Asianet Suvarna News Asianet Suvarna News

ಎಸ್‌ಟಿಗೆ ಮತ್ತೊಂದು ಸಮುದಾಯ ಸೇರಿಸಲು ನಿರ್ಧಾರ : ಕೋಟಾ

  •  ಪ್ರವರ್ಗ-1ರಲ್ಲಿನ ತಳವಾರ ಸಮುದಾಯವನ್ನು ಪರಿಶಿಷ್ಟವರ್ಗಕ್ಕೆ ಸೇರಿಸಬೇಕು ಎಂಬುದು ಬಹುದಿನಗಳ ಬೇಡಿಕೆ
  •  ಸಿಎಂ ತಳವಾರ ಸಮುದಾಯವನ್ನು ಪರಿಶಿಷ್ಟವರ್ಗಕ್ಕೆ ಸೇರಿಸಲು ನಿರ್ಧರಿಸಿದ್ದಾರೆ
Talavara may be included in Scheduled Tribes list snr
Author
Bengaluru, First Published Oct 27, 2021, 7:36 AM IST

ಸಿಂದಗಿ (ಅ.27): ಪ್ರವರ್ಗ-1ರಲ್ಲಿನ ತಳವಾರ (talavar) ಸಮುದಾಯವನ್ನು ಪರಿಶಿಷ್ಟವರ್ಗಕ್ಕೆ (ST) ಸೇರಿಸಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದೆ.

 ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಸಭೆ ನಡೆಸಿದ್ದು, ತಳವಾರ ಸಮುದಾಯವನ್ನು ಪರಿಶಿಷ್ಟವರ್ಗಕ್ಕೆ ಸೇರಿಸಲು ನಿರ್ಧರಿಸಿದ್ದಾರೆ. ಶೀಘ್ರದಲ್ಲಿ ನ್ಯಾಯಯುತ ಬೇಡಿಕೆ ಈಡೇರಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ (Kota shrinivas Poojary) ಭರವಸೆ ನೀಡಿದ್ದಾರೆ. 

ತಳವಾರ ಸಮಾಜದ ಸಮಾವೇಶದಲ್ಲಿ ಮಾತನಾಡಿದ ಅವರು, ಅರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಬಡ ತಳವಾರ ಸಮಾಜಕ್ಕೆ ಚುನಾವಣೆ (Election) ನಂತರ ಖಂಡಿತ ನ್ಯಾಯ ಸಿಗುತ್ತದೆ ಎಂದು ಹೇಳಿದರು.

ಮಾಜಿ ಸಿಎಂಗಳಿಂದ ಪಂಚಮಸಾಲಿಗೆ ಅನ್ಯಾಯ: ಸ್ವಪಕ್ಷದವರ ವಿರುದ್ಧ ಗುಡುಗಿದ ಯತ್ನಾಳ್‌

ತಳವಾರ ಸಮಾಜದ ಮುಖಂಡ, ಮಾಜಿ ಸಚಿವ ಬಾಬುರಾವ್‌ ಚಿಂಚನಸೂರ (Baburao Chinchanasur) ಮಾತನಾಡಿ, ದೀರ್ಘಕಾಲ ನಮ್ಮನ್ನು ವೋಟ್‌ ಬ್ಯಾಂಕ್‌ (Vote Bank) ಆಗಿ ಬಳಸಿಕೊಂಡ ಕಾಂಗ್ರೆಸ್‌ ಇಷ್ಟುದಿನಗಳವರೆಗೆ ನಮ್ಮ ಬಹುವರ್ಷದ ಬೇಡಿಕೆಗೆ ಕಿವಿಗೊಡಲಿಲ್ಲ. 

ದಿ.ವಿಠ್ಠಲ ಹೆರೂರ ಸಮಾಜಕ್ಕಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟಿದ್ದರು. ಅಂಥವರನ್ನು ಕೂಡ ಕಾಂಗ್ರೆಸ್‌ ಕಡೆಗಣಿಸಿತ್ತು. ಕಾಂಗ್ರೆಸ್ಸಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರೂ ಹಾವು-ಮುಂಗುಸಿ ಇದ್ದಂತೆ. ಅವೆರಡೂ ಖಾಲಿ ಮಡಿಕೆಗಳು, ಅವರಿಬ್ಬರೂ ಎಂದಿಗೂ ಒಂದಾಗಲಾರರು ಎಂದು ದೂರಿದರು.

ಸರ್ಕಾರಕ್ಕೆ ಎಚ್ಚರಿಕೆ

 

 ತಮ್ಮನ್ನು ಹಿಂದುಳಿದ ವರ್ಗಗಳ ಪ್ರವರ್ಗ 2(ಎ)ಗೆ ಸೇರಿಸಬೇಕೆಂದು ಬಲಿಷ್ಠ ವೀರಶೈವ ಪಂಚಮಸಾಲಿ(Panchamasali) ಸಮುದಾಯದವರು ನಡೆಸುತ್ತಿರುವ ಒತ್ತಡಕ್ಕೆ ಸರ್ಕಾರ ಯಾವುದೇ ಕಾರಣಕ್ಕೂ ಮಣಿಯಬಾರದು. ಮಣಿದರೆ ಸರ್ಕಾರಕ್ಕೆ ಬಿಸಿ ತಟ್ಟದೆ ಇರುವುದಿಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ ಎಸ್‌.ದ್ವಾರಕಾನಾಥ್‌(Dr CS Dwarakanath) ಎಚ್ಚರಿಸಿದ್ದಾರೆ.

ಪಂಚಮಸಾಲಿಗಳ ಮೀಸಲು(Reservation) ಹೋರಾಟವನ್ನು ವಿರೋಧಿಸಿ ಪ್ರತಿ ಹೋರಾಟ ರೂಪಿಸಿರುವ ‘ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ’ ಶನಿವಾರ ಕುಮಾರಕೃಪ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ರಾಜ್ಯದ(Karnataka) ಅತಿ ಹಿಂದುಳಿದ ಜನಾಂಗದ ಮಠಾಧೀಶರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವೀರಶೈವ ಪಂಚಮಸಾಲಿ ಸಮಾಜದ ಪೀಠಾಧಿಪತಿಗಳು(Swamjiis) ಈ ಹೋರಾಟದ ಮುಂಚೂಣಿಯಲ್ಲಿರುವುದು ದುರದೃಷ್ಟಕರ. ಇವರ ಹಿಂದೆ ಪ್ರಬಲ ಸಮುದಾಯದ ಉದ್ಯಮಿಗಳು, ರಾಜಕಾರಣಿಗಳು(Politicians) ಬಲಿಷ್ಠ ಸಂಘಟಕರಿದ್ದಾರೆ. ಪ್ರವರ್ಗ 1ರಲ್ಲಿರುವ 95 ಹಾಗೂ ಪ್ರವರ್ಗ 2(ಎ)ದಲ್ಲಿರುವ 102 ಸಮುದಾಯಗಳು ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ದುರ್ಬಲವಾಗಿವೆ ಎಂಬುದನ್ನು ಮನಗಂಡು ಈ ದಬ್ಬಾಳಿಕೆಗೆ ಮುಂದಾಗಿದ್ದಾರೆ. ಇದಕ್ಕೆ ಮಣಿದರೆ ಸರ್ಕಾರಕ್ಕೆ(Government) ಬಿಸಿ ಮುಟ್ಟಿಸದೇ ಇರುವುದಿಲ್ಲ. ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿವಾಗಿ ಹಾಗೂ ರಾಜಕೀಯವಾಗಿ ಅತ್ಯಂತ ಬಲಶಾಲಿಯಾಗಿರುವ ಪಂಚಮಸಾಲಿ ಸಮುದಾಯದಲ್ಲಿ ಭೂಮಾಲಿಕರು, ದೊಡ್ಡಮಟ್ಟದ ಕೃಷಿಕರು, ಮುಂಚೂಣಿ ಕೈಗಾರಿಕೋದ್ಯಮಿಗಳು, ಪ್ರಬಲ ರಾಜಕಾರಣಿಗಳಿದ್ದಾರೆ. ಈ ಸಮುದಾಯದವರನ್ನು ಕುಶಲಕರ್ಮಿ ಹಾಗೂ ಕುಲವೃತ್ತಿಗಳನ್ನು ನಂಬಿ ಬದುಕುತ್ತಿರುವ ಹಿಂದುಳಿದ ಸಮುದಾಯದ ಜತೆ ಸೇರಿಸುವುದು ದೊಡ್ಡ ಅನ್ಯಾಯ ಎಂದರು.

Follow Us:
Download App:
  • android
  • ios