ವಿಧಾನಸಭೆ: ಸಾರ್ವಜನಿಕ ಶೌಚಾಲಯ ನಿಲ್ಲಿಸಿ: ಬಿಎಸ್‌ವೈ ಸಲಹೆ

ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆಗಳು ಸರಿಯಾಗಿ ನಡೆಯುತ್ತಿಲ್ಲ. ಹೀಗಾಗಿ ಸಾರ್ವಜನಿಕ ಶೌಚಾಲಯಗಳನ್ನು ನಿಲ್ಲಿಸಿ ಮನೆ ಮನೆಗೂ ಶೌಚಾಲಯ ಕಾರ್ಯಕ್ರಮ ರೂಪಿಸಬೇಕು ಎಂದು ಬಿಜೆಪಿ ಹಿರಿಯ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಲಹೆ ನೀಡಿದರು.

Stop public toilets BSY advises in assembly bengaluru rav

ವಿಧಾನಸಭೆ (ಫೆ.21) : ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆಗಳು ಸರಿಯಾಗಿ ನಡೆಯುತ್ತಿಲ್ಲ. ಹೀಗಾಗಿ ಸಾರ್ವಜನಿಕ ಶೌಚಾಲಯಗಳನ್ನು ನಿಲ್ಲಿಸಿ ಮನೆ ಮನೆಗೂ ಶೌಚಾಲಯ ಕಾರ್ಯಕ್ರಮ ರೂಪಿಸಬೇಕು ಎಂದು ಬಿಜೆಪಿ ಹಿರಿಯ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (BS Yadiyurappa)ಸಲಹೆ ನೀಡಿದರು.

ಸಾರ್ವಜನಿಕ ಶೌಚಾಲಯ(public toilets)ಗಳು ಸ್ವಚ್ಛತೆಯಿಂದ ಕೂಡಿಲ್ಲ ಮತ್ತು ನೀರಿನ ಕೊರತೆ ನೀಗಿಸಲು ಕಷ್ಟಕರವಾಗಿದೆ. ಹೀಗಾಗಿ ಶೇ.90ರಷ್ಟುಸಾರ್ವಜನಿಕ ಶೌಚಾಲಯಗಳು ಬಾಗಿಲು ಹಾಕಿವೆ. ಸಾರ್ವಜನಿಕ ಶೌಚಾಲಯಗಳನ್ನು ಮುಚ್ಚಿ ಮನೆ ಮನೆಗೂ ಶೌಚಾಲಯ ಕಾರ್ಯಕ್ರಮ ರೂಪಿಸಬೇಕು ಎಂದು ಹೇಳಿದರು.

ಸುಳ್ಳಿನ ಸುಳಿಯೇ ಕಾಂಗ್ರೆಸ್ಸಿಗೆ ಮಾರಕವಾಗಲಿದೆ: ಸಿಎಂ ಕಿಡಿ

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj bommai), ಇಂತಹ ಪ್ರಯತ್ನ ಮಾಡಿದರೆ ಕೆಲವರು ನಮ್ಮ ಮೇಲೆಯೇ ತಿರುಗಿ ಬೀಳುತ್ತಾರೆ. ಜನರೂ ಸಹ ಜಾಗೃತರಾಗಬೇಕು. ಸ್ವಚ್ಛತೆ ಕಾಪಾಡಲು ಜನರು ಕೈ ಜೋಡಿಸಬೇಕು. ನಿರ್ವಹಣೆ ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ ನಿರ್ವಹಣೆ ವೆಚ್ಚವನ್ನು ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ ಎಂದರು.

200 ಪಿಯು ಕಾಲೇಜಲ್ಲಿ ವಿಜ್ಞಾನ ವಿಭಾಗ

ವಿಧಾನಸಭೆ: ರಾಜ್ಯದ 200ಕ್ಕೂ ಹೆಚ್ಚು ಪಿಯುಸಿ ಕಾಲೇಜು(Pu collage)ಗಳಲ್ಲಿ ವಿಜ್ಞಾನ ವಿಷಯವನ್ನು ಆರಂಭಿಸಿ ಪ್ರಯೋಗಾಲಯ ವ್ಯವಸ್ಥೆ ಸೇರಿದಂತೆ ಎಲ್ಲಾ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶ್ವಾಸನೆ ನೀಡಿದ್ದಾರೆ.

ರಾಜ್ಯದ ಹಲವು ಕಾಲೇಜುಗಳಲ್ಲಿ ಕಲೆ ಮತ್ತು ವಾಣಿಜ್ಯ ವಿಷಯ ಮಾತ್ರ ಕಲಿಸಿಕೊಡಲಾಗುತ್ತಿದೆ. ವಿಜ್ಞಾನ ವಿಷಯ ಇಲ್ಲದಿರುವುದು ಗಮನ ಬಂದಿದೆ. ಹೀಗಾಗಿ ರಾಜ್ಯದ 200ಕ್ಕೂ ಹೆಚ್ಚು ಪಿಯುಸಿ ಕಾಲೇಜುಗಳಲ್ಲಿ ವಿಜ್ಞಾನ ವಿಷಯವನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಅಗತ್ಯ ಇರುವ ಉಪನ್ಯಾಸಕರು, ಪ್ರಯೋಗಾಲಯ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಶಿಕ್ಷಣ(Education)ಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರವು 15 ಸಾವಿರ ಶಿಕ್ಷಕರ ನೇಮಕಾತಿಗೆ ಮುಂದಾಗಿದೆ. ಈ ಪ್ರಕ್ರಿಯೆ ಮುಕ್ತಾಯವಾದ ಬಳಿಕ ಮತ್ತಷ್ಟುಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ-ಕಾಲೇಜುಗಳಿಗೆ ಬರುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಸೇರಿದಂತೆ ಎಲ್ಲ ಕಡೆಯಲ್ಲಿಯೂ ಅಲ್ಪಸಂಖ್ಯಾತರ ಮಕ್ಕಳು ಹೆಚ್ಚು ವಿದ್ಯಾಭ್ಯಾಸ ಮಾಡುತ್ತಿರುವುದು ಕಂಡು ಬರುತ್ತಿದೆ ಎಂದು ಹೇಳಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್‌ ಸದಸ್ಯ ಪ್ರಿಯಾಂಕ್‌ ಖರ್ಗೆ, ಹಿಜಾಬ್‌ ವಿವಾದ ಬಳಿಕ 10 ಸಾವಿರ ಅಲ್ಪಸಂಖ್ಯಾತ ಹೆಣ್ಣು ಮಕ್ಕಳು ಓದು ನಿಲ್ಲಿಸಿದ್ದಾರೆ. ಕಲ್ಯಾಣ ಕರ್ನಾಟಕ ಸೇರಿದಂತೆ ಎಲ್ಲೆಡೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಪಿಯುಸಿಗೆ ಮೊದಲೇ ಶಾಲೆ ಬಿಡುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಈ ಬಗ್ಗೆ ಸರ್ಕಾರದ ಸಮೀಕ್ಷೆಗಳೇ ತಿಳಿಸಿವೆ ಎಂದು ಸರ್ಕಾರದ ಗಮನ ಸೆಳೆದರು.

Kuvempu Airport: ಶಿವಮೊಗ್ಗ ಏರ್‌ಪೋರ್ಟ್‌ ಗೆ ಕುವೆಂಪು ಹೆಸರು: ಸಂಪುಟ ಸಭೆ ನಿರ್ಧಾರ...

ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ಬಹಳ ವರ್ಷಗಳಿಂದಲೂ ಶಾಲೆ ಬಿಡುವ ಮಕ್ಕಳ ಸಂಖ್ಯೆ ಹೆಚ್ಚಿದೆ. ಇದಕ್ಕೆ ಶೈಕ್ಷಣಿಕ ಕಾರಣಗಳು ಮತ್ತು ಸಾಮಾಜಿಕ, ಆರ್ಥಿಕ ಕಾರಣಗಳಿವೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಶಾಲಾ-ಕಾಲೇಜು ಸೇರಿದಂತೆ ಉನ್ನತ ಶಿಕ್ಷಣವನ್ನು ಉಚಿತವಾಗಿ ನೀಡುವ ಭರವಸೆ ನೀಡಿದೆ ಎಂದು ಸಮರ್ಥಿಸಿಕೊಂಡರು.

Latest Videos
Follow Us:
Download App:
  • android
  • ios