ಲಕ್ಷ್ಮೀ ಹೆಬ್ಬಾಳ್ಕರ್, ಅಭಯ್ ಪಾಟೀಲ್ ನಡುವೆ ಮಾತಿನ ಚಕಮಕಿ| ಒಳಚರಂಡಿ ಮತ್ತು ಶುದ್ಧೀಕರಣ ಘಟಕ ಸ್ಥಾಪನೆಗೆ ಸಂಬಂಧಿಸಿದಂತೆ ವಾಗ್ವಾದ| ಬೆಳಗಾವಿ ಡಿಸಿ ಕಚೇರಿಯಲ್ಲಿ ನಡೆದ ರೈತರ ಸಭೆಯಲ್ಲಿ ಶಾಸಕರ ಜಟಾಪಟಿ| ಶಾಸಕರ ವಾಗ್ವಾದ ಕಂಡು ಮೌನಕ್ಕೆ ಶರಣಾದ ಸಚಿವ ಸತೀಶ್ ಜಾರಕಿಹೊಳಿ 

ಬೆಳಗಾವಿ(ಜ.05): ಒಳಚರಂಡಿ ಮತ್ತು ಶುದ್ಧೀಕರಣ ಘಟಕ ಸ್ಥಾಪಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ್ ಪಾಟೀಲ್ ನಡುವೆ ವಾಗ್ವಾದ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಳಗಾವಿ ಡಿಸಿ ಕಚೇರಿಯಲ್ಲಿ ನಡೆದ ರೈತರ ಸಭೆಯಲ್ಲಿ ಹೆಬ್ಬಾಳ್ಕರ್ ಮತ್ತು ಪಾಟೀಲ್ ನಡುವೆ ಮಾತಿನ ಚಕಮಕಿ ನಡೆದಿದೆ. 

ಒಳಚರಂಡಿ ಮತ್ತು ಶುದ್ಧೀಕರಣ ಘಟಕ ಸ್ಥಾಪನೆಗೆ ಹಲಗಾ ಗ್ರಾಮದ ಬದಲಾಗಿ ಬೆಳಗಾವಿ ದಕ್ಷಿಣದಲ್ಲಿ ಇರುವ ಪಾಲಿಕೆ ಜಾಗೆಯಲ್ಲಿ ಮಾಡಲು ಅವಕಾಶವಿದೆ ಎಂದು ಹೆಬ್ಬಾಳ್ಕರ್ ಹೇಳಿದರು.

"

ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಶಾಸಕ ಅಭಯ ಪಾಟೀಲ್, ನನ್ನ ಮತಕ್ಷೇತ್ರದಲ್ಲಿ ಮೂಗು ತೂರಿಸುವುದು ಬೇಡ ಎಂದು ಏರುಧ್ವನಿಯಲ್ಲಿ ಹೇಳಿದರು.

ಇನ್ನು ಇಬ್ಬರು ಶಾಸಕರ ಕಿತ್ತಾಟ ಕಂಡು ಸಚಿವ ಸತೀಶ ಜಾರಕಿಹೊಳಿ ಮತ್ತು ಸಂಸದರು ಮೌನಕ್ಕೆ ಶರಣಾದರು.<br/>