ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ದಿಢೀರ್‌ ಮಳೆ: ಬರದಿಂದ ಕಂಗೆಟ್ಟ ರೈತ ಕೊಂಚ ನಿರಾಳ

ಬೆಂಗಳೂರು, ಧಾರವಾಡ, ಕಲಬುರಗಿ, ಬಾಗಲಕೋಟೆ, ತುಮಕೂರು, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ ಮತ್ತಿತರ ಕಡೆ ಕೆಲಕಾಲ ಉತ್ತಮ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಎಚ್.ಕುನ್ನೂರು ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದೆ.

Sudden Rain in more than 10 districts of Karnataka grg

ಬೆಂಗಳೂರು(ನ.07):  ಹಲವು ದಿನಗಳ ಬಿಡುವಿನ ನಂತರ ರಾಜ್ಯದಲ್ಲಿ ಮಳೆ ಅಬ್ಬರಿಸಿದೆ. ಧಾರವಾಡ, ಬೆಂಗಳೂರು ಸೇರಿ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾನುವಾರ ರಾತ್ರಿಯಿಂದೀಚೆಗೆ ಕೆಲಕಾಲ ಉತ್ತಮ ಮಳೆ ಸುರಿದಿದೆ. ಈ ಮೂಲಕ ಬರದ ಬೇಗೆಯಿಂದ ಕಂಗೆಟ್ಟಿದ್ದ ರೈತರ ಮೊಗದಲ್ಲಿ ತುಸು ಮಂದಹಾಸ ಮೂಡಿಸಿದೆ.

ಬೆಂಗಳೂರು, ಧಾರವಾಡ, ಕಲಬುರಗಿ, ಬಾಗಲಕೋಟೆ, ತುಮಕೂರು, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ ಮತ್ತಿತರ ಕಡೆ ಕೆಲಕಾಲ ಉತ್ತಮ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಎಚ್.ಕುನ್ನೂರು ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದೆ.

ಬೆಂಗಳೂರಲ್ಲಿ ಭಾರೀ ಮಳೆ; ಈ ಪ್ರದೇಶಗಳ ವಾಹನ ಚಾಲಕರಿಗೆ ಪೊಲೀಸರಿಂದ ಮಹತ್ವದ ಸಂಚಾರ ಸಲಹೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಗ್ರಾಮೀಣ ಭಾಗದಲ್ಲಿ ಸತತ 2 ದಿನಗಳಿಂದ ಮಳೆಯಾಗುತ್ತಿರುವುದು ರೈತರಲ್ಲಿ ಹರ್ಷ ಮೂಡಿಸಿದರೆ. ಆದರೆ, ನಗರದಲ್ಲಿ ಸತತ 4 ಗಂಟೆ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನಲ್ಲಿ ಅಡಕೆ ತೋಟಗಳನ್ನು ರಕ್ಷಿಸಿಕೊಳ್ಳಲು ನಿರ್ಮಿಸಿಕೊಂಡಿದ್ದ ಕೃಷಿ ಹೊಂಡಗಳು ತುಂಬಿರುವುದರಿಂದ ರೈತರಲ್ಲಿ ಸಂತಸ ಮೂಡಿದೆ.

ಇನ್ನು ದಾವಣಗೆರೆಯ ಹರಿಹರ, ಹೊನ್ನಾಳಿ ಸುತ್ತಮುತ್ತ, ಬಾಗಲಕೋಟೆ ಜಿಲ್ಲೆಯಾದ್ಯಂತ ಭಾಗಶಃ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಂಪೆರೆದಿದೆ. ಕಲಬುರಗಿ ಜಿಲ್ಲೆಯಲ್ಲೂ ದಿಢೀರ್‌ ಮಳೆಗೆ ನಾಲವಾರ ಸೇರಿ ವಿವಿಧೆಡೆ ಕೆಲಕಾಲ ಜನಜೀವನ ಅಸ್ತವ್ಯಸ್ತವಾಗಿತ್ತು. ಇನ್ನು ತುಮಕೂರು, ಬೆಂಗಳೂರಿನಲ್ಲಿ ಸಂಜೆ ಸುರಿದ ಮಳೆಯ ಅಬ್ಬರಕ್ಕೆ ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವಾಹನ ಸವಾರರು ತತ್ತರಿಸುವಂತಾಯಿತು. ಕರಾವಳಿಯಲ್ಲಿ ಕಳೆದ ಮೂರುದಿನಗಳಿಂದ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Latest Videos
Follow Us:
Download App:
  • android
  • ios