* ಕೇಂದ್ರದಿಂದ ಮಿಷನ್ ಶಕ್ತಿ, ಮಿಷನ್ ವಾತ್ಸಲ್ಯ, ಸಕ್ಷಮ್ ಅಂಗನವಾಡಿ ಯೋಜನೆ* ಬೆಂಗಳೂರಿನಲ್ಲಿ ಸಿಎಂ ಭೇಟಿ ಮಾಡಿದ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿಕೆ* ಮಹಿಳೆಯರ ಭದ್ರತೆ, ಸುರಕ್ಷತೆ ಮತ್ತು ಸಬಲೀಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿರುವ ಪ್ರಧಾನಿ ಮೋದಿ
ಬೆಂಗಳೂರು(ಏ.05): ಮಹಿಳೆಯರ(Women) ಕಲ್ಯಾಣಕ್ಕಾಗಿ ಮಿಷನ್ ಶಕ್ತಿ, ಮಿಷನ್ ವಾತ್ಸಲ್ಯ, ಸಕ್ಷಮ್ ಅಂಗನವಾಡಿ ಯೋಜನೆ ಘೋಷಣೆ ಮಾಡಿದ್ದು, ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಯುವ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಲಾಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ(Smriti Irani) ಹೇಳಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಮಹಿಳೆಯರ ಭದ್ರತೆ, ಸುರಕ್ಷತೆ ಮತ್ತು ಸಬಲೀಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ಮಕ್ಕಳ ಸುರಕ್ಷತೆ ಮತ್ತು ದೌರ್ಜನ್ಯ ತಡೆಯುವ ಉದ್ದೇಶದಿಂದ ಜಿಲ್ಲಾವಾರು ಕೇಂದ್ರಗಳನ್ನು ತೆರೆಯಬೇಕೆಂದು ಪ್ರಧಾನಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ 704 ಸಹಾಯವಾಣಿ ಕೇಂದ್ರಗಳನ್ನು(Helpline) ತೆರೆಯಲಾಗಿದ್ದು, ಈ ಕೇಂದ್ರಗಳಲ್ಲಿ ದೈಹಿಕ, ಮಾನಸಿಕ ಕಿರುಕುಳಕ್ಕೆ ಒಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ ನೀಡಲಾಗುತ್ತಿದೆ ಎಂದು ತಿಳಿಸಿದರು.
ತೂಕ ಇಳಿಸಿಕೊಂಡ Smriti Irani, ಈಕೆಯ ಬಹುಮುಖ ಪ್ರತಿಭೆ ಇಲ್ಲಿದೆ ನೋಡಿ!
ಮಹಿಳೆಯರ ಸಬಲೀಕರಣವಾಗದ ಹೊರತು ದೇಶಾಭಿವೃದ್ಧಿ ಅಸಾಧ್ಯ ಎಂಬುದು ಅವರ ನಂಬಿಕೆಯಾಗಿದೆ. ಹಾಗಾಗಿ ಬೇಟಿ ಬಜಾವೋ ಬೇಟಿ ಪಡಾವೋ, ಜನ್‌ಧನ್(Jandhan), ಮುದ್ರಾ(Mudra) ಯೋಜನೆಗಳನ್ನು ಜಾರಿಗೆ ತಂದಿದ್ದು, ಆರ್ಥಿಕವಾಗಿ ಅವರನ್ನು ಸಬಲೀಕರಣಗೊಳಿಸುವ ಉದ್ದೇಶ ಹೊಂದಲಾಗಿದೆ. ಜನಧನ್ ಯೋಜನೆಯಿಂದಾಗಿ 24 ಕೋಟಿ ಮಹಿಳೆಯರು ಮೊದಲ ಬಾರಿಗೆ ಬ್ಯಾಂಕ್ ಖಾತೆ ತೆರೆದಿದ್ದಾರೆ. ಮುದ್ರಾ ಯೋಜನೆ ಅಡಿಯಲ್ಲಿ ಮಹಿಳೆಯರು ಸಾಲ ಪಡೆದು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂದರು.
ಪೋಷಣ್ ಅಭಿಯಾನದಡಿ ಅಂಗನವಾಡಿಗಳನ್ನು ಬಲಪಡಿಸಲಾಗುತ್ತಿದ್ದು, ಸಕ್ಷಮ್ ಯೋಜನೆಯಡಿ ದೇಶದ 14 ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸುವ (ಸ್ಮಾರ್ಟ್) ಯೋಜನೆ ಪ್ರಗತಿಯಲ್ಲಿದೆ. ಈಗಾಗಲೇ 11 ಲಕ್ಷ ಅಂಗನವಾಡಿಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಇದರಿಂದ 9 ಕೋಟಿ ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಲಿದೆ ಎಂದರು. ಜೊತೆಗೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಗೆ ಮತ್ತಷ್ಟುಶಕ್ತಿ ತುಂಬಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.
ರೆಸ್ಟೋರೆಂಟ್ ಕ್ಲೀನ್ ಮಾಡುವುದರಿಂದ ಫೇಮಸ್ ನಟಿಯಾಗಿ ಈಗ ಕೇಂದ್ರ ಸಚಿವೆ; Smriti Irani ಜರ್ನಿ
ಸುದ್ದಿಗೋಷ್ಠಿಯಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್, ಸರ್ಕಾರದ ಕಾರ್ಯದರ್ಶಿ ಎನ್.ಮಂಜುಳಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಫೋಟೋ ತೆಗೆದಿದ್ದು ನಾನು, ಕ್ರೆಡಿಟ್ ಕಸಿದ ಸುದ್ಧಿ ಸಂಸ್ಥೆ ಕಾಲೆಳೆದ ಸ್ಮೃತಿ ಇರಾನಿ
ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಮಾಣವಚನ ಕಾರ್ಯಕ್ರಮದ ಬಳಿಕ ಬಿಜೆಪಿ ನಾಯಕರ ಒಂದು ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದೆ. ನಿತಿನ್ ಗಡ್ಕರಿ, ಅಮಿತ್ ಶಾ, ರಾಜನಾಥ್ ಸಿಂಗ್, ಜೆಪಿ ನಡ್ಡಾ ಹಾಗೂ ಕೊನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕುಳಿತಿರುವ ಫೋಟೋ ಎಲ್ಲಾ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಮಾಧ್ಯಮಗಳು ಈ ಫೋಟೋ ರಾರಾಜಿಸಿದೆ. ಆದರೆ ಈ ಫೋಟೋ ಕ್ಲಿಕ್ ಮಾಡಿದ್ದು ನಾನು ಆದರೆ ಸುದ್ಧಿ ಸಂಸ್ಥೆ ಕ್ರೆಡಿಟ್ ತೆಗೆದುಕೊಂಡಿದೆ ಎಂದು ಕೇಂದ್ರ ಸಚಿವ ಸ್ಮೃತಿ ಇರಾನಿ ಮಾಧ್ಯಮದ ಕಾಲೆಳೆದಿದ್ದರು.
ಯೋಗಿ ಪ್ರಮಾಣವಚನ ಸಮಾರಂಭದಲ್ಲಿ ಸಾಲಾಗಿ ಕುಳಿತಿದ್ದ ಕೇಂದ್ರದ ಸಚಿವರು ಹಾಗೂ ಬಿಜೆಪಿಯ ಹಿರಿಯ ನಾಯಕರೂ ಆಗಿರುವ ಸ್ಟಾರ್‌ಗಳ ಫೋಟೋವನ್ನು ಸ್ಮೃತಿ ಇರಾನಿ ಕ್ಲಿಕ್ ಮಾಡಿದ್ದಾರೆ. ಇದೇ ಫೋಟೋವನ್ನು ಎಲ್ಲಾ ಸುದ್ಧಿ ಸಂಸ್ಥೆಗಳು ಬಳಸಿಕೊಂಡಿದೆ. ಕೆಲ ಮಾಧ್ಯಮದಲ್ಲಿ ಈ ಫೋಟೋಗೆ ಎಎನ್ಐ ಕ್ಲಿಕ್ ಮಾಡಿದ ಫೋಟೋ ಎಂದು ಕ್ರೆಡಿಟ್ ನೀಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಇರಾನಿ, ಸುದ್ಧಿ ಸಂಸ್ಥೆ ಕಾಲೆಳೆದಿದ್ದರು.
