪಳ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಚಿವರು ಕರೆ ಮಾಡಿದ್ದರು. ಕರೊನಾ ವೇಳೆ ಜಾಗೃತರಾಗಿರಬೇಕು. ಮಾÓ್ಕ… ಹಾಕಿಕೊಳ್ಳಬೇಕು. ಇದೇ ವೇಳೆ ಪರೀಕ್ಷೆಗೂ ಸಜ್ಜುಗೊಳ್ಳಬೇಕು. ಲಾಕ್‌ಡೌನ್‌ ಮುಗಿದ ಬಳಿಕ ಪರೀಕ್ಷೆ ಆಯೋಜಿಸುತ್ತೇವೆ, ಇದರಲ್ಲಿ ಯಾವುದೇ ಗೊಂದಲ ಬೇಡವೆಂದರು.