Asianet Suvarna News Asianet Suvarna News

ಸಿದ್ದಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ ಯಶಸ್ವಿ: ಭಕ್ತರಲ್ಲಿ ಸಂತಸ

ಮೇದೋಜ್ಜೀರಕ ಗ್ರಂಥಿಯಿಂದ ಪಿತ್ತಕೋಶಕ್ಕೆ ಹೋಗಬೇಕಾದ ನೀರಿನ ಅಂಶ ಸರಾಗವಾಗಿ ಹೋಗದ ಕಾರಣ ಶ್ರೀಗಳಿಗೆ 11 ಸ್ಟೆಂಟ್ ಗಳನ್ನು ಅಳವಡಿಸಲಾಗಿತ್ತು. ಇಷ್ಟಾದರೂ ಮೇದೋಜ್ಜೀರಕ ಗ್ರಂಥಿಯಿಂದ ಹೋಗುತ್ತಿದ್ದ ನೀರಿನ ಅಂಶ ಗಟ್ಟಿಯಾಗಿ ನಿಲ್ಲುತ್ತಿತ್ತು. ಪರಿಣಾಮವಾಗಿ ಆ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಶಿವಕುಮಾರ ಸ್ವಾಮೀಜಿಯನ್ನು ಸರ್ಜರಿಗಾಗಿ ಶುಕ್ರವಾರದಂದು ಚೆನ್ನೈನ ರೇಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಿದ್ದಗಂಗಾ ಶ್ರೀಗಳಿಗೆ ಡಾ. ಮೊಹಮ್ಮದ್ ರೇಲಾ ನೇತೃತ್ವದಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಶ್ರೀಗಳು ಕ್ಷೇಮವಾಗಿದ್ದು, ಸುಮಾರು 8-10 ವಾರಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಚೆನ್ನೈ[ಡಿ.08]: ಮೇದೋಜ್ಜೀರಕ ಗ್ರಂಥಿಯಿಂದ ಪಿತ್ತಕೋಶಕ್ಕೆ ಹೋಗಬೇಕಾದ ನೀರಿನ ಅಂಶ ಸರಾಗವಾಗಿ ಹೋಗದ ಕಾರಣ ಶ್ರೀಗಳಿಗೆ 11 ಸ್ಟೆಂಟ್ ಗಳನ್ನು ಅಳವಡಿಸಲಾಗಿತ್ತು. ಇಷ್ಟಾದರೂ ಮೇದೋಜ್ಜೀರಕ ಗ್ರಂಥಿಯಿಂದ ಹೋಗುತ್ತಿದ್ದ ನೀರಿನ ಅಂಶ ಗಟ್ಟಿಯಾಗಿ ನಿಲ್ಲುತ್ತಿತ್ತು. ಪರಿಣಾಮವಾಗಿ ಆ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸಿದ್ದಗಂಗಾ ಶ್ರೀಗಳಿಗೆ ಬೈಪಾಸ್ ಸರ್ಜರಿ ಅಗತ್ಯವಿತ್ತು. ಹೀಗಾಗಿ ಶಿವಕುಮಾರ ಸ್ವಾಮೀಜಿಯನ್ನು ಸರ್ಜರಿಗಾಗಿ ಶುಕ್ರವಾರದಂದು ಚೆನ್ನೈನ ರೇಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಿದ್ದಗಂಗಾ ಶ್ರೀಗಳಿಗೆ ಡಾ. ಮೊಹಮ್ಮದ್ ರೇಲಾ ನೇತೃತ್ವದಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಶ್ರೀಗಳು ಕ್ಷೇಮವಾಗಿದ್ದು, ಸುಮಾರು 8-10 ವಾರಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬರೋಬ್ಬರಿ ಎರಡೂವರೆ ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆಯ ಬಳಿಕ ನಗುಮೊಗದಿಂದ ಹೊರಬಂದ ಡಾ. ಮೊಹಮ್ಮದ್ ರೇಲಾಆಪರೇಷನ್ ಸಕ್ಸಸ್ ಎಂದಾಕ್ಷಣ ಭಕ್ತರ ಮೊಗದಲ್ಲಿ ಸಂತಸ ಮನೆ ಮಾಡಿದೆ. ಶ್ರೀಗಳನ್ನು ಸದ್ಯ ತೀವ್ರನಿಗಾ ಘಟಕದಲ್ಲಿ ಇರಿಸಲಾಗಿದ್ದು, ಇನ್ನೂ 2 ಗಂಟೆಗಳ ಕಾಲ ಐಸಿಯುನಲ್ಲೇ ಇರುತ್ತಾರೆ. ಶ್ರೀಗಳಿಗೆ ಎಚ್ಚರ ಬಂದ ಬಳಿಕ ಮತ್ತೊಮ್ಮೆ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

Video Top Stories