ಧಾರವಾಡ(ಜ.23):  ಹುಬ್ಬಳ್ಳಿ-ಧಾರವಾಡ ಬೈಪಾಸ್‌ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ 13 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿಯನ್ನ ನೀಡುವಂತೆ ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. 

ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರವಾದ ಮಾಹಿತಿಯನ್ನ ನೀಡುವಂತೆ ರಸ್ತೆ ಸುರಕ್ಷತೆ ಕುರಿತು ಸುಪ್ರೀಂ ಕೋರ್ಟ್ ಸಮಿತಿ ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಅವರಿಗೆ ಸೂಚನೆಯನ್ನ ನೀಡಿದೆ. 

ಧಾರವಾಡ ಅಪಘಾತದ ಘೋರ ಚಿತ್ರಗಳು..ಬಾಲ್ಯದ ಗೆಳತಿಯರೆಲ್ಲ ದುರಂತಕ್ಕೆ ಬಲಿ

ಜ.15 ರಂದು ಧಾರವಾಡ ತಾಲೂಕಿನ ಇಟಿಗಟ್ಟಿ ಗ್ರಾಮದ ಬೈಪಾಸ್‌ನಲ್ಲಿ ಟೆಂಪೊ‌ ಟ್ಯಾವಲರ್‌ ಮತ್ತು ಟಿಪ್ಪರ್‌ ನಡುವೆ ಡಿಕ್ಕಿ ಸಂಭವಿಸಿದ‌ ಪರಿಣಾಮ 12 ಜನ ಮೃತಪಟ್ಟಿದ್ದರು.  ದಾವಣಗೆರೆ ನಗರದ ಸೇಂಟ್ ಪೌಲ್ಸ್ ಕಾನ್ವೆಂಟ್ ಶಾಲೆಯ ಹಳೆ ವಿದ್ಯಾರ್ಥಿಗಳೆಲ್ಲ ಸೇರಿಕೊಂಡು ಸೇರಿ ಗೋವಾಗೆ ಪ್ರವಾಸಕ್ಕೆ ಹೊರಟಿದ್ದರು. ಧಾರವಾಡ ತಾಲೂಕಿನ ಇಟಿಗಟ್ಟಿ ಗ್ರಾಮದ ಬೈಪಾಸ್‌ನಲ್ಲಿ ನಡೆದ ಭೀಕರ ಅಪಘಾತದಲ್ಲಿ 13 ಮಂದಿ ಪ್ರಾಣವನ್ನ ಕಳೆದುಕೊಂಡಿದ್ದರು. 

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ವಿವಿಧ ಗಣ್ಯಮಾನ್ಯರು ಸಂತಾಪ ಸೂಚಿಸಿದ್ದರು.