‘ಚಂದ್ರಯಾನ-3’ ಯಶಸ್ವಿಗೊಳಿಸಿ ಐತಿಹಾಸಿಕ ಸಾಧನೆ ಮಾಡಿದ ಇಸ್ರೋ ಅಧ್ಯಕ್ಷರು ಹಾಗೂ ಇತರೆ ವಿಜ್ಞಾನಿಗಳನ್ನು ಖುದ್ದು ಭೇಟಿ ಮಾಡಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಧಾನಸೌಧದಲ್ಲಿ ಶೀಘ್ರ ವಿಶೇಷ ಕಾರ್ಯಕ್ರಮ ಆಯೋಜಿಸಿ ಇಸ್ರೋ ವಿಜ್ಞಾನಿಗಳನ್ನು ಸರ್ಕಾರ ಗೌರವಿಸಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು (ಆ.24) ‘ಚಂದ್ರಯಾನ-3’ ಯಶಸ್ವಿಗೊಳಿಸಿ ಐತಿಹಾಸಿಕ ಸಾಧನೆ ಮಾಡಿದ ಇಸ್ರೋ ಅಧ್ಯಕ್ಷರು ಹಾಗೂ ಇತರೆ ವಿಜ್ಞಾನಿಗಳನ್ನು ಖುದ್ದು ಭೇಟಿ ಮಾಡಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಧಾನಸೌಧದಲ್ಲಿ ಶೀಘ್ರ ವಿಶೇಷ ಕಾರ್ಯಕ್ರಮ ಆಯೋಜಿಸಿ ಇಸ್ರೋ ವಿಜ್ಞಾನಿಗಳನ್ನು ಸರ್ಕಾರ ಗೌರವಿಸಲಿದೆ ಎಂದು ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ ನಗರದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಇಸ್ರೋದ ಇಸ್ಟ್ರಾಕ್‌ ಕೇಂದ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಅವರು, ಅಧ್ಯಕ್ಷ ಎಸ್‌.ಸೋಮನಾಥ್‌(S Somanath) ಹಾಗೂ ಚಂದ್ರಯಾನ-3 (Chandrayan-3) ಯಶಸ್ಸಿಗೆ ಕಾರಣರಾದ ಎಲ್ಲ ವಿಜ್ಞಾನಿಗಳಿಗೆ ಸಿಹಿ ವಿತರಿಸಿ, ಶಾಲು, ಪೇಟ ತೊಡಿಸಿ ಅಭಿನಂದಿಸಿದರು.

Chandrayaan-3 Updates: ಚಂದ್ರನ ಕಕ್ಷೆಯಲ್ಲಿ ಚಂದ್ರಯಾನ-2 ಜೊತೆ ಸಂಪರ್ಕ ಸಾಧಿಸಿದ ವಿಕ್ರಮ್‌ ಲ್ಯಾಂಡರ್‌!

ಬಳಿಕ ಮಾತನಾಡಿದ ಅವರು, ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್‌(Vikram lander) ಅನ್ನು ಇಸ್ರೋ(ISRO) ಸುರಕ್ಷಿತವಾಗಿ ಇಳಿಸಿರುವುದು ಐತಿಹಾಸಿಕ ಸಾಧನೆ. ಇಸ್ರೋ ಸಾಧನೆಯಿಂದ ಇಡೀ ಜಗತ್ತು ಭಾರತದ ಕಡೆಗೆ ನೋಡುವಂತಾಗಿದೆ. ರಷ್ಯಾ, ಅಮೆರಿಕ, ಚೀನಾ ನಂತರ ಇದೀಗ ಭಾರತ ಚಂದ್ರನ ಮೇಲೆ ಕಾಲಿರಿಸಿದ ನಾಲ್ಕದೇ ರಾಷ್ಟ್ರವೆನಿಸಿದೆ. ಅದರಲ್ಲೂ ಚಂದ್ರನ ದಕ್ಷಿಣ ಭಾಗದಲ್ಲಿ ಕಾಲಿರಿಸಿರುವ ಮೊದಲ ದೇಶವಾಗಿದೆ. ನಾವೆಲ್ಲರೂ ಇಸ್ರೋ ಸಾಧನೆಯನ್ನು ಮೆಚ್ಚಿ ಅಭಿನಂದಿಸಬೇಕು ಎಂದರು.

ಸರ್ಕಾರದಿಂದ ಶೀಘ್ರ ಗೌರವ:

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌(Vidhana Soudha Banquet Hall)ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಶೀಘ್ರದಲ್ಲೇ ಇಸ್ರೋ ವಿಜ್ಞಾನಿಗಳನ್ನು ಸರ್ಕಾರ ಗೌರವಿಸಲಿದೆ ಎಂದು ಇದೇ ವೇಳೆ ಮುಖ್ಯಮಂತ್ರಿ ಅವರು ತಿಳಿಸಿದರು.

Chandrayaan-3: ಇಸ್ರೋ ಮಾತ್ರವಲ್ಲ ವಿಕ್ರಮನ ಬೆನ್ನುಬಿದ್ದಿದೆ ನಾಸಾ, ಯುರೋಪಿಯನ್‌ ಸ್ಪೇಸ್‌ ಏಜೆನ್ಸಿ!

ಇಸ್ರೋ ಅಧ್ಯಕ್ಷ ಸೋಮನಾಥ್‌(ISRO Chairman Somnath) ಸೇರಿದಂತೆ ಕರ್ನಾಟಕದ 500 ವಿಜ್ಞಾನಿಗಳು ‘ಚಂದ್ರಯಾನ-3’ರಲ್ಲಿ ಪಾಲ್ಗೊಂಡಿದ್ದು, ಅವರೆಲ್ಲರಿಗೂ ಸನ್ಮಾನಿಸಲಾಗುವುದು. 3.84 ಲಕ್ಷ ಕಿ.ಮೀ ಪ್ರಯಾಣ ಮಾಡಿರುವ ವಿಕ್ರಂ ಸಾಧನೆ ಕಡಿಮೆಯಲ್ಲ. ಇಸ್ರೋಗೆ ನಮ್ಮ ಸರ್ಕಾರದ ಸಹಕಾರ, ಬೆಂಬಲ ಸದಾ ಇರಲಿದೆ. ಇದು ದೇಶದ ಹೆಮ್ಮೆ. ಐತಿಹಾಸಿಕ ಸಾಧನೆಗೆ ವಿಜ್ಞಾನಿಗಳು ಹಗಲು ಇರುಳು ಎನ್ನದೆ ಶ್ರಮಿಸಿದ್ದಾರೆ. ದೇಶದ ಒಟ್ಟು ಒಂದು ಸಾವಿರ ವಿಜ್ಞಾನಿಗಳು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಿಂದಲೇ 500 ಜನ ಪಾಲ್ಗೊಂಡಿದ್ದಾರೆ. ಸೆಪ್ಟೆಂಬರ್‌ 2ರ ನಂತರ ಅವರೆಲ್ಲರಿಗೂ ಸನ್ಮಾನ ಕಾರ್ಯಕ್ರಮ ಆಯೋಜಿಸಲು ದಿನಾಂಕ ನಿಗದಿಪಡಿಸಲಾಗುವುದು ಎಂದು ಹೇಳಿದರು.