ಚಿತ್ರದುರ್ಗ, (ಫೆ.13): ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಮುಂದೆಯೇ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದ ವೇಳೆ ಶರಣರ ಸುಜ್ಞಾನ ಮಂಟಪದ ತಿಪ್ಪೇರುದ್ರ ಸ್ವಾಮೀಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಬಿಜೆಪಿಗೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ ಜಯ ಮೃತ್ಯುಂಜಯ ಸ್ವಾಮೀಜಿ

 ತಕ್ಷಣ ಪೋಲೀಸರು ಜಾಗೃತವಾಗಿ ಸ್ವಾಮೀಜಿ ಕೈಯಲ್ಲಿದ್ದ ವಿಷದ ಬಾಟಲಿಯನ್ನು ಕಸಿದುಕೊಂಡಿದ್ದಾರೆ. ಈ ಮೂಲಕ ಅಪಾಯದಿಂದ ಪಾರು ಮಾಡಿದ್ದು, ಸದ್ಯ ಸ್ವಾಮೀಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 

ಕುಣಿಗಲ್, ಚಿತ್ರದುರ್ಗ ಯೋಗವನ ಬೆಟ್ಟದ ಪೀಠಾಧ್ಯಕ್ಷ ಸ್ಥಾನ ತಪ್ಪಿದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಪಕ್ಷದ ಕಚೇರಿ ಸಮೀಪ ನಡೆದ ಈ ಅಹಿತಕರ ಘಟನೆಯಿಂದಾಗಿ ಸಚಿವ ಶ್ರೀರಾಮುಲು ಮಾತ್ರ ಕಕ್ಕಾಬಿಕ್ಕಿಯಾದರು.

ಅಧಿಕಾರ ಹಾಗೂ ಹಣದ ಬಲದಿಂದಾಗಿ ತನಗೆ ನ್ಯಾಯಯುತವಾಗಿ ಸಿಗಬೇಕಿದ್ದ ಪೀಠಾಧಿಕಾರ ಕೈತಪ್ಪಿದೆ ಎಂದು ಸ್ವಾಮೀಜಿ ಸಚಿವ ರಾಮುಲು ಅವರ ಬಳಿ ಅಳಲು ತೋಡಿಕೊಂಡಿದ್ದಾರೆ.