Asianet Suvarna News Asianet Suvarna News

ಮೇಕೆದಾಟು ಯೋಜನೆ: ಕರ್ನಾಟಕ ವಿರುದ್ಧ ಮತ್ತೆ ತಕರಾರು ತೆಗೆದ ತಮಿಳುನಾಡು

ಕರ್ನಾಟಕದ ಕನಸಿನ ಕೂಸಾದ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಮತ್ತೆ ತಕರಾರು ತೆಗೆದಿದೆ. ಈ ಹಿಂದೆ ಕರ್ನಾಟಕ ಸರ್ಕಾರ ಯೋಜನೆ ಕುರಿತು ಸಲ್ಲಿಸಿರುವ ಡಿಪಿಆರ್ ವರದಿಯನ್ನು ತಿರಸ್ಕಾರ ಮಾಡಬೇಕು ಎಂದು ಕೇಂದ್ರಕ್ಕೆ ಪತ್ರ ಬರೆದಿದೆ. 

Tamil Nadu CM writes to Union ministers objecting to Karnataka Mekedatu project
Author
Bengaluru, First Published Oct 10, 2019, 4:24 PM IST

ಬೆಂಗಳೂರು/ನವದೆಹಲಿ, (ಅ.10): ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಮತ್ತೆ ವಿರೋಧ ವ್ಯಕ್ತಪಡಿಸಿದೆ. ಕರ್ನಾಟಕ ಸರ್ಕಾರ ಯೋಜನೆ ಕುರಿತು ಸಲ್ಲಿಸಿರುವ ಡಿಪಿಆರ್ ತಿರಸ್ಕಾರ ಮಾಡಬೇಕು ಎಂದು ತಮಿಳುನಾಡು ಸಿಎಂ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್‌ ಅವರಿಗೆ ಪತ್ರ  ಬರೆದಿದ್ದಾರೆ.

ಮೇಕೆದಾಟು ಯೋಜನೆ ಸಾಧಕ-ಬಾಧಕಗಳೇನು?

ಮೇಕೆದಾಟುವಿನಲ್ಲಿ ಕುಡಿಯುವ ನೀರಿಗಾಗಿ ಜಲಾಶಯ ನಿರ್ಮಾಣ ಮಾಡುವ ಕುರಿತು ವಿವರ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕೇಂದ್ರ ಜಲ ಆಯೋಗ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿತ್ತು.

ಮೇಕೆದಾಟು ಡ್ಯಾಮ್‌ : ಸಚಿವರಾಗುತ್ತಿದ್ದಂತೆ ಡಿವಿಎಸ್ ಗುಡ್ ನ್ಯೂಸ್ 

ಆದ್ರೆ, ಇದೀಗ ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್‌ಗೆ ಪತ್ರ ಬರೆದಿದ್ದು, 10/7/2019ರಂದು ಸರ್ಕಾರದ  ಮನವಿಯನ್ನು ಪುರಸ್ಕರಿಸಬೇಕು. ಯೋಜನೆಗೆ ಒಪ್ಪಿಗೆ ನೀಡಬಾರದು ಎಂದು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಕಾವೇರಿಗೆ ಮತ್ತೊಂದು ಡ್ಯಾಂ : ತಮಿಳುನಾಡಿಗೆ ಹಿನ್ನಡೆ

ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆ ವಿರೋಧಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿಯನ್ನು ಸಲ್ಲಿಸಿದೆ. ಅರ್ಜಿಯ ವಿಚಾರಣೆ ಇನ್ನೂ ಬಾಕಿ ಇದೆ. ಆದ್ದರಿಂದ, ಕರ್ನಾಟಕ ಸರ್ಕಾರ ಸಲ್ಲಿಸಿರುವ ಡಿಪಿಆರ್ ತಿರಸ್ಕರಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಮೇಕೆದಾಟು ಯೋಜನೆ: ಮುಳುಗುತ್ತಾ ಮುತ್ತತ್ತಿ, ಶಿಂಷಾ ಜಲ ವಿದ್ಯುತ್‌ ಘಟಕ..?

 ಮೇಕೆದಾಟು ಯೋಜನೆ ಕಾವೇರಿ ನ್ಯಾಯಾಧೀಕರಣ ಮತ್ತು ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಉಲ್ಲಂಘನೆಯಾಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಕೇರಳ ಸರ್ಕಾರ ಸಹ ಯೋಜನೆಗೆ ವಿರೋಧ ವ್ಯಕ್ತಪಡಿಸಿದೆ ಎಂದು ತಮಿಳುನಾಡು ಸಿಎಂ ಕೆ. ಪಳನಿಸ್ವಾಮಿ ಅವರು ಪ್ರಕಾಶ್ ಜಾವಡೇಕರ್‌ ಅವರಿಗೆ ಪತ್ರ ಬರೆದಿದ್ದಾರೆ.

5,912 ಕೋಟಿ ವೆಚ್ಚದ ಯೋಜನೆ
5,912 ಕೋಟಿ ಯೋಜನೆ ಕುಡಿಯುವ ನೀರು, ನೀರಾವರಿ ಹಾಗೂ ವಿದ್ಯುತ್‌ ಉತ್ಪಾದನೆ ಉದ್ದೇಶಕ್ಕಾಗಿ 5,912 ಕೋಟಿ ರುಪಾಯಿ ವೆಚ್ಚದಲ್ಲಿ ಮೇಕೆದಾಟು ಅಣೆಕಟ್ಟೆನಿರ್ಮಾಣ. 441.2 ಮೀಟರ್‌ ಎತ್ತರದ ಅಣೆಕಟ್ಟೆಯಲ್ಲಿ 66.5 ಟಿಎಂಸಿ ನೀರು ಸಂಗ್ರಹಿಸುವ ಯೋಜನೆ ಇದಾಗಿದೆ. 440 ಮೀ.ನಲ್ಲಿ 64 ಟಿಎಂಸಿ ನೀರು ಸಂಗ್ರಹಿಸಲು ಅವಕಾಶವಿದೆ. 7.7 ಟಿಎಂಸಿ ನೀರು ಅಣೆಕಟ್ಟೆಯಲ್ಲಿ ಡೆಡ್‌ ಸ್ಟೋರೇಜ್‌ ಇರುತ್ತದೆ. 400 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಯ ಗುರಿ ಹೊಂದಲಾಗಿದೆ.

Tamil Nadu CM writes to Union ministers objecting to Karnataka Mekedatu project

Follow Us:
Download App:
  • android
  • ios