ಶಾಲಾ ಶಿಕ್ಷಕಿಯಿಂದ ಶ್ರೀರಾಮನ ಅವಹೇಳನ ಪ್ರಕರಣ: ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ!

ಸೇಂಟ್ ಜೆರೋಸಾ ಶಾಲೆಯ ಘಟನೆ ದುರದೃಷ್ಟಕರ ಎಂದಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಕುರಿತು ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದು ಶನಿವಾರ ತಿಳಿಸಿದ್ದಾರೆ.

St Gerosa school case health minister Dinesh Gundurao reaction at mangaluru rav

ಮಂಗಳೂರು (ಫೆ.17): ಸೇಂಟ್ ಜೆರೋಸಾ ಶಾಲೆಯ ಘಟನೆ ದುರದೃಷ್ಟಕರ ಎಂದಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಕುರಿತು ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದು ಶನಿವಾರ ತಿಳಿಸಿದ್ದಾರೆ.

ಜೆರೋಸಾ ಶಾಲೆ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ ಸಂಬಂಧ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಆಕಾಶ್ ಕೆ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ಗ್ಯಾರಂಟಿ ಬಳಿಕ ಮತ್ತೊಂದು ದಿಟ್ಟ ಹೆಜ್ಜೆ; ನಾಳೆ 'ಆಶಾಕಿರಣ ಯೋಜನೆ'ಗೆ ಸಿಎಂ ಚಾಲನೆ

ಘಟನೆಗೆ ಸಂಬಂಧಿಸಿದಂತೆ ದೂರು ಆಧರಿಸಿ ಎಫ್​ಐಆರ್​ ದಾಖಲಿಸಲಾಗಿದೆ. ಶೀಘ್ರದಲ್ಲೇ ಸತ್ಯಾಂಶ ತಿಳಿಯುತ್ತದೆ. ತುರ್ತಾಗಿ ತನಿಖೆ ಮಾಡಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ನಮ್ಮ ಅಭಿಪ್ರಾಯ, ಅವರ ಅಭಿಪ್ರಾಯ ಏನೇ ಇರಲಿ, ಕಾನೂನು ಮತ್ತು ಸಂವಿಧಾನ ಮುಖ್ಯ. ಶಾಸಕರು ಮತ್ತು ಇತರರ ನಡವಳಿಕೆಯಿಂದ ನಮಗೆ ಬಹಳಷ್ಟು ನೋವಾಗಿದೆ. ಧಾರ್ಮಿಕವಾಗಿ ಸಮಾಜವನ್ನು ಇಬ್ಬಾಗ ಮಾಡಲು ಹೋಗಿದ್ದಾರೆ ಎಂದು ಪ್ರತಿಪಕ್ಷಗಳ ವಿರುದ್ಧ ಕಿಡಿ ಕಾರಿದರು.

 

ಲೋಕಸಮರ: ಈ ಬಾರಿ ದಕ್ಷಿಣ ಕನ್ನಡದಲ್ಲಿ ಬದಲಾವಣೆ ಪಕ್ಕಾ! ದಿನೇಶ್‌ ಗುಂಡೂರಾವ್ ಭವಿಷ್ಯ!

ಇದು ಒಳ್ಳೆಯ ಸಂಸ್ಕೃತಿಯಲ್ಲ, ಇಡೀ ದೇಶವೇ ಗಮನಿಸುತ್ತಿದೆ ಮತ್ತು ಶಿಕ್ಷಕರನ್ನು ನಿಂದಿಸಲಾಗುತ್ತಿದೆ. ಪ್ರತಿಯೊಂದು ವಿಷಯದಲ್ಲೂ ಕ್ರೈಸ್ತರು, ಹಿಂದೂಗಳು, ಮುಸ್ಲಿಮರು ಎಂದು ಜನರನ್ನು ಎತ್ತಿಕಟ್ಟಿ ಕೋಮುದ್ವೇಷ ಹರಡುತ್ತಿದ್ದಾರೆ. ಬಿಜೆಪಿ ಶಾಸಕರು ಹಾಗೂ ಪೊಲೀಸರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ವಿಚಾರಣೆಯ ನಂತರ ಕ್ರಮ ಕೈಗೊಳ್ಳುತ್ತೇವೆ. ಅವರು ಕೇಳುತ್ತಾರೆ ಎಂಬ ಕಾರಣಕ್ಕೆ ನಾವು ಪ್ರಕರಣಗಳನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

Latest Videos
Follow Us:
Download App:
  • android
  • ios