ಬೆಂಗಳೂರು, [ಡಿ.7]: ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪ ಎದುರಿಸುತ್ತಿರುವ ಪತ್ರಕರ್ತ ರವಿ ಬೆಳಗೆರೆ ಅವರ ಪ್ರಕರಣದ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. 

ಇದ್ರಿಂದ ರವಿ ಬೆಳಗೆರೆ ಅವರಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಂತಾಗಿದೆ. ರವಿ ಬೆಳಗೆರೆ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.  ಈ ಅರ್ಜಿಯನ್ನ ಇಂದು [ಶುಕ್ರವಾರ] ವಿಚಾರಣೆ ನಡೆಸಿದ ಹೈಕೋರ್ಟ್‌ ಏಕಸದಸ್ಯ ಪೀಠ, ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ.

'ಟೈಗರ್ ಜಿಂದಾ ಹೈ’ ಹೈಕೋರ್ಟ್ ಮೆಟ್ಟಿಲೇರಿದ ಬೆಳಗೆರೆ

ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ರವಿ ಬೆಳಗೆರೆ ಅವರ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿ ನ್ಯಾಯಮೂರ್ತಿ ಪಿ.ದಿನೇಶ್ ಕುಮಾರ್ ಆದೇಶಿಸಿದ್ದಾರೆ.

ಪ್ರಕರಣವು ಕಾನೂನು ಬಾಹಿರ, ಅಸಮಂಜಸ ಮತ್ತು ಸಾಕ್ಷ್ಯಾಧಾರಗಳ ಕೊರತೆಯಿಂದ ಕೂಡಿದೆ. ಹೀಗಾಗಿ ಪ್ರಕರಣ ರದ್ದುಗೊಳಿಸಬೇಕೆಂದು ಮನವಿ ಮಾಡಿದ್ದರು.