ಮಂಡ್ಯದಲ್ಲಿ ರಾಜ್ಯಮಟ್ಟದ ಸಿರಿಧಾನ್ಯ ಮೇಳ: ಬೆಲ್ಲದ ಪರಿಷೆ ವಿಶೇಷತೆ ಇಲ್ಲಿದೆ ನೋಡಿ..
ಸಕ್ಕರೆನಾಡು ಮಂಡ್ಯ ನಗರದಲ್ಲಿ ಆ.28ರಂದು ರಾಜ್ಯಮಟ್ಟದ ಸಿರಿಧಾನ್ಯ ಮೇಳವನ್ನು ಆಯೋಜನೆ ಮಾಡಲಾಗುತ್ತಿದೆ. ಜೊತೆಗೆ, ಜಿಐಎಸ್‌ಟ್ಯಾಗ್ ಹೊಂದಿರುವ ಮಂಡ್ಯ ಬೆಲ್ಲದ ಪರಿಷೆಯನ್ನೂ ಹಮ್ಮಿಕೊಳ್ಳಲಾಗಿದೆ.
ಮಂಡ್ಯ (ಆ.26): ಜಾಗತಿಕ ಮಟ್ಟದಲ್ಲಿ 2023 ವರ್ಷವನ್ನು ಸಿರಿಧಾನ್ಯ ವರ್ಷವೆಂದು ಘೋಷಣೆ ಮಾಡಲಾಗಿದೆ. ಆದರೆ, ಸಿರಿಧಾನ್ಯದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತವರು ಜಿಲ್ಲೆ ಮಂಡ್ಯದಲ್ಲಿ ಆ.28ರಂದು ರಾಜ್ಯಮಟ್ಟದ ಸಿರಿಧಾನ್ಯ ಮೇಳ ಆಯೋಜನೆ ಮಾಡಲಾಗುತ್ತಿದೆ. ಈ ಒಂದು ದಿನದ ರಾಜ್ಯ ಮಟ್ಟದ ಸಿರಿಧಾನ್ಯ ಮೇಳ, ವಸ್ತು ಪ್ರದರ್ಶನ ಮತ್ತು ಬೆಲ್ಲದ ಪರಿಷೆಯನ್ನು ಮಂಡ್ಯ ನಗರದ ಡಾ. ರಾಜ್‌ಕುಮಾರ್ ಬಡಾವಣೆ ಪಕ್ಕದಲ್ಲಿರುವ ವಸ್ತು ಪ್ರದರ್ಶನ ಮೈದಾನದಲ್ಲಿ ಆಯೋಜಿಸಲಾಗಿದೆ.
ರೈತರಲ್ಲಿ ಸಿರಿಧಾನ್ಯ ಬೆಳೆಯುವ ಸಂಸ್ಕೃತಿ ಹೆಚ್ಚಬೇಕು. ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಬೇಕು, ರೈತರು ಬೆಳೆದ ಬೆಳೆಗಳ ಉತ್ಪಾದನೆ ಹೆಚ್ಚು ಮಾಡುವುದರ ಜೊತೆಗರ ಮಾರುಕಟ್ಟೆ ಸೌಲಭ್ಯ ಸಿಗಬೇಕು, ಹೊಸ ತಂತ್ರಜ್ಞಾನದ ಜ್ಞಾನ ಹೆಚ್ಚಾಗಬೇಕು ಎಂಬುದು ಸಿರಿಧಾನ್ಯ ಮೇಳದ ಉದ್ದೇಶವಾಗಿದೆ. 2023 ನ್ನು ಸಿರಿ ಧಾನ್ಯ ವರ್ಷ ಎಂದು ಘೋಷಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ರಾಜ್ಯಮಟ್ಟದ ಸಿರಿಧಾನ್ಯ ಮೇಳವನ್ನು ಆಯೋಜಿಸಲಾಗಿದ್ದು, ರೈತರಿಗೆ ಉಪಯುಕ್ತ ಮಾಹಿತಿ ನೀಡಲಾಗುವುದು. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಬೇಕು. ಈ ಕಾರ್ಯಕ್ರಮದ ಅಂಗವಾಗಿ ಸಿರಿಧಾನ್ಯ ನಡಿಗೆ, ಸಿರಿಧಾನ್ಯ ಪಾಕ ಸ್ಪರ್ಧೆ, ಚಿಣ್ಣರ ಚಿತ್ರಕಲೆ ಹಾಗೂ ಮಂಡ್ಯದ ಬೆಲ್ಲ ಕುರಿತು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ತಿಳಿಸಿದರು.
ಕಾಂಗ್ರೆಸ್‌ನಿಂದ 'ಗೃಹ ಆರೋಗ್ಯ' ಯೋಜನೆ ಜಾರಿ: ವಿಶೇಷತೆ ಬಿಚ್ಚಿಟ್ಟ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಅಂದಿನ ಸಿರಿಧಾನ್ಯ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಾನಿಧ್ಯ ವಹಿಸದ್ದಾರೆ. ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಈ ಮೇಳದಲ್ಲಿ 3,000 ಕ್ಕೂ ಹೆಚ್ಚು ರೈತರು ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರು, ಸಿರಿಧಾನ್ಯ ಬೆಳೆಗಾರರು, ರೈತ ಉತ್ಪಾದಕ ಸಂಸ್ಥೆಗಳು, ಸಂಸ್ಕರಣೆದಾರರು, ಬೆಲ್ಲ ಉತ್ಪಾದಕರು, ಕಿರು ಉದ್ದಿಮೆದಾರರು, ಸ್ವಸಹಾಯ ಸಂಘದ ಸದಸ್ಯರು ಸೇರಿದಂತೆ 3000ಕ್ಕೂ ಅಧಿಕ ಜನರು ಭಾಗವಹಿಸಲಿದ್ದಾರೆ ಎಂದರು.
ಆಹಾರ ಸಂಶೋಧನಾ ಸಂಸ್ಥೆಗಳು ಭಾಗಿ: ಪ್ರತಿಷ್ಠಿತ ಸಂಸ್ಥೆಗಳಿಂದ ಮಾಹಿತಿ ಸಿರಿಧಾನ್ಯ ಮೇಳದಲ್ಲಿ ಪ್ರತಿಷ್ಠಿತ ಆಹಾರ ಸಂಶೋಧನಾ ಸಂಸ್ಥೆಗಳಾದ CFTRI ಮೈಸೂರು, NIFTEM ತಂಜಾವೂರು, IIMR ಹೈದರಾಬಾದ್, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಸೆಂಟರ್ ಆಫ್ ಎಕ್ಸಲೆನ್ಸ್ ಸಂಸ್ಥೆಗಳ ವಿಜ್ಞಾನಿಗಳು ಸಿರಿಧಾನ್ಯ ಸಂಸ್ಕರಣೆ ಕುರಿತು ತಾಂತ್ರಿಕ ಮಾಹಿತಿ ನೀಡಲಿದ್ದಾರೆ. KAPPEC ಸಂಸ್ಥೆ ವತಿಯಿಂದ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ದೊರಕುವ ಆರ್ಥಿಕ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಗುವುದು ಹಾಗೂ ಯೋಜನೆಯ ಅನುಷ್ಠಾನಕ್ಕಾಗಿ ಸಾಲ ಸೌಲಭ್ಯ ನೀಡಲು ಅವಶ್ಯವಿರುವ ದಾಖಲಾತಿ ಹಾಗೂ ಮಾಹಿತಿಯನ್ನು ನೀಡಲು ಬ್ಯಾಂಕ್ ಸಲಹಾ ಕೇಂದ್ರದ ವ್ಯವಸ್ಥೆ ಮಾಡಲಾಗಿದೆ ಎಂದರು.
ಅಮೇರಿಕಾದಲ್ಲಿ ಮೃತಪಟ್ಟ ದಾವಣಗೆರೆ ಕುಟುಂಬದ ಮೃತದೇಹಗಳನ್ನೂ ಕನ್ನಡ ನಾಡಿಗೆ ತರಲಾಗಲಿಲ್ಲ: ಅಂತಿಮ ದರ್ಶನವೂ ಸಿಗಲಿಲ್ಲ
ಜಿಐ ಟ್ಯಾಗ್ ಸಿಕ್ಕ ನಂತರ ಮಂಡ್ಯ ಬೆಲ್ಲಕ್ಕೆ ಬೇಡಿಕೆ ಹೆಚ್ಚಳ: ಬೆಲ್ಲ ಬಳಸಲು ಅರಿವು ಮಂಡ್ಯ ಜಿಲ್ಲೆಯ ಕಬ್ಬು ಬೆಳೆಗಾರರು ಹಲವಾರು ವರ್ಷಗಳಿಂದ ಬೆಲ್ಲ ಉತ್ಪಾದನೆಯಲ್ಲಿ ತೊಡಗಿದ್ದು, ರಾಷ್ಟ್ರದಲ್ಲಿ ಮಂಡ್ಯದ ಬೆಲ್ಲ ಹೆಸರುವಾಸಿಯಾಗಿದೆ. ಬೆಲ್ಲವನ್ನು ಔಷಧಿಯಾಗಿ, ಆಹಾರಕ್ಕಾಗಿ ಶತಮಾನಗಳಿಂದಲೂ ಬಳಸಲಾಗುತ್ತಿದೆ. ದೇಹದ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ, ದೇಹದ ರೋಗ ನಿರೋಧಕ ಶಕ್ತಿಯನ್ನು ಅಭಿವೃದ್ಧಿಪಡಿಸುವಲ್ಲಿ ಬೆಲ್ಲದ ಪಾತ್ರ ದೊಡ್ಡದು. ನಗರ ಪ್ರದೇಶಗಳಲ್ಲಿ ಸಕ್ಕರೆಗೆ ಪರ್ಯಾಯವಾಗಿ ಬೆಲ್ಲದ ಬಳಕೆ ಕುರಿತು ಅರಿವು ಮೂಡಿಸುವುದು ಇಂದಿನ ಆದ್ಯತೆಯಾಗಿದೆ. ಸಕ್ಕರೆ ಬದಲು ಬೆಲ್ಲವನ್ನು ಬಳಸಿದಾಗ ಜಿಲ್ಲೆಯ ಬೆಲ್ಲ ತಯಾರಿಕರಿಗೆ ಹಾಗೂ ಕಬ್ಬು ಬೆಳೆಗಾರರಿಗೆ ಹೆಚ್ಚು ಅನುಕೂಲ ಹಾಗೂ ಲಾಭದಾಯಕವಾಗುತ್ತದೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಬೆಲ್ಲದ ಉತ್ಪನ್ನವು ಅಯ್ಕೆಯಾಗಿ ರಾಜ್ಯದಲ್ಲಿ ಹೆಚ್ಚಿನ ಅನುದಾನ ಬಳಕೆ-ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ ಎಂದರು.