ಬೇಲೇಕೇರಿ ಅದಿರು ರಫ್ತು ಕೇಸ್‌: ವಿಚಾರಣೆಗೆ ಸುಪ್ರೀಂ ಸೂಚನೆ

ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ಪೀಠ, ಅಕ್ರಮವಾಗಿ ರಫ್ತು ಆಗಿರುವ ಕಬ್ಬಿಣದ ಅದಿರಿನ ಪ್ರಮಾಣವನ್ನು ಬದಿಗಿಟ್ಟು ಈ ಪ್ರಕರಣದ ಕುರಿತು ಹೊಸದಾಗಿ ವಿಚಾರಣೆ ನಡೆಸುವಂತೆ ಹೇಳಿದೆ. 

Supreme Court Suggest to Karnataka High Court inquiry on Belekeri Ore Export Case grg

ನವದೆಹಲಿ(ಡಿ.17):  ಬೇಲೇಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ರಫ್ತಿಗೆ ಸಂಬಂಧಿಸಿ ಎಂಎಸ್‌ಪಿಎಲ್‌ ಲಿಮಿಟೆಡ್ ಕಂಪನಿ ಮತ್ತು ಇತರರ ವಿರುದ್ಧ ಸಿಬಿಐ ದಾಖಲಿಸಿದ್ದ ಕ್ರಿಮಿನಲ್ ಕೇಸ್ ಅನ್ನು ರದ್ದು ಮಾಡಿದ್ದ ಕರ್ನಾಟಕ ಹೈಕೋರ್ಟ್‌ ಪೀಠದ ಆದೇಶವನ್ನು ಸುಪ್ರೀಂ ಕೋರ್ಟ್‌ ಇದೀಗ ಬದಿಗೆ ಸರಿಸಿ, ಹೊಸದಾಗಿ ವಿಚಾರಣೆ ನಡೆಸುವಂತೆ ಧಾರವಾಡ ಹೈಕೋರ್ಟ್ ಪೀಠಕ್ಕೆ ಸೂಚಿಸಿದೆ. 

ಕರ್ನಾಟಕ ಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ಪೀಠ, ಅಕ್ರಮವಾಗಿ ರಫ್ತು ಆಗಿರುವ ಕಬ್ಬಿಣದ ಅದಿರಿನ ಪ್ರಮಾಣವನ್ನು ಬದಿಗಿಟ್ಟು ಈ ಪ್ರಕರಣದ ಕುರಿತು ಹೊಸದಾಗಿ ವಿಚಾರಣೆ ನಡೆಸುವಂತೆ ಹೇಳಿದೆ. 

Explainer: ಏನಿದು ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ, ರಾಜ್ಯ ರಾಜಕಾರಣದಲ್ಲಿ ಯಾಕಿಷ್ಟು ಇಂಪಾರ್ಟೆಂಟ್‌!

ನಾವು ಹೈಕೋರ್ಟ್ ತೀರ್ಪನ್ನು ಬದಿಗಿಟ್ಟಿದ್ದೇವೆ. ಪ್ರಕರಣಕ್ಕೆ ಸಂಬಂಧಿಸಿ ವಾದಿ-ಪ್ರತಿವಾದಿಗಳು ಫೆ.3, 2025ರಂದು ಹೈಕೋರ್ಟ್ ಮುಂದೆ ಹಾಜರಾಗಬೇಕು. ನಾವು ಪ್ರಕರಣದ ಮೆರಿಟ್ ಕುರಿತು ಇಲ್ಲಿ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ ಎಂದು ಹೈಕೋರ್ಟ್‌ ನ್ಯಾಯಾಧೀಶ ಎಂ.ನಾಗಪ್ರಸನ್ನ ಅವರ ಡಿ.12ರ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ 11 ಅರ್ಜಿಗಳ ಕುರಿತ ವಿಚಾರಣೆ ವೇಳೆ ತಿಳಿಸಿತು. 

ಧಾರವಾಡ ಪೀಠದ ತೀರ್ಪು: 

ಅಕ್ರಮ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿ ಎಂಎಸ್‌ಪಿಎಲ್‌ ಮತ್ತು ಇತರರ ವಿರುದ್ಧ ನಡೆಯುತ್ತಿದ್ದ ಸಿಬಿಐ ತನಿಖೆಯನ್ನು ರದ್ದು ಮಾಡಿ ಹೈಕೋರ್ಟ್‌ನ ಧಾರವಾಡ ಪೀಠ ಆದೇಶ ಹೊರಡಿಸಿತ್ತು. ಸುಪ್ರೀಂ ಕೋರ್ಟ್ ಸಿಬಿಐಗೆ 50 ಸಾವಿರ ಮೆಟ್ರಿಕ್‌ ಟನ್‌ಗೂ ಅಧಿಕ ಕಬ್ಬಿಣದ ಅದಿರು ರಫ್ತನ ಪ್ರಕರಣದ ತನಿಖೆಗಷ್ಟೇ ಅಧಿಕಾರ ನೀಡಿದೆ. ಇಲ್ಲಿ ಸಿಬಿಐ ಜಾರ್ಜ್‌ಶೀಟ್‌ ಪ್ರಕಾರ ಕಂಪನಿವಿರುದ್ಧ 39,480 ಮೆಟ್ರಿಕ್ ಟನ್ ಅದಿರು ರಫ್ತು ಮಾಡಿರುವ ಆರೋಪ ಇದೆ. ಹೀಗಾಗಿ ಈ ಪ್ರಕರಣ ಸಿಬಿಐ ವ್ಯಾಪ್ತಿಗೇ ಬರುವುದಿಲ್ಲ, ಹೀಗಾಗಿ ಪ್ರಕರಣದ ಜಾರ್ಜ್‌ಶೀಟ್‌ಗೂ ಯಾವುದೇ ಮಾನ್ಯತೆ ಇರುವುದಿಲ್ಲ. ಹಾಗೆಂದ ಮಾತ್ರಕ್ಕೆ ಎಂಎಸ್‌ಪಿಎಲ್ ವಿರುದ್ಧ ತನಿಖೆ ನಡೆಯಬಾರದು ಎಂಬುದು ನಮ್ಮ ಅಭಿಪ್ರಾಯವಲ್ಲ ಎಂದು ಹೈಕೋರ್ಟ್ ಹೇಳಿತ್ತು. ಜತೆಗೆ, 50 ಸಾವಿರ ಮೆಟ್ರಿಕ್ ಟನ್ ಮಿತಿಗಿಂತ ಕೆಳಗಿನ ಅದಿರು ಪ್ರಕರಣಗಳ ತನಿಖೆಯನ್ನು ಕರ್ನಾಟಕ ಲೋಕಾಯುಕ್ತ ಸ್ಥಾಪಿಸಿದ ವಿಶೇಷ ತನಿಖಾ ತಂಡದಿಂದ ನಡೆಸಬಹುದಾಗಿದೆ ಎಂದಿತ್ತು.

ಬೇಲೇಕೇರಿ ಅದಿರು ನಾಪತ್ತೆ 6 ಕೇಸಲ್ಲೂ ಶಾಸಕ ಸತೀಶ್ ಸೈಲ್ ಅಪರಾಧಿ; 7 ಮಂದಿ ಜೈಲುಪಾಲು!

ಬೇಲೇಕೇರಿ ಅದಿರು ನಾಪತ್ತೆ ಕೇಸ್: ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು (ಅ.26): ರಾಜ್ಯದಲ್ಲಿ 2010ರಲ್ಲಿ ನಡೆದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಆರೋಪಿಗಳಾದ ಕಾರವಾರದ ಶಾಸಕ ಸತೀಶ್ ಸೈಲ್ ಹಾಗೂ  ಅರಣ್ಯಾಧಿಕಾರಿ ಆಗಿದ್ದ ಮಹೇಶ್ ಬಿಳೆಯ ಅವರಿಗೆ ಮೊದಲ ಮತ್ತು 2ನೇ ಪ್ರಕರಣಗಳಲ್ಲಿ ತಲಾ 7 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿತ್ತು.

ಬೆಲೇಕೆರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಅಧೀನದ ತನಿಖಾ ಸಂಸ್ಥೆ ಸಿಬಿಐನಿಂದ ಬೇಲೇಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ವಾದ, ಪ್ರತಿವಾದ ಆಲಿಸಿ ಅ.24ರಂದು ಅಂತಿಮ ಆದೇಶವನ್ನು ಹೊರಡಿಸಿದ್ದರು. ಈ ವೇಳೆ ಒಟ್ಟು 6 ಪ್ರಕರಣಗಳಲ್ಲಿ ಶಾಸಕ ಸತೀಶ್ ಸೈಲ್ ಹಾಗೂ ಅರಣ್ಯ ಸಂರಕ್ಷಣಾಧಿಕಾರಿ ಆಗಿದ್ದ ಮಹೇಶ್ ಬಿಳೆಯಿ ಅಪರಾಧಿ ಎಂದು ಆದೇಶ ಹೊರಡಿಸಲಾಗಿತ್ತು. ಇದೀಗ ಶಿಕ್ಷೆ ವಿಧಿಸಲಾಗಿದೆ. ಮೊದಲ ಕೇಸಿನಲ್ಲಿ ಶಾಸಕ ಸತೀಶ್ ಸೈಲ್ ಹಾಗೂ  ಅರಣ್ಯಾಧಿಕಾರಿ ಆಗಿದ್ದ ಮಹೇಶ್ ಬಿಳೆಯ ಅವರಿಗೆ ತಲಾ 7 ವರ್ಷ ಶಿಕ್ಷೆ ಹಾಗೂ ಎಲ್ಲಾ ಆರೋಪಿಗಳಿಗೂ ಸೇರಿ 9.60 ಕೋಟಿ ರೂ. ದಂಡ ವಿಧಿಸಿತ್ತು. 

Latest Videos
Follow Us:
Download App:
  • android
  • ios