ಮುರುಘಾ ಶ್ರೀ ಮತ್ತೆ ಜೈಲಿಗೆ; ಹೈಕೋರ್ಟ್‌ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ

ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿ ಹೈಕೋರ್ಟ್‌ನಿಂದ ಜಾಮೀನು ಪಡೆದು ಹೊರಗೆ ಬಂದಿದ್ದ ಚಿತ್ರದುರ್ಗ ಮುರುಘರಾಜೇಂದ್ರ ಶರಣರನ್ನು ಪುನಃ ಜೈಲಿಗೆ ಕಳುಹಿಸುವಂತೆ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ.

supreme court cancelled Murugha seer bail on POCSO Case sat

ಬೆಂಗಳೂರು (ಏ.23): ರಾಜ್ಯದಲ್ಲಿ ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗ ಮುರುಘರಾಜೇಂದ್ರ ಶರಣರಿಗೆ ಹೈಕೋರ್ಟ್‌ ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಅಲ್ಲಿ ಪ್ರಕರಣ ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್‌ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಪುನಃ ಜೈಲಿಗೆ ಕಳುಹಿಸುವಂತೆ ಆದೇಶ ಹೊರಡಿಸಿದೆ.

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ  2022ರ ಸೆಪ್ಟೆಂಬರ್‌ 1ರಂದು ಮುರುಘಾ ಶ್ರೀ ಬಂಧನವಾಗಿತ್ತು. ಸುಮಾರು 14 ತಿಂಗಳ ಕಾಲ ಜೈಲಿನಲ್ಲಿದ್ದ ಮುರುಘಾ ಶ್ರೀ ಕಳೆದ ನವೆಂಬರ್ 16ರಂದು ಜೈಲಿನಿಂದ ಹೊರಗೆ ಬಂದಿದ್ದರು. ಇದಾದ ನಂತರ ಚಿತ್ರದುರ್ಗ ಮಠದ ಅಧಿಕಾರವನ್ನು ಹಿಡಿಯಲೂ ಮುಂದಾಗಿದ್ದರು. ಆದರೆ, ಪೋಕ್ಸೋ ಕೇಸ್ ಇದ್ದರೂ ಹೈಕೋರ್ಟ್‌ನಿಂದ ಜಾಮೀನಿನ ಮೇಲೆ ಹೊರಗೆ ಬಂದು ಸಾಕ್ಷಿ ನಾಶ ಮಾಡುತ್ತಿದ್ದಾರೆ ಎಂದು ಪೋಕ್ಸೋ ಕೇಸ್ ದಾಖಲಿಸಿದ ಅರ್ಜಿದಾರರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಈ ಅರ್ಜಿಯನ್ನು ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್‌ ಮುರುಘಾ ಶ್ರೀಗೆ ಹೈಕೋರ್ಟ್‌ನಿಂದ ನೀಡಲಾಗಿದ್ದ ಜಾಮೀನು ರದ್ದುಗೊಳಿಸಿ ಪುನಃ ಜೈಲಿಗೆ ಕಳಿಸುವಂತೆ ಸೂಚನೆಯನ್ನು ನೀಡಿದೆ.

ಅಪ್ರಾಪ್ತ ಬಾಲಕಿ ಲೈಂಗಿಕ ದೌರ್ಜನ್ಯ ಪ್ರಕರಣ; ಮುರುಘಾ ಶ್ರೀ ವಿರುದ್ಧದ ಅತ್ಯಾಚಾರ ಆರೋಪ ರದ್ದುಗೊಳಿಸಲು ಹೈಕೋರ್ಟ್ ನಕಾರ

ಇನ್ನು ಮುರುಘ ಶ್ರೀಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಮುನಃ ಅವರನ್ನು 4 ತಿಂಗಳ ಕಾಲಾವಧಿಗೆ ಜೈಲಿಗೆ ಕಳುಹಿಸಬೇಕು. ಈ ಅವಧಿಯೊಳಗೆ ಸಂತ್ರಸ್ಥೆಯರು ಹಾಗೂ ಪೋಷಕರ ವಿಚಾರಣೆಗೆ ಮುಗಿಸಬೇಕು. ಒಂದು ವೇಳೆ ಪ್ರಕರಣದ ವಿಚಾರಣೆಯು ಮುಗಿಯದ್ದಿದ್ದ ಪಕ್ಷದಲ್ಲಿ ಜೈಲು ಶಿಕ್ಷೆ ಅವಧಿಯನ್ನು ವಿಸ್ತರಣೆ ಮಾಡುವ ಕುರಿತು ಸುಪ್ರೀಂ ಕೋರ್ಟ್‌ ಗಮನಕ್ಕೆ ತರಬೇಕು ಎಂದು ಆದೇಶಿಸಲಾಗಿದೆ. ಈ ಆದೇಶಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀ ಒಂದು ವಾರದೊಳಗೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್‌ನಿಂದ ಸೂಚನೆ ನೀಡಲಾಗಿದೆ. 

ಮುರುಘಾ ಸ್ವಾಮೀಜಿಗೆ ಬಿಗ್‌ ರಿಲೀಫ್‌: 2ನೇ ಕೇಸ್‌ನಲ್ಲಿಯೂ ಜಾಮೀನು ಮಂಜೂರು

ಅತ್ಯಾಚಾರ ಆರೋಪವನ್ನೇ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದ ಮುರುಘಾ ಶ್ರೀ: ಮುರುಘಾ ಶ್ರೀಗಳು ಜೈಲಿನಿಂದ ಹೊರಗೆ ಬರುತ್ತಿದ್ದಂತೆಯೇ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯನ್ನು ಕಳೆದ ಮಾರಚ್‌ ತಿಂಗಳಲ್ಲಿ ವಿಚಾರಣೆ ಮಾಡಿದ್ದ ಹೈಕೋರ್ಟ್‌ ಮುರುಘಾ ಶರಣರ ಅರ್ಜಿಯನ್ನು ನಿರಾಕರಿಸಿತ್ತು. ಈ ವೇಳೆ ಪೋಕ್ಸೋ ಪ್ರಕರಣಗಳ ವಿಶೇಷ ನ್ಯಾಯಾಲಯ ಪ್ರಾಸಿಕ್ಯೂಷನ್‌ನ 'ಪೋಸ್ಟ್ ಆಫೀಸ್' ಆಗಿ ಕಾರ್ಯ ನಿರ್ವಹಿಸಬಾರದು ಎಂದ ಹೈಕೋರ್ಟ್, ಧಾರ್ಮಿಕ ಸಂಸ್ಥೆಗಳ(ದುರುಪಯೋಗ ತಡೆ) ಕಾಯ್ದೆಯ ನಿಬಂಧನೆಗಳಿಗೆ ಸಂಬಂಧಿಸಿದಂತೆ ಶ್ರೀಗಳ ವಿರುದ್ಧದ ಆರೋಪಗಳನ್ನು ಮರುಪರಿಶೀಲಿಸುವಂತೆ ವಿಶೇಷ ನ್ಯಾಯಾಲಯಕ್ಕೆ ಸೂಚಿಸಿದೆ. ಅಲ್ಲದೆ ಶ್ರೀಗಳ ವಿರುದ್ಧದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಗೆ ಸಂಬಂಧಿಸಿದಂತೆ ಕಾನೂನಿನ ಪ್ರಕಾರ ಮುಂದುವರಿಯುವಂತೆ ಆದೇಶಿಸಿತ್ತು.

Latest Videos
Follow Us:
Download App:
  • android
  • ios