ಮೈಸೂರು, (ಜೂನ್.03):  ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ಐಎಎಸ್ ವರ್ಸಸ್ ಐಎಎಸ್ ನಡುವೆ ವಾರ್​ ಶುರುವಾಗಿದೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಡೆಯಿಂದ ಬೇಸತ್ತು  ಮಹಾನಗರ ಪಾಲಿಕೆಯ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ನೀಡಿದ್ದಾರೆ.

ಇನ್ನು ಈ ಬಗ್ಗೆ  ಪತ್ರಿಕಾ ಪ್ರಕಟಣೆ ಪ್ರತಿಕ್ರಿಯಿಸಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್, ಮಹಾನಗರ ಪಾಲಿಕೆಯ ಆಯುಕ್ತೆ ಶಿಲ್ಪಾನಾಗ್ ಬೆನ್ನಿಗೆ ನಿಂತಿದ್ದಾರೆ.

ಮೈಸೂರು ಪಾಲಿಕೆ ಆಯುಕ್ತೆ ರಾಜೀನಾಮೆ, ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ

ಮಹಾನಗರ ಪಾಲಿಕೆಯ ಆಯುಕ್ತೆ ಶಿಲ್ಪಾನಾಗ್ ಅತ್ಯಂತ ದಕ್ಷತೆ, ಪ್ರಾಮಾಣಿಕತೆ ಮತ್ತು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರ ರಾಜಿನಾಮೆಯನ್ನು ಸರ್ಕಾರ ಯಾವ ಕಾರಣಕ್ಕೂ ಅಂಗೀಕಾರ ಮಾಡುವುದಿಲ್ಲ. ಈ ವಿಚಾರವಾಗಿ ಮುಖ್ಯಮಂತ್ರಿ  ಬಳಿ ಮಾತನಾಡುತ್ತೇನೆ ಎಂದಿದ್ದಾರೆ.

ಶಿಲ್ಪಾನಾಗ್ ಅವರು ಸೇವೆಯಲ್ಲಿ ಮುಂದುವರಿಯುವಂತೆ ಮನವೊಲಿಸಲಾಗುವುದು. ಅವರೊಂದಿಗೆ ದೂರವಾಣಿ ಮೂಲಕ ಮಾತನಾಡುತ್ತೇನೆ. ಶುಕ್ರವಾರ ನಾನು ಮೈಸೂರು ಪ್ರವಾಸ ಕೈಗೊಂಡಿದ್ದು, ಆ ವೇಳೆ ಖುದ್ದು ಭೇಟಿಯಾಗಿ ಮಾತನಾಡುತ್ತೇನೆ ಎಂದು ಹೇಳಿದರು.

ರಾಜೀನಾಮೆ ಕೊಟ್ಟು ಹೋಗುತ್ತಿದ್ದ ಮೈಸೂರು ಪಾಲಿಕೆ ಆಯುಕ್ತೆ ಕಾಲಿಗೆ ಬಿದ್ದ ಸೆಕ್ಯೂರಿಟಿ ಗಾರ್ಡ್

ಇಂತಹ ದುರಂಹಕಾರಿ ಜಿಲ್ಲಾಧಿಕಾರಿ ಯಾರಿಗೂ ಸಿಗುವುದು ಬೇಡ ಎಂದು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ನೇರವಾಗಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಶಿಲ್ಪಾನಾಗ ಸಮರ ಸಾರಿದ್ದಾರೆ.