ಲೋಕಸಭಾ ಚುನಾವಣೆ ಹೊತ್ತಲ್ಲೇ ಮತ್ತೆ ಮುನ್ನಲೆಗೆ ಬಂದ ಕುರುಬ ಸಮಾಜ ಎಸ್‌ಟಿ ಮೀಸಲಾತಿ ಹೋರಾಟ!
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೋರಾಟ ಮತ್ತೆ ಮುನ್ನಲೆಗೆ ಬಂದಿದೆ. ಅಕ್ಟೋಬರ್ 2 ಮತ್ತು 3 ರಂದು ಬೆಳಗಾವಿಯಲ್ಲಿ ನಡೆಯಲಿರುವ ಸಮುದಾಯದ ಒಂಬತ್ತನೇ ವಾರ್ಷಿಕ ಸಭೆಯಲ್ಲಿ ಕುರುಬರು ತಮ್ಮ ರಾಜಕೀಯ ಶಕ್ತಿಯನ್ನು ವೃದ್ದಿಸಿಕೊಳ್ಳುವ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದಾರೆ.
ಚಿಕ್ಕೋಡಿ (ಅ.1): ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೋರಾಟ ಮತ್ತೆ ಮುನ್ನಲೆಗೆ ಬಂದಿದೆ.
ಅಕ್ಟೋಬರ್ 2 ಮತ್ತು 3 ರಂದು ಬೆಳಗಾವಿಯಲ್ಲಿ ನಡೆಯಲಿರುವ ಸಮುದಾಯದ ಒಂಬತ್ತನೇ ವಾರ್ಷಿಕ ಸಭೆಯಲ್ಲಿ ಕುರುಬರು ತಮ್ಮ ರಾಜಕೀಯ ಶಕ್ತಿಯನ್ನು ವೃದ್ದಿಸಿಕೊಳ್ಳುವ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದಾರೆ.
ಅಖಿಲ ಭಾರತ ರಾಷ್ಟ್ರೀಯ ಕುರುಬ ಸಮುದಾಯದ ಮಹಾಅಧಿವೇಶನ ನೆಡಸುತ್ತಿರುವ ವಿಚಾರ ಸಂಬಂಧ ಸಿದ್ದರಾಮಯ್ಯರ ಆಪ್ತ, ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿ: ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ನೀಡಿದ ಜೆಡಿಎಸ್ ಶಾಸಕರು !
ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಜೊತೆ ಲೋಕಸಭಾ ಚುನಾವಣೆ ಟಿಕೆಟ್‌ಗೂ ಬೆಳಗಾವಿಯ ಕುರುಬ ಸಮಾಜದ ಕಾಂಗ್ರೆಸ್ ನಾಯಕರ ಡಿಮ್ಯಾಂಡ್. ಮಹಾ ಅಧಿವೇಶನದಲ್ಲಿ ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ನೀಡಲು ಕೇಂದ್ರಕ್ಕೆ ಆಗ್ರಹಿಸುತ್ತೇವೆ
ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಕುರಿತು ಕುಲಶಾಸ್ತ್ರೀಯ ಅಧ್ಯಯನ ವರದಿಗಾಗಿ ಈಗಾಗಲೇ ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಪಡೆದಿದ್ರು. ಹೊಸ ಸರಕಾರ ಬಂದ ನಂತರ ಸಿಎಂ ಸಿದ್ದರಾಮಯ್ಯನವರು ಕೇಂದ್ರಕ್ಕೆ ಶಿಫಾರಸು ಮಾಡಿ ಕಳಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿ ಮಾಡಬೇಕೆಂಬುದು ನಮ್ಮ ಮೊದಲನೇ ಬೇಡಿಕೆ. ಕಳೆದ 50 ವರ್ಷಗಳಲ್ಲಿ ರಾಜಕೀಯ ರಂಗದಲ್ಲಿ ಕುರುಬ ಸಮುದಾಯಕ್ಕೆ ಪ್ರಾತಿನಿಧ್ಯ ಸಿಕ್ಕಿಲ್ಲ. ಲೋಕಸಭೆ, ರಾಜ್ಯಸಭೆ, ವಿಧಾನ ಪರಿಷತ್‌ನಲ್ಲಿ ಕುರುಬ ಸಮುದಾಯಕ್ಕೆ ಪ್ರಾತಿನಿಧ್ಯ ಸಿಕ್ಕಿಲ್ಲ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಿಸಲಾತಿ ಜೊತೆಗೆ ಕುರುಬ ಸಮುದಾಯಕ್ಕೆ ಟಿಕೆಟ್ ನೀಡಬೇಕು. ಬೆಳಗಾವಿ, ಚಿಕ್ಕೋಡಿ ಎರಡು ಲೋಕಸಭಾ ಕ್ಷೇತ್ರ ಪೈಕಿ ಒಂದನ್ನ ಕುರುಬ ಸಮುದಾಯಕ್ಕೆ ನೀಡಬೇಕು ಅ.3ರಂದು ನಡೆಯುವ ಮಹಾಅಧಿವೇಶನದಲ್ಲಿ ಈ ಕುರಿತು ಒತ್ತಾಯಿಸುತ್ತೇವೆ ಎಂದರು.
ಇನ್ನೀಗ ಮೀಸಲಾತಿ ಜಾರಿ ಮಾಡಬೇಕಿರುವುದು ಕೇಂದ್ರ ಸರ್ಕಾರ. ನಾಳೆ ನಡೆಯಲಿರುವ ಕುರುಬ ಸಮುದಾಯದ ಸಮಾವೇಶದಲ್ಲಿ ಕೇಂದ್ರ ಸರ್ಕಾರ ಜಾರಿ ಮಾಡಬೇಕೆಂದು ಸಮಾವೇಶ ಮೂಲಕ ಒತ್ತಾಯಿಸುತ್ತೇವೆ.
ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಸಮಾಧಾನ:
ಕುರುಬ ಸಮುದಾಯಕ್ಕೆ ಲೋಕಸಭಾ ಟಿಕೆಟ್ ನೀಡಬೇಕು. ಬೆಳಗಾವಿ, ಚಿಕ್ಕೋಡಿ ಎರಡು ಕ್ಷೇತ್ರಗಳ ಪೈಕಿ ಒಂದು ಟಿಕೆಟ್ ಕುರುಬ ಸಮುದಾಯಕ್ಕೆ ನೀಡಲಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕುರುಬ ಸಮುದಾಯಕ್ಕೆ ಟಿಕೆಟ್ ನೀಡಿಲ್ಲ. 1972ರಿಂದ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ವಿಧಾನ ಪರಿಷತ್, ರಾಜ್ಯಸಭಾ ಸ್ಥಾನ ವಿಚಾರಕ್ಕೆ ಕುರುಬ ಸಮುದಾಯಕ್ಕೆ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ಬಾರಿ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುವಂತೆ ಆಗ್ರಹಿಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದರು.
ಕುಲಶಾಸ್ತ್ರೀಯ ಅಧ್ಯಯನದ ವರದಿ ಅಂಗೀಕರಿಸಲು ಆಗ್ರಹ
ಕಾಂಗ್ರೆಸ್ ಟಿಕೆಟ್‌ಗೆ ಕುರುಬ ಸಮುದಾಯದಲ್ಲೇ ಪೈಪೋಟಿ:
ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಪಡೆಯಲು ಕುರುಬ ಸಮುದಾಯದಲ್ಲೇ ತೀವ್ರ ಪೈಪೋಟಿ ಏರ್ಪಟ್ಟಿರುವ ವಿಚಾರ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಕೊಡ್ತಾರೋ ಕೊಡಲಿ, ಒಟ್ಟಿನಲ್ಲಿ ಕುರುಬ ಸಮುದಾಯಕ್ಕೆ ಟಿಕೆಟ್ ನೀಡಲಿ ಎಂದರು.