Asianet Suvarna News Asianet Suvarna News

ಗ್ರಾಮ ಪಂಚಾಯತಿಗಳಿಗೆ ರಾಜ್ಯ ಸರ್ಕಾರ ಡೆಂಘೀ ಅಲರ್ಟ್: ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಗ್ರಾಮೀಣ ಭಾಗ ದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಕೈಗೊಳ್ಳಲು ಪಂಚಾಯತ್‌ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿವರವಾದ ಮಾರ್ಗಸೂಚಿ ನೀಡಿದ್ದಾರೆ. 
 

State Govt Dengue Alert to Gram Panchayats says Minister Priyank Kharge gvd
Author
First Published Jul 8, 2024, 11:40 AM IST | Last Updated Jul 8, 2024, 12:53 PM IST

ಬೆಂಗಳೂರು (ಜು.08): ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಗ್ರಾಮೀಣ ಭಾಗ ದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಕೈಗೊಳ್ಳಲು ಪಂಚಾಯತ್‌ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿವರವಾದ ಮಾರ್ಗಸೂಚಿ ನೀಡಿದ್ದಾರೆ. ಕುಡಿಯುವ ನೀರಿನ ಸರಬರಾಜು ಟ್ಯಾಂಕ್‌ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಬೇಕು. ಮನೆ, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘ ಕಾಲ ನಿಲ್ಲದಂತೆ ಕ್ರಮ ವಹಿಸಬೇಕು. 

ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ಸಂಗ್ರಹವಾಗದಂತೆ ನೀರು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸೂಚಿಸಿದ್ದಾರೆ. ಅಂಗನವಾಡಿ, ಶಾಲಾ- ಕಾಲೇಜುಗಳು, ಆವರಣಗಳಲ್ಲಿ ಮಳೆ ನೀರು ಸಂಗ್ರಹವಾಗ ದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಡೆಂಘೀಗೆ ಕಾರಣ ವಾದ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾ ಗದಂತೆ ಕ್ರಮ ವಹಿಸಬೇಕು. ರಸ್ತೆಗಳಲ್ಲಿ ಮಳೆಯ ನೀರು ನಿಲ್ಲದಂತೆ ಗುಂಡಿ ಹಾಗೂ ತಗ್ಗುಗಳನ್ನು ಮುಚ್ಚಬೇಕು. ಸಾರ್ವಜನಿಕ ನಲ್ಲಿಗಳು ಹಾಗೂ ಕೊಳವೆ ಬಾವಿಗಳಿಂದ ಅಳವಡಿಸಲು ಹೆಚ್ಚುವರಿ ನೀರು ಹರಿಸಬೇಕು. ನೀರು ಸೋರಿಕೆ ತಡೆ, ನೀರು ಸರಾಗವಾಗಿ ಹೊರಗೆ ಹೋಗಲು ಹೂಳನ್ನು ಎತ್ತಿ ಸ್ವಚ್ಛವಾಗಿಸಬೇಕು. 

ಕುಡಿಯುವ ನೀರಿನ ಪೂರೈಕೆ ನಳಗಳಿಗೆ ಕಂಟ್ರೋಲ್ ವಾಲ್ಸ್ ಗಳನ್ನು ಕಡ್ಡಾಯವಾಗಿ ಕ್ರಮ ಕೈಗೊಳ್ಳಬೇಕು, ಇದರಿಂದ ನಳಗಳ ಸುತ್ತಲಿನ ಗುಂಡಿಗಳಲ್ಲಿ ನೀರು ಶೇಖರಣೆ ಯಾಗುವುದನ್ನು ಹಾಗೂ ಈಡಿಸ್ ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಯಬಹುದು ಎಂದು ತಿಳಿಸಿದ್ದಾರೆ. ಎಳನೀರು ಮಾರಾಟಗಾರರು ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಲು ಬುರುಡೆಗಳನ್ನು ನಾಲ್ಕು ಭಾಗ ಮಾಡಿ ಬೋರಲು ಇಟ್ಟು ಪ್ರತಿದಿನ ಕಡ್ಡಾಯವಾಗಿ ವಿಲೇವಾರಿ ಮಾಡುವಂತೆ ನೋಡಿಕೊಳ್ಳಬೇಕು. 

ಮಹದಾಯಿ ಕಣಿವೆಗೆ ಕೇಂದ್ರ ತಂಡದ ಭೇಟಿ: ಗೋವಾದ ಸುಳ್ಳು ಆರೋಪಗಳ ಕುರಿತು ಮನವರಿಕೆ

ಆರೋಗ್ಯ ಸಿಬ್ಬಂದಿ ಯವರ ಜೊತೆಗೆ ಗ್ರಾಮ ಪಂಚಾಯತಿಗಳ ಸ-ಸಹಾಯ ಸದಸ್ಯರು, ಮಹಿಳಾ ಗುಂಪುಗಳ ಸದಸ್ಯರು, ಅಂಗನವಾಡಿ, ಶಾಲೆ ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಶಿಕ್ಷಣದ ಮೂಲಕ ಅರಿವು ಕಾರ್ಯಕ್ರಮಗಳನ್ನು ಮೂಡಿಸುವ ಹಮ್ಮಿಕೊಳ್ಳಬೇಕು ಎಂದೂ ಸಚಿವರು ತಮ್ಮ ಮಾರ್ಗದರ್ಶನ ಸೂಚಿಯಲ್ಲಿ ಹೇಳಿದ್ದಾರೆ. ಗ್ರಾಮ ಮಟ್ಟದಲ್ಲಿರುವ ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿ' ಗಳನ್ನು ಡೆಂಘೀ ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಗ್ರಾಮ ಕಾರ್ಯಕ್ರಮ ಪಂಚಾಯತಿಗಳು ಹಾಕಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios