ಸರ್ಕಾರಿ ಜಾಗದಲ್ಲಿ ಖಾಸಗಿ ಸಂಸ್ಥೆಗಳು ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಪಡೆಯಬೇಕೆಂಬ ಸರ್ಕಾರದ ಆದೇಶಕ್ಕೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ.
ಬೆಂಗಳೂರು: ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಸರ್ಕಾರದ ಅನುಮತಿ ಪಡೆಯಬೇಕೆಂಬ ಆದೇಶಕ್ಕೆ ನೀಡಲಾಗಿದ್ದ ತಡೆಯನ್ನು ರಾಜ್ಯ ಸರ್ಕಾರ ಮೇಲ್ಮನವಿ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ನ್ಯಾ.ನಾಗಪ್ರಸನ್ನ ಅವರ ನೀಡಿದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿಯನ್ನು ಸಲ್ಲಿಕೆ ಮಾಡಿತ್ತು. ಈ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾ.ಎಸ್.ಜಿ.ಪಂಡಿತ್ ಹಾಗೂ ನ್ಯಾ.ಗೀತಾ ಕೆ.ಬಿ ಅವರ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ತಡೆಯಾಜ್ಞೆ ತೆರವಿಗೆ ಏಕಸದಸ್ಯ ಪೀಠದಲ್ಲಿ ಮನವಿ ಸಲ್ಲಿಸಲು ವಿಭಾಗೀಯ ಪೀಠ ಅವಕಾಶ ನೀಡಿದೆ. ಎಲ್ಲಾ ವಾದಗಳನ್ನು ಮುಕ್ತವಾಗಿರಿಸಲಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಅಕ್ಟೋಬರ್ 28ರದು ಮಧ್ಯಂತರ ತಡೆಯಾಜ್ಞೆ
ಸರ್ಕಾರಿ ಆವರಣದಲ್ಲಿ ಚಟುವಟಿಕೆಗಳನ್ನು ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ನಿರ್ದೇಶನಕ್ಕೆ ರಾಜ್ಯ ಹೈಕೋರ್ಟ್‌ನ ಧಾರವಾಡ ಪೀಠ ಅಕ್ಟೋಬರ್ 28ರದು ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ಸಂಬಂಧ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.
ಸರ್ಕಾರಕ್ಕೆ ಪತ್ರ ಬರೆದಿದ್ರು ಪ್ರಿಯಾಂಕ್ ಖರ್ಗೆ
ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗೆ ನಿಷೇಧ ಹೇರುವಂತೆ ಆಗ್ರಹಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ, ಸರ್ಕಾರಿ ಆವರಣದಲ್ಲಿ ಚಟುವಟಿಕೆಗಳನ್ನು ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆ ಮೂಲಕ, ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಪರೋಕ್ಷವಾಗಿ ಕಡಿವಾಣ ಹಾಕಲು ಸರ್ಕಾರ ಮುಂದಾಗಿತ್ತು.
ಇದನ್ನೂ ಓದಿ: ಇಂದು ಆರೆಸ್ಸೆಸ್ ಪಥಸಂಚಲನ; ಕೆಂಭಾವಿ ಪಟ್ಟಣ ಸಂಪೂರ್ಣ ಕೇಸರಿಮಯ!
ಸರ್ಕಾರದ ಈ ಆದೇಶ ಪ್ರಶ್ನಿಸಿ ಹುಬ್ಬಳ್ಳಿಯ ಪುನಶ್ಚೇತನ ಸೇವಾ ಸಂಸ್ಥೆ, ವಿ.ಕೆ.ಫೌಂಡೇಶನ್, ಧಾರವಾಡದ ರಾಜೀವ್ ಮಲ್ಹಾರ ಕುಲಕರ್ಣಿ, ಬೆಳಗಾವಿಯ ಬೌದ್ಧ ಪ್ರಚಾರಕ ಉಮಾ ಚವ್ಹಾಣ ಎಂಬುವರು ಅ.24ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನೂ ಓದಿ: RSS Route March: ಚಿತ್ತಾಪುರ ಪಥಸಂಚಲನಕ್ಕೆ 2 ದಿನಾಂಕ ಫಿಕ್ಸ್? ಪ್ರಸ್ತಾವನೆಯಲ್ಲಿ ಏನಿದೆ?
