ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಆಕೆಯ ಮಾನಭಂಗಕ್ಕೆ ಯತ್ನಿಸಿದ ಆರೋಪ ಎದುರಿಸುತ್ತಿದ್ದ ಮದರಸಾ ಶಿಕ್ಷಕನಿಗೆ ಬೆಳ್ತಂಗಡಿ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಬೆಳ್ತಂಗಡಿ (ಆ.22): ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಆಕೆಯ ಮಾನಭಂಗಕ್ಕೆ ಯತ್ನಿಸಿದ ಆರೋಪ ಎದುರಿಸುತ್ತಿದ್ದ ಮದರಸಾ ಶಿಕ್ಷಕನಿಗೆ ಬೆಳ್ತಂಗಡಿ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

 ಧರ್ಮಸ್ಥಳ-ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ ಉಪ್ಪಿನಂಗಡಿ ಸಮೀಪದ ಇಳಂತಿಲ ಕಡವಿನಬಾಗಿಲು ಎಂಬಲ್ಲಿ ಹೋಗುತ್ತಿದ್ದ ವೇಳೆ ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜಿನ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿ ಆಕೆಯ ಮಾನಭಂಗಕ್ಕೆ ಯತ್ನಿಸಿದ ಆರೋಪದಡಿ ಮೂಡಿಗೆರೆ ತಾಲೂಕಿನ ಬಣ್ಣ ಮೂಲದ ಮದ್ರಸ ಶಾಲೆಯ ಶಿಕ್ಷಕ ಮುಹಮ್ಮದ್‌ ಸೈಫುಲ್ಲಾ(Muhammad Saifullah madarasa teacher) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ದೆಹಲಿ: 11ರ ಬಾಲಕನಿಗೆ ಲೈಂಗಿಕ ಕಿರುಕುಳ: ಪೋಕ್ಸೋ ಕೇಸಲ್ಲಿ ಮದರಸಾ ಶಿಕ್ಷಕ ಅರೆಸ್ಟ್‌

ಆರೋಪಿ ವಿರುದ್ಧ ಪೊಲೀಸರು ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್‌ ಮತ್ತು ಜೆ.ಎಂ.ಎಫ್‌.ಸಿ. ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶ ದೇವರಾಜ ಎಚ್‌.ಎಂ. ಅವರು ಆರೋಪಿ ಮುಹಮ್ಮದ್‌ ಸೈಫುಲ್ಲಾ ಅಪರಾಧಿ ಎಂದು ಘೋಷಿಸಿದ್ದು ಆತನಿಗೆ 6 ತಿಂಗಳು ಜೈಲು ಶಿಕ್ಷೆ ಮತ್ತು 5 ಸಾವಿರ ರು. ದಂಡ ವಿಧಿಸಿದ್ದಾರೆ. ಪ್ರಾಸಿಕ್ಯೂಶನ್‌ ಪರವಾಗಿ ಬೆಳ್ತಂಗಡಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕ ದಿವ್ಯರಾಜ್‌ ಹೆಗ್ಡೆ ವಾದಿಸಿದ್ದರು.

ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ; ಆಟೋ ಚಾಲಕ ಬಂಧನ

ಕೊಡಗು (ಆ.22): ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತಿಸುತ್ತಿದ್ದ ಆಟೋ ಚಾಲಕನನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.

ಸಿಜಿಲ್ (22) ಬಂಧಿತ ಆರೋಪಿ. ಮಡಿಕೇರಿ ತಾಲೂಕಿನ ಕತ್ತಲೆಕಾಡು ನಿವಾಸಿಯಾಗಿರುವ ಸಿಜಿಲ್. ವೃತ್ತಿಯಲ್ಲಿ ಆಟೋಚಾಲಕನಾಗಿದ್ದು,ಮಾದಕವ್ಯವಸನಿಯಾಗಿದ್ದ. ದಿನನಿತ್ಯ ಮಾದಕ ದ್ರವ್ಯ ಸೇವಿಸಿ ಮೆಡಿಕಲ್ ಕಾಲೇಜ್ ಹಾಸ್ಟೆಲ್ ಬಳಿ ಹೋಗುತ್ತಿದ್ದ ಅಲ್ಲಿನ ವಿದ್ಯಾರ್ಥಿನಿಯರನ್ನು ಕಂಡು ಅಸಭ್ಯವಾಗಿ ವರ್ತಿಸುತ್ತಿದ್ದ ಸಿಜಿಲ್. ಈ ಬಗ್ಗೆ ಪೊಲೀಸರಿಗೆ ದೂರು ಬಂದ ಹಿನ್ನೆಲೆ ಇವನ ಕೃತ್ಯ ಬಯಲಾಗಿದೆ. ಸದ್ಯ ಸಿಜಿಲ್‌ನ ಬಂಧಿಸಿರುವ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು. 

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ: 74ರ ನಿವೃತ್ತ ಪಿಎಸ್‌ಐ ಸೆರೆ