ಸಕ್ಕರೆ ಕಾರ್ಖಾನೆ ಮಾಲೀಕರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳದಂತೆ ಹೊಸ ಸರ್ಕಾರಕ್ಕೆ ಸೂಚನೆ ನೀಡುವಂತೆ ರೈತ ಮುಖಂಡರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರು (ಮೇ.16) : ಸಕ್ಕರೆ ಕಾರ್ಖಾನೆ ಮಾಲೀಕರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳದಂತೆ ಹೊಸ ಸರ್ಕಾರಕ್ಕೆ ಸೂಚನೆ ನೀಡುವಂತೆ ರೈತ ಮುಖಂಡರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ಮಂಗಳವಾರ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್(Kuruburu shantakumar) ನೇತೃತ್ವದ ನಿಯೋಗ ಮನವಿ ಸಲ್ಲಿಸಿತು.
Karnataka CM: ಸಿಎಂ ಹುದ್ದೆಗಾಗಿ ಡಿಕೆಶಿ, ಸಿದ್ದು ಅಭಿಮಾನಿಗಳ ಹರಕೆ
ರಾಜ್ಯದಲ್ಲಿರುವ 78 ಸಕ್ಕರೆ ಕಾರ್ಖಾನೆಗಳ ಮಾಲೀಕರು ಎಲ್ಲ ಪಕ್ಷಗಳಲ್ಲೂ ಶಾಸಕರೇ ಆಗಿದ್ದಾರೆ. ಯಾವ ಪಕ್ಷ ಅಧಿಕಾರಕ್ಕೆ ಬಂದರೂ ಕಬ್ಬು ಬೆಳೆಯುವ ಜಿಲ್ಲೆಗಳಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೇ ಜಿಲ್ಲಾ ಉಸ್ತುವಾರಿ ಸಚಿವರಾಗುತ್ತಿದ್ದಾರೆ. ಆದ್ದರಿಂದ 30 ಲಕ್ಷ ಕಬ್ಬು ಬೆಳೆಗಾರರಿಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ. ಆದ್ದರಿಂದ ಸಕ್ಕರೆ ಕಾರ್ಖಾನೆ ಮಾಲೀಕರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡದಂತೆ ಹೊಸ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ನಿಯೋಗ ಕೋರಿತು.
ಪದೇ ಪದೆ ಆಯುಕ್ತರ ವರ್ಗಾವಣೆ ಬೇಡ:
ಸಕ್ಕರೆ ಅಭಿವೃದ್ಧಿ ಆಯುಕ್ತರು ಬೆಳೆಗಾರರ ಸಮಸ್ಯೆ ಅರ್ಥ ಮಾಡಿಕೊಂಡು ಕ್ರಮ ಕೈಗೊಳ್ಳಬೇಕು ಎಂಬ ಹಂತದಲ್ಲಿ ಪದೇ ಪದೇ ಆಯುಕ್ತರನ್ನು ಬದಲಾಯಿಸಲಾಗುತ್ತಿದೆ. ಇದರಿಂದ ಆದೇಶಗಳನ್ನು ಸಮರ್ಪಕವಾಗಿ ಜಾರಿ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಇಲಾಖೆಯ ಮುಖ್ಯಸ್ಥರನ್ನು ಕನಿಷ್ಠ ಮೂರು ವರ್ಷ ಕಡ್ಡಾಯವಾಗಿ ಕಾರ್ಯನಿರ್ವಹಿಸಲು ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಲಾಯಿತು.
Belgum constituency: ಜಿಲ್ಲೆಯ ಮೂವರಿಗೆ ಸಿಗಲಿದೆ ಪವರ್‌ಪುಲ್ ಖಾತೆ!
ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕುರುಬೂರು ಶಾಂತಕುಮಾರ್, ಬೇಡಿಕೆಗಳ ಬಗ್ಗೆ ಕಾನೂನು ರೀತಿ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲರು ಭರವಸೆ ನೀಡಿದರು ಎಂದರು.
ಮುಖಂಡರಾದ ನಾರಾಯಣರೆಡ್ಡಿ, ಪ್ರಸನ್ನಕುಮಾರ್, ಶಿವಕುಮಾರ್, ದೇವಕುಮಾರ್, ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್ ಮತ್ತಿತರರು ಹಾಜರಿದ್ದರು.
