Asianet Suvarna News Asianet Suvarna News

ಬ್ಯಾಟರಾಯನಪುರ ಕ್ಷೇತ್ರದಿಂದ ಸರ್ಕಾರಿ ಜಾಗ ರಕ್ಷಣೆ ಆರಂಭಿಸಿ: ಬಿಜೆಪಿ ಒತ್ತಾಯ

ನಗರದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಬಳಿಸಲ್ಪಟ್ಟಿರುವ ಸಾವಿರಾರು ಕೋಟಿ ರುಪಾಯಿ ಮೌಲ್ಯದ ಸರ್ಕಾರಿ ಸ್ವತ್ತುಗಳನ್ನು ಭೂಕಬಳಿಕೆದಾರರಿಂದ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಒತ್ತಾಯಿಸಿದ್ದಾರೆ.

Start protection of government land from Batarayanpur constituency BJP insists bengaluru rav
Author
First Published Jul 16, 2023, 7:12 AM IST

ಬೆಂಗಳೂರು (ಜು.16) : ನಗರದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಬಳಿಸಲ್ಪಟ್ಟಿರುವ ಸಾವಿರಾರು ಕೋಟಿ ರುಪಾಯಿ ಮೌಲ್ಯದ ಸರ್ಕಾರಿ ಸ್ವತ್ತುಗಳನ್ನು ಭೂಕಬಳಿಕೆದಾರರಿಂದ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕ ಅಧ್ಯಕ್ಷ ಎನ್‌.ಆರ್‌.ರಮೇಶ್‌(NR Ramesh) ಒತ್ತಾಯಿಸಿದ್ದಾರೆ.

ಈ ಸಂಬಂಧ ಕಂದಾಯ ಸಚಿವ ಕೃಷ್ಣಬೈರೇಗೌಡ (Krishna byregowda Minister)ಅವರಿಗೆ ಪತ್ರ ಬರೆದಿದ್ದಾರೆ. ಅಧಿವೇಶನದಲ್ಲಿ ಬೆಂಗಳೂರು ನಗರ ಮಹಾನಗರ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಒತ್ತುವರಿ ಆಗಿರುವ ಸರ್ಕಾರಿ ಜಮೀನುಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುವುದಾಗಿ ಸಚಿವರು ಹೇಳಿಕೆ ನೀಡಿದ್ದಾರೆ. ಮೊದಲು ತಮ್ಮ ಕ್ಷೇತ್ರದಲ್ಲಿ ಒತ್ತುವರಿ ಆಗಿರುವ ಸರ್ಕಾರಿ ಸ್ವತ್ತುಗಳನ್ನು ಕಬಳಿಕೆದಾರರಿಂದ ತೆರವುಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬಿಬಿಎಂಪಿಯಲ್ಲಿ 13 ಸಾವಿರ ಕೋಟಿ ಹಗರಣ: ಸಿಐಡಿಗೆ ವಹಿಸುವಂತೆ ಸಿಎಂಗೆ ಎನ್ನಾರ್ ರಮೇಶ್ ಪತ್ರ

ಕುವೆಂಪುನಗರ ವಾರ್ಡ್‌ ವ್ಯಾಪ್ತಿಯ ಸಿಂಗಾಪುರ ಗ್ರಾಮದ ಸರ್ವೆ ನಂಬರ್‌ 109ರ ಸುಮಾರು 2,300 ಕೋಟಿಗಿಂತ ಹೆಚ್ಚು ಮೌಲ್ಯದ 226.15 ಎಕರೆಯಷ್ಟುವಿಸ್ತೀರ್ಣದ ಸರ್ಕಾರಿ ಸ್ವತ್ತುಗಳನ್ನು ಹಲವಾರು ಮಂದಿ ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಮಾಡಿದ್ದಾರೆ. ಈ ಬಗ್ಗೆ ದಾಖಲೆಗಳ ಸಮೇತ ಈ ಹಿಂದೆಯೇ ಗಮನ ತರಲಾಗಿದೆ. ಅಂತೆಯೇ ಹುಣಸಮಾರನಹಳ್ಳಿ ತಾಲೂಕು ಪಂಚಾಯಿತಿ ಕೊಡಗಲಹಟ್ಟಿಗ್ರಾಮದ ಸರ್ವೆ ನಂಬರ್‌ 103ರ ಸುಮಾರು .325 ಕೋಟಿಗಿಂತ ಹೆಚ್ಚು ಮೌಲ್ಯದ 22.35 ಸರ್ಕಾರಿ ಸ್ವತ್ತನ್ನು ತಮ್ಮ ಹಿಂಬಾಲಕರಲ್ಲಿ ಒಬ್ಬಾರಾಗಿರುವ ಸುಜಾತಾ ಶ್ರೀನಿವಾಸ್‌ ಪತಿ ಶ್ರೀನಿವಾಸ್‌ ಮತ್ತವರ ಬೆಂಬಲಿಗರು ಕಬಳಿಸಿದ್ದಾರೆ. ಈ ಸಂಬಂಧ ವಿವಿಧ ತನಿಖಾ ಸಂಸ್ಥೆಗಳಲ್ಲಿ ದೂರುಗಳು ಸಹ ದಾಖಲಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರು ಮಹಾನಗರ, ಮತ್ತದರ ಸುತ್ತಮುತ್ತಲ ಪ್ರದೇಶಗಳಲ್ಲಿ ಒತ್ತುವರಿ ಆಗಿರುವ ಸರ್ಕಾರಿ ಸ್ವತ್ತುಗಳನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯುವ ಕಾರ್ಯಕ್ಕೆ ತಮ್ಮ ಕ್ಷೇತ್ರದಿಂದಲೇ ಚಾಲನೆಯನ್ನು ನೀಡಬೇಕು. ಈ ಮೂಲಕ ಬೇರೆಲ್ಲಾ ರಾಜಕಾರಣಿಗಳಿಗೆ ಮೇಲ್ಪಂಕ್ತಿಯಾಗಬೇಕು. ಒತ್ತುವರಿಯಾಗಿರುವ ಪ್ರದೇಶಗಳನ್ನು ಕಾನೂನು ರೀತಿ ಸರ್ಕಾರದ ವಶಕ್ಕೆ ತೆಗೆದುಕೊಳ್ಳಬೇಕು. ಇದರ ಜತೆಗೆ ಸರ್ಕಾರಿ ನೆಲಗಳ್ಳರ ವಿರುದ್ಧ ಕಾನೂನು ರೀತಿ ತನಿಖಾ ಸಂಸ್ಥೆಯಲ್ಲಿ ಪ್ರಕರಣ ದಾಖಲಿಸಬೇಕು. ಒಟ್ಟು .2,600 ಕೋಟಿಗಿಂತ ಹೆಚ್ಚು ಮೌಲ್ಯದ ಭೂಕಬಳಿಕೆ ಪ್ರಕರಣಗಳನ್ನು ಸಿಬಿಐ ಅಥವಾ ಸಿಐಡಿ ತನಿಖೆಗೆ ವಹಿಸಬೇಕು. ಈ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಹಣ ಪಡೆದು ಅನರ್ಹರಿಗೂ ಬಿಪಿಎಲ್‌ ಕಾರ್ಡ್‌: ಎನ್‌.ಆರ್‌. ರಮೇಶ್‌

Follow Us:
Download App:
  • android
  • ios