ನಿಷೇಧಿತ ಪಿಎಫ್ಐ ಸದಸ್ಯರಿಂದ ಸುಹಾಸ್ ಶೆಟ್ಟಿ ಹತ್ಯೆ, NIA ಚಾರ್ಟ್‌ಶೀಟ್‌ನಲ್ಲಿ ಬಹಿರಂಗ, ಬಂಧಿತ 11 ಆರೋಪಿಗಳ ವಿರುದ್ದ ಎನ್ಐಎ ಚಾರ್ಜ್‌ಶೀಟ್ ಸಲ್ಲಿಸಿಲಿದೆ. ಉಗ್ರ ಚಟುವಟಿ ನಡೆಸುತ್ತಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಸದಸ್ಯರೇ ಹಿಂದೂ ಮುಖಂಡನ ಹತ್ಯೆ ಮಾಡಿರುವುದು ಬಯಲಾಗಿದೆ.

ಮಂಗಳೂರು (ಅ.31) ಮಂಗಳೂರಿನ ಬಜ್ಬೆ ಬಳಿ ಮೇ.01ರಂದು ನೆಡಿದ್ದ ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಇದೀಗ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಈ ಚಾರ್ಜ್‌ಶೀಟ್‌ನಲ್ಲಿ ಸ್ಪೋಟಕ ಅಂಶಗಳನ್ನು ಎನ್ಐಎ ಉಲ್ಲೇಖಿಸಿದೆ. ಪ್ರಮುಖವಾಗಿ ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಿ ನಿಷೇಧಗೊಂಡಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ಸದಸ್ಯರ ಕೈವಾಡ ಸ್ಪಷ್ಟವಾಗಿದೆ. ಈ ಕುರಿತು ಸ್ಫೋಟಕ ಮಾಹಿತಿಗಳನ್ನು ಎನ್ಐಎ ತನ್ನ ಚಾರ್ಜ್‌ಶೀಟ್‌ನಲ್ಲ ಉಲ್ಲೇಖಿಸಿದೆ.

Add Asianetnews Kannada as a Preferred SourcegooglePreferred

ಸುಹಾಸ್ ಶೆಟ್ಟಿ ಹತ್ಯೆ ಹಾಗೂ ಸಂಚು

ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಸುಹಾಸ್ ಶೆಟ್ಟಿ ಹತ್ಯೆ ಸಂಚಿನ ಬಗ್ಗೆ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. 2025ರ ಮೇ 1ರಂದು ಬಜಪೆ ಬಳಿ ಸುಹಾಸ್ ಶೆಟ್ಟಿ ಹತ್ಯೆ ನಡೆದಿತ್ತು. ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು ಮಾತ್ರವಲ್ಲ, ದಕ್ಷಿಣ ಕನ್ನಡದ ಹಲವು ತಾಲೂಕುಗಳು ಬಂದ್ ಆಗಿತ್ತು.ಪ್ರತಿಭಟನೆಗಳು ತೀವ್ರಗೊಂಡಿತ್ತು. ಈ ಹತ್ಯೆ ಹಿಂದೆ ಉಗ್ರ ಸಂಘಟನೆಗಳ ಕೈವಾಡವಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದ್ದ ಕಾರಣ, ಪ್ರಕರಣವನ್ನು ಗೃಹ ಇಲಾಖೆ ನಿರ್ದೇಶನದ ಮೇರೆಗೆ ಎನ್ಐಗೆ ಹಸ್ತಾಂತರ ಮಾಡಲಾಗಿತ್ತು.

ಹಲವು ತಿಂಗಳಿನಿಂದ ಸುಹಾಸ್ ಶೆಟ್ಟಿ ಫಾಲೋ ಮಾಡಿದ್ದ ಪಿಎಫ್ಐ ಸದಸ್ಯರು

ಎನ್‌ಐಎ ತನಿಖೆಯಿಂದ ಸುಹಾಸ್ ಶೆಟ್ಟಿ ಹತ್ಯೆಯ ಹಿಂದೆ ಅತೀ ದೊಡ್ಡ ಸಂಚು ಇರುವುದು ಬಹಿರಂಗವಾಗಿದೆ. ಸುಹಾಸ್ ಶೆಟ್ಟಿಯ ಚಟುವಟಿಕೆಗಳ ಮೇಲೆ ಹಲವಾರು ತಿಂಗಳ ಕಾಲ ಕಣ್ಣಿಟ್ಟಿದ್ದ ತಂಡ ಭಾರಿ ಪ್ಲಾನ್ ಮಾಡಿತ್ತು. ಸುಹಾಸ್ ಶೆಟ್ಟಿ ಹತ್ಯೆ ಎಲ್ಲಿ ಮಾಡಬೇಕು, ಹೇಗೆ ಮಾಡಬೇಕು, ತಪ್ಪಿಸಿಕೊಂಡರೆ ಏನು? ಪ್ರತಿದಾಳಿಯಾದರೆ ಹೇಗೆ? ಎಲ್ಲವೂ ಮೊದಲೇ ಪ್ಲಾನ್ ಮಾಡಲಾಗಿತ್ತು. ಹತ್ಯೆಯ ದಿನ ಆರೋಪಿಗಳಿಂದ ಎರಡು ಕಾರುಗಳು ಬಳಕೆ ಮಾಡಲಾಗಿತ್ತು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಹತ್ಯೆ ಸಂಚಿನ ರೂವಾರಿ ಅಬ್ದುಲ್ ಸಫ್ವಾನ್ ಅಲಿಯಾಸ್ ಕಳವಾರು ಸಫ್ವಾನ್

ಸುಹಾಸ್ ಶೆಟ್ಟಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಹಿಂಬಾಲಿಸಿ ಹತ್ಯೆ ಮಾಡಲಾಗಿದೆ. ಇನೋವಾ ಕಾರಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಮತ್ತೊಂದು ವಾಹನದಿಂದ ಮುಂಭಾಗ ತಡೆ ಒಡ್ಡಲಾಗಿತ್ತು. ಹೀಗಾಗಿ ಸುಹಾಸ್ ಶೆಟ್ಟಿ ತಪ್ಪಿಸಿಕೊಳ್ಳಲು ಸಾಧ್ಯವಾಗದ ರೀತಿಯಲ್ಲಿ ಸಂಚು ರೂಪಾಸಿ ಹತ್ಯೆ ಮಾಡಲಾಗಿತ್ತು. ಹತ್ಯೆ ಸಂಚಿನ ರೂವಾರಿ ಅಬ್ದುಲ್ ಸಫ್ವಾನ್ ಅಲಿಯಾಸ್ ಕಳವಾರು ಸಫ್ವಾನ್. ಈತ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI)ದ ಮಾಜಿ ಸದಸ್ಯನಾಗಿದ್ದಾನೆ. ನಿಷೇಧಿತ ಪಿಎಫ್ಐ ಸಂಘಟನೆ ಈಗಲೂ ಸಕ್ರೀಯವಾಗಿದೆ ಅನ್ನೋ ಆರೋಪಗಳಿಗೆ ಈ ಹತ್ಯೆ ಉತ್ತರ ನೀಡಿದೆ.

ಪಿಎಫ್ಐ ಸಂಘಟನೆ ಸದಸ್ಯರಿಂದ ಕೃತ್ಯ

ಕಳವಾರು ಸಫ್ವಾನ್ ಜೊತೆ ಜೊತೆಗೆ ನಿಯಾಜ್ ಅಲಿಯಾಸ್ ನಿಯಾ, ಮಹಮ್ಮದ್ ಮುಸಾಮಿರ್ ಅಲಿಯಾಸ್ ಮಹಮ್ಮದ್ ಮುಸಾಮೀರ್, ಮಹಮ್ಮದ್ @ ಮುಜಮ್ಮಿಲ್, ನೌಶಾದ್ ಅಲಿಯಾಸ್ ವಾಮಂಜೂರ್ ನೌಶಾದ್ ಅಲಿಯಾಸ್ ಚೊಟ್ಟೆ ನೌಶಾದ್ ಹಾಗೂ ಮತ್ತೊಬ್ಬ ನಿಷೇಧಿದ ಪಿಎಫ್ಐ ಸದಸ್ಯ ಆದಿಲ್ ಮಹರೂಫ್ ಸಹಕಾರ ನೀಡಿದ್ದಾರೆ.

ಹಣಕಾಸು ಒದಗಿಸಿದ್ದುಆದಿಲ್ ಮಹರೂಫ್

ಆದಿಲ್ ಮಹರೂಫ್ (ಅಲಿಯಾಸ್ ಆದಿಲ್) ಈ ಸಂಚಿಗೆ ಹಣಕಾಸು ಒದಗಿಸಿದ್ದು ತನಿಖೆಯಲ್ಲಿ ದೃಢಪಟ್ಟಿದೆ. ಆರೋಪಿಗಳೊಂದಿಗೆ ಕಲಂದರ್ ಶಾಫಿ ಅಲಿಯಾಸ್ ಮಂಡೆ ಶಾಫಿ, ಎಂ. ನಾಗರಾಜ ಅಲಿಯಾಸ್ ನಾಗ @ ಅಪ್ಪು, ರಂಜಿತ್, ಮಹಮ್ಮದ್ ರಿಜ್ವಾನ್ ಅಲಿಯಾಸ್ ರಿಜ್ಜು, ಅಜರುದ್ದೀನ್ ಅಲಿಯಾಸ್ ಅಜರ್ ಅಲಿಯಾಸ್ ಅಜ್ಜು, ಅಬ್ದುಲ್ ಖಾದರ್ ಅಲಿಯಾಸ್ ನೌಫಲ್ ವಿರುದ್ಧವೂ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.

ಅಬ್ದುಲ್ ರಜಾಕ್ ವರುದ್ದ ಮುಂದುರಿದ ತನಿಖೆ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಅಬ್ದುಲ್ ರಜಾಕ್ ವಿರುದ್ಧ ತನಿಖೆ ಮುಂದುವರಿದಿದೆ. ನಿಷೇಧಿತ ಪಿಎಫ್ಐ ಸಂಘಟನೆ ದೇಶದಲ್ಲಿ ಸಕ್ರಿಯವಾಗಿರುವುದು ಈ ಘಟನೆಯಿಂದ ದಾಖಲೆ ಲಭ್ಯವಾಗಿದೆ. ದೇಶದಲ್ಲಿ ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡಿ ಹಲವು ಕೃತ್ಯಗಳಿಗೆ ಸಂಚು ರೂಪಿಸುತ್ತಿರುವ ಆರೋಪಗಳು ಹಲವು ದಿನಗಳಿಂದ ಕೇಳಿಬರುತ್ತಿದೆ. ಇದೀಗ ಈ ಸಂಚಿನ ಹಿಂದೆ ಪಿಎಫ್ಐ ಸಂಘಟನೆಗಳ ಕೈವಾಡವಿರುವುದು ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಿಂದ ಬಯಲಾಗಿದೆ.