Asianet Suvarna News Asianet Suvarna News

ಸಿಎಂ ಪ್ರಧಾನ ಸಲಹೆಗಾರನಾಗಿ ಕನುಗೋಲು ನೇಮಕ

ಸುನೀಲ್‌ ಕನುಗೋಲು ಅವರನ್ನ ಸಿಎಂ ಸಿದ್ದರಾಮಯ್ಯ ಅವರ ಪ್ರಧಾನ ಸಲಹೆಗಾರರಾಗಿ ನೇಮಕ ಮಾಡಿ ಸರ್ಕಾರದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು

Sunil Kanugolu Appointed Chief Advisor to Karnataka CM Siddaramaiah grg
Author
First Published Jun 1, 2023, 7:27 AM IST

ಬೆಂಗಳೂರು(ಜೂ.01): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಧಾನ ಸಲಹೆಗಾರರಾಗಿ ಚುನಾವಣಾ ತಂತ್ರಗಾರ ಸುನೀಲ್‌ ಕನುಗೋಲು ನೇಮಕವಾಗಿದ್ದಾರೆ. ಸುನೀಲ್‌ ಕನುಗೋಲು ಅವರನ್ನ ಸಿಎಂ ಸಿದ್ದರಾಮಯ್ಯ ಅವರ ಪ್ರಧಾನ ಸಲಹೆಗಾರರಾಗಿ ನೇಮಕ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. 

ಸುನೀಲ್‌ ಕನುಗೋಲು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರರು ಎಂದು ನೇಮಿಸಿ ಸಂಪುಟ ದರ್ಜೆಯ ಸಚಿವ ಸ್ಥಾನಮಾನದೊಂದಿಗೆ, ಲಬ್ಯವಿರುವ ಎಲ್ಲ ಸೌಲಬ್ಯಗಳನ್ನು ಒದಗಿಸಲು ಈ ಕೂಡಲೇ ಆದೇಶ ಹೊರಡಿಸಲು ಸೂಚಿಸಿದೆ ಅಂತ ಸಿಎಂ ಮುಖ್ಯ ಕಾರ್ಯದರ್ಶಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. 

Sunil Kanugolu Appointed Chief Advisor to Karnataka CM Siddaramaiah grgSunil Kanugolu Appointed Chief Advisor to Karnataka CM Siddaramaiah grg

ಕಾಂಗ್ರೆಸ್‌ ಜಯದ ತಂತ್ರಗಳ ರೂವಾರಿ ಸುನೀಲ್‌ ಕನುಗೋಲು!

ಕಾಂಗ್ರೆಸ್‌ನ ಗೆಲುವಿನಲ್ಲಿ ಪ್ರಮುಖ ಪಾತ್ರ ಪೋಷಿಸಿದ್ದ ಕನುಗೋಲು ಚುನಾವಣಾ ತಂತ್ರಗಾರಿಕೆ ಹೆಣೆದಿದ್ದರು. ಜತೆಗೆ ಪೇಸಿಎಂನಂತಹ ಅಭಿಯಾನಗಳ ಮೂಲಕ ಹಿಂದಿನ ಸರ್ಕಾರ ಭ್ರಷ್ಟ ಸರ್ಕಾರ ಎಂದು ಜನರ ಮುಂದೆ ಬಿಂಬಿಸುವಲ್ಲಿ ಯಶಸ್ವಿಯಾಗಿದ್ದರು. ತನ್ಮೂಲಕ ಕಾಂಗ್ರೆಸ್‌ಗೆ ಲಾಭ ತಂದುಕೊಟ್ಟಿದ್ದರು. ಇದೀಗ ಸಿದ್ದರಾಮಯ್ಯ ಅವರು, ಕನುಗೋಲು ಅವರನ್ನೇ ಪ್ರಧಾನ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಾರೆ. 

Follow Us:
Download App:
  • android
  • ios