ಫೆಬ್ರವರಿಯಲ್ಲಿ ರಾಜ್ಯ ಬಜೆಟ್‌: ಸಿಎಂ ಬಸವರಾಜ ಬೊಮ್ಮಾಯಿ

ಫೆಬ್ರವರಿ ತಿಂಗಳಲ್ಲಿ ರಾಜ್ಯ ಬಜೆಟ್‌ ಮಂಡಿಸಲಾಗುವುದು. ಈಗಾಗಲೇ ಹಣಕಾಸು ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆ ನಡೆಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 

State Budget Scheduled On February 2023 Says CM Basavaraj Bommai gvd

ಹಾವೇರಿ (ಡಿ.25): ಫೆಬ್ರವರಿ ತಿಂಗಳಲ್ಲಿ ರಾಜ್ಯ ಬಜೆಟ್‌ ಮಂಡಿಸಲಾಗುವುದು. ಈಗಾಗಲೇ ಹಣಕಾಸು ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆ ನಡೆಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾಂವಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಬೆಳಗಾವಿ ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘ-ಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು. ಜನವರಿ ತಿಂಗಳಿನಿಂದ ಬಜೆಟ್‌ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಐಎಲ್‌ಐ ಮತ್ತು ಸಾರಿ ಪ್ರಕರಣಗಳ ಪರೀಕ್ಷೆ ಹೆಚ್ಚಿಸಲಾಗುವುದು. ಜತೆಗೆ ಬೂಸ್ಟರ್‌ ಡೋಸ್‌ ನೀಡುವಿಕೆಯನ್ನು ಹೆಚ್ಚಿಸಲಾಗುವುದು. ಆಸ್ಪತ್ರೆಗಳಲ್ಲಿ ಆಕ್ಸಿಜನ್‌, ಬೆಡ್‌ಗಳು ಸೇರಿದಂತೆ ಮೂಲಭೂತ ಸೌಕರ್ಯ, ತಂತ್ರಜ್ಞಾನ ಅಳವಡಿಸಲಾಗುವುದು. ಐಸಿಯು ಘಟಕಗಳನ್ನು ಸಿದ್ಧಪಡಿಸಿಕೊಳ್ಳುವುದು. ಮಾಸ್‌್ಕ ಧರಿಸಬೇಕು ಹಾಗೂ ಅಂತರ ಕಾಯ್ದುಕೊಳ್ಳಬೇಕು. ಏರ್‌ಪೋರ್ಟ್‌ಗಳಲ್ಲಿ ಹಾಗೂ ಬಸ್‌ ನಿಲ್ದಾಣಗಳಲ್ಲಿ ನಿಗಾ ಇಡಲು ಸೂಚನೆ ನೀಡಿದ್ದೇವೆ. ಮೊದಲು ಪಾಲಿಸುತ್ತಿದ್ದ ನಿಯಂತ್ರಣಾ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

ಸಂಪುಟ ಸರ್ಕಸ್‌: ಸೋಮವಾರ ಸಿಎಂ ಬೊಮ್ಮಾಯಿ ದಿಲ್ಲಿಗೆ

ಸಾಹಿತ್ಯ ಸಮ್ಮೇಳನದಲ್ಲಿ ಮುಂಜಾಗ್ರತಾ ಕ್ರಮ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊರೋನಾತಂಕದ ಕುರಿತು ಪ್ರತಿಕ್ರಿಯೆ ನೀಡಿ, ಸಮ್ಮೇಳನ ಬಯಲು ಪ್ರದೇಶದಲ್ಲಿ ಆಗುವುದರಿಂದ ತೊಂದರೆಯ ಸಾಧ್ಯತೆ ಇಲ್ಲ. ಆದರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಮಾರ್ಗಸೂಚಿಗಳನ್ನು ಸೂಚಿಸಲಾಗುವುದು ಎಂದರು.

ಬಿಬಿಎಂಪಿ ಬಜೆಟ್‌ಗೆ ಸಿದ್ಧತೆ ಆರಂಭ: ಬಿಬಿಎಂಪಿಯ 2023-24ನೇ ಸಾಲಿನ ಆಯವ್ಯಯ ಸಿದ್ಧತೆ ಕುರಿತು ಪೂರ್ವ ತಯಾರಿ ಪ್ರಕ್ರಿಯೆಗೆ ಹಣಕಾಸು ವಿಭಾಗದ ಚಾಲನೆ ನೀಡಿದ್ದು, ಡಿಸೆಂಬರ್‌ ಅಂತ್ಯಕ್ಕೆ ವಿಭಾಗವಾರು ಬೇಡಿಕೆ ಸಲ್ಲಿಸುವಂತೆ ಪತ್ರ ಬರೆಯಲು ತೀರ್ಮಾನಿಸಿದೆ. 2022-23ನೇ ಆರ್ಥಿಕ ವರ್ಷ ಮುಕ್ತಾಯವಾಗಲು ಇನ್ನು ಮೂರೂವರೆ ತಿಂಗಳು ಮಾತ್ರ ಬಾಕಿ ಉಳಿದಿದೆ. 2023ರ ಮಾಚ್‌ರ್‍ 31ರೊಳಗೆ 2023-24ನೇ ಸಾಲಿನ ಬಜೆಟ್‌ ಸಿದ್ಧಪಡಿಸಿ ಮಂಡಿಸಬೇಕಿದೆ. ಹೀಗಾಗಿ ಈಗಿನಿಂದಲೇ ಬಜೆಟ್‌ ಸಿದ್ಧತೆ ಪಡಿಸಲು ಬಿಬಿಎಂಪಿ ಪೂರ್ವ ತಯಾರಿ ಆರಂಭಿಸಿದೆ. 

ಬಿಬಿಎಂಪಿಯಲ್ಲಿ ವಿವಿಧ ವಿಭಾಗಗಳಲ್ಲಿ 2023-24ನೇ ಸಾಲಿನಲ್ಲಿ ಕೈಗೊಳ್ಳಲಿರುವ ಯೋಜನೆಗಳು, ನಿರ್ವಹಣೆಗೆ ಮಾಡಬೇಕಾದ ವೆಚ್ಚಗಳ ಮಾಹಿತಿ ನೀಡುವಂತೆ ಸೂಚಿಸಿ ಪತ್ರ ಬರೆಯುವುದಕ್ಕೆ ಬಿಬಿಎಂಪಿ ಹಣಕಾಸು ವಿಭಾಗ ಮುಂದಾಗಿದೆ. ಹಣಕಾಸು ವಿಭಾಗದ ಅಧಿಕಾರಿಗಳು ಈಗಾಗಲೆ ಅನೌಪಚಾರಿಕವಾಗಿ ಮಾತುಕತೆ ನಡೆಸಿದ್ದಾರೆ. ಇನ್ನೊಂದು ವಾರದಲ್ಲಿ ಬಜೆಟ್‌ ಸಿದ್ಧತೆಯ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಈ ವೇಳೆ ಬಜೆಟ್‌ ಗಾತ್ರ ಕುರಿತು ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ. ಜನವರಿ ಅಂತ್ಯದೊಳಗೆ ಎಲ್ಲ ವಿಭಾಗಗಳಿಂದ 2023-24ನೇ ಸಾಲಿನಲ್ಲಿ ಬೇಕಾಗುವ ಅನುದಾನ ಮತ್ತು ಯೋಜನೆಗಳ ಕುರಿತು ಮಾಹಿತಿ ಸಂಗ್ರಹಿಸಲಿದೆ. ಅದರ ಜತೆಗೆ ಹಂತಹಂತವಾಗಿ ವಿಭಾಗವಾರು ಸಭೆಯನ್ನೂ ನಡೆಸಲಿದ್ದಾರೆ.

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

ಬಜೆಟ್‌ ಅನುಷ್ಠಾನ ಎಷ್ಟು?: 2022-23ನೇ ಸಾಲಿನ ಬಜೆಟ್‌ನಲ್ಲಿ ವಿಭಾಗಕ್ಕೆ ನೀಡಲಾದ ಅನುದಾನ, ಅದರಲ್ಲಿ ಮಾಡಲಾದ ಖರ್ಚಿನ ವಿವರವನ್ನೂ ಪಡೆಯಲಾಗುತ್ತದೆ. ಅದಕ್ಕಾಗಿ ಅನ್‌ಲೈನ್‌ ವ್ಯವಸ್ಥೆ ಮಾಡಲಾಗುತ್ತಿದ್ದು, ವಿಭಾಗವಾರು ಅಧಿಕಾರಿಗಳು ಆನ್‌ಲೈನ್‌ ಮೂಲಕವೇ ಮಾಹಿತಿಯನ್ನು ಹಣಕಾಸು ವಿಭಾಗಕ್ಕೆ ನೀಡಬೇಕಿದೆ. ಆ ಮಾಹಿತಿ ಪ್ರಕಾರ ಅನುದಾನ ಉಳಿದಿದ್ದರೆ, ಅದನ್ನು 2023-24ನೇ ಸಾಲಿಗೆ ಬಳಕೆ ಮಾಡುವ ಕುರಿತಂತೆ ಹೊಸ ಬಜೆಟ್‌ನಲ್ಲಿ ಸೇರಿಸಲಾಗುತ್ತದೆ.

Latest Videos
Follow Us:
Download App:
  • android
  • ios